PM Kisan Update: ದೇಶದ ಕೋಟ್ಯಾಂತರ ರೈತರಿಗೆ ನಾಳೆ ಪ್ರಧಾನಿ ವತಿಯಿಂದ ಉಡುಗೊರೆ, ಮಾಹಿತಿ ನೀಡಿದ ಕೃಷಿ ಸಚಿವಾಲಯ
PM Kisan Scheme Update: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಕೋಟ್ಯಾಂತರ ರೈತರಿಗೆ ಭಾರಿ ಉಡುಗೊರೆಯೊಂದನ್ನು ನೀಡಲಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಕೃಷಿ ಸಚಿವಾಲಯ, ದೇಶದ ಕೋಟ್ಯಾಂತರ ರೈತರ ಖಾತೆಗೆ ಪ್ರಧಾನಿ ಮೋದಿ ಹಣ ವರ್ಗಾವಣೆ ಮಾಡಲಿದ್ದಾರೆ ಎಂದಿದೆ.
PM Kisan 12th Installment Update: ದೀಪಾವಳಿಗೂ ಮುನ್ನ ದೇಶದ ಕೋಟ್ಯಾಂತರ ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೊಡ್ಡ ಉಡುಗೊರೆಯನ್ನು ನೀಡಲಿದ್ದಾರೆ. ಒಂದು ವೇಳೆ ನೀವೂ ಕೂಡ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭಾವಿಗಳಾಗಿದ್ದು, 12ನೇ ಕಂತಿನ ಹಣ ಬಿಡುಗಡೆಗೆ ಕಾಯುತ್ತಿದ್ದರೆ, ನಿಮ್ಮ ಖಾತೆಗೆ ನಾಳೆ ಅಂದರೆ ಸೋಮವಾರ ರೂ.2000 ವರ್ಗಾವಣೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈಗಲೇ ಫಲಾನುಭವಿಗಳ ಪಟ್ಟಿಯನ್ನು ನೋಡಿ ಅದರಲ್ಲಿ ನಿಮ್ಮ ಹೆಸರು ಇದೆಯೋ ಅಥವಾ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಿ.
ಹೇಳಿಕೆ ಬಿಡುಗಡೆ ಮಾಡಿದ ಕೇಂದ್ರ ಕೃಷಿ ಸಚಿವಾಲಯ
ಕೇಂದ್ರ ಕೃಷಿ ಸಚಿವಾಲಯ ಹೊರಡಿಸಿದ ಹೇಳಿಕೆಯ ಪ್ರಕಾರ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ರಾಜಧಾನಿಯ ಪುಸಾದಲ್ಲಿರುವ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ (IARI) ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ರೈತರ ಖಾತೆಗೆ 12ನೇ ಕಂತಿನ 16,000 ಕೋಟಿ ರೂ.ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದೆ.
2 ದಿನಗಳ ಸಮ್ಮೇಳನ
ಕೃಷಿ ಸಚಿವಾಲಯದಿಂದ ಬಂದ ಮಾಹಿತಿಯ ಪ್ರಕಾರ, ಪ್ರಧಾನಿ ಮೋದಿ ಅವರು ಅಕ್ಟೋಬರ್ 17 ರಂದು ಎರಡು ದಿನಗಳ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ ರೈತರು ಮತ್ತು ಕೃಷಿ ಸ್ಟಾರ್ಟ್‌ಅಪ್‌ಗಳನ್ನು ಮುಂದಕ್ಕೆ ಕೊಂಡೊಯ್ಯಲಿದ್ದಾರೆ. ಇದರೊಂದಿಗೆ, ಅವರು ರೈತರ ಆದಾಯವನ್ನು ಹೆಚ್ಚಿಸಲು ಜನರಿಗೆ ಕರೆ ನೀಡಲಿದ್ದಾರೆ.
ಪಿಎಂ ಕಿಸಾನ್ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಈ ರೀತಿ ಪರಿಶೀಲಿಸಿ
>> ಇದಕ್ಕಾಗಿ ಮೊದಲು ನೀವು PM ಕಿಸಾನ್ ಅವರ ವೆಬ್‌ಸೈಟ್ https://pmkisan.gov.in/ ಗೆ ಹೋಗಬೇಕು.
>> ಈಗ ಮುಖಪುಟದಲ್ಲಿ ಮೆನು ಬಾರ್‌ನಲ್ಲಿ ರೈತರ ಕಾರ್ನರ್ ಮೇಲೆ ಕ್ಲಿಕ್ ಮಾಡಿ.
>> ಈಗ ಫಲಾನುಭವಿ ಸ್ಥಿತಿ ಆಯ್ಕೆಯನ್ನು ಕ್ಲಿಕ್ ಮಾಡಿ.
