PMGKAY: ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ 'ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ' ಅಡಿಯಲ್ಲಿ, ಕೇಂದ್ರ ಸರ