>> ಹೊಸ ಪುಟ ತೆರೆಯುತ್ತದೆ, ನಂತರ ನೀವು ರಾಜ್ಯಗಳ ಡ್ರಾಪ್-ಡೌನ್ ಮೆನುವಿನಿಂದ ನಿಮ್ಮ ರಾಜ್ಯವನ್ನು ಆಯ್ಕೆ ಮಾಡಬೇಕು.
>> ಇದರ ನಂತರ, ಎರಡನೇ ಟ್ಯಾಬ್‌ನಲ್ಲಿ ಜಿಲ್ಲೆ, ಮೂರನೇ ಟ್ಯಾಬ್ ನಲ್ಲಿ ತಾಲೂಕು ಅಥವಾ ಉಪ ಜಿಲ್ಲೆ, ನಾಲ್ಕನೇ ಬ್ಲಾಕ್ ಮತ್ತು ಐದನೇಯಲ್ಲಿ ನಿಮ್ಮ ಗ್ರಾಮವನ್ನು ಆಯ್ಕೆ ಮಾಡಿ.
>> ಈ ಎಲ್ಲಾ ಮಾಹಿತಿಯನ್ನು ನಮೂದಿಸಿದ ಬಳಿಕ ನೀವು ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಇದರ ನಂತರ ಸಂಪೂರ್ಣ ಪಟ್ಟಿಯು ನಿಮ್ಮ ಮುಂದೆ ತೆರೆದುಕೊಳ್ಳುತ್ತದೆ.
ಇದನ್ನೂ ಓದಿ-New toll policy: ವಾಹನ ಸವಾರರಿಗೊಂದು ಭಾರಿ ಸಂತಸದ ಸುದ್ದಿ
ಮೇ ತಿಂಗಳಲ್ಲಿ 11ನೇ ಕಂತು ವರ್ಗಾವಣೆಯಾಗಿದೆ
ಮೇ ತಿಂಗಳ ಆರಂಭದಲ್ಲಿ ಪ್ರಧಾನಿ ಮೋದಿ ಅವರು ರೈತರಿಗೆ 11 ನೇ ಕಂತಿನ 21,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದಾರೆ ಎಂಬುದು ಇಲ್ಲಿ ಗಮನಾರ್ಹ. ಈ ಯೋಜನೆಯಡಿಯಲ್ಲಿ ರೈತರ ಖಾತೆಗೆ ವರ್ಷದ ಮೊದಲ ಕಂತನ್ನು ಏಪ್ರಿಲ್ 1 ರಿಂದ ಜುಲೈ 31 ರ ನಡುವೆ, ಎರಡನೇ ಕಂತನ್ನು ಆಗಸ್ಟ್ 1 ರಿಂದ ನವೆಂಬರ್ 30 ರ ನಡುವೆ ಮತ್ತು ಮೂರನೇ ಕಂತಿನ ಹಣವನ್ನು ಡಿಸೆಂಬರ್ 1 ಮತ್ತು ಮಾರ್ಚ್ 31 ರ ನಡುವೆ ವರ್ಗಾಯಿಸಲಾಗುತ್ತದೆ.
ಇದನ್ನೂ ಓದಿ-ಕೇಂದ್ರ ನೌಕರರಿಗೆ ಭರ್ಜರಿ ದೀಪಾವಳಿ ಗಿಫ್ಟ್ : ಶೇ.12 ರಷ್ಟು ಸಂಬಳ ಹೆಚ್ಚಳ!
3 ಕಂತುಗಳಲ್ಲಿ ಹಣ ಬಿಡುಗಡೆ
ಪ್ರಧಾನಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ, ಸರ್ಕಾರವು ದೇಶದ ಕೋಟ್ಯಾಂತರ ರೈತರ ಖಾತೆಗೆ ವಾರ್ಷಿಕ 6000 ರೂಪಾಯಿಗಳ ಆರ್ಥಿಕ ಸಹಾಯವನ್ನು ನೀಡುತ್ತದೆ. ಇದರಲ್ಲಿ 2000-2000 ರೂಪಾಯಿಗಳ ಒಟ್ಟು ಮೂರು ಕಂತುಗಳಲ್ಲಿ ಹಣ ವರ್ಗಾವಣೆಯಾಗುತ್ತದೆ. ಇದುವರೆಗೆ ಸರ್ಕಾರ 11 ಕಂತುಗಳ ಹಣವನ್ನು ರೈತರ ಖಾತೆಗೆ ವರ್ಗಾಯಿಸಿದೆ ಎಂಬುದು ಇಲ್ಲಿ ಉಲ್ಲೇಖನೀಯ.
ಇದನ್ನೂ ನೋಡಿ-
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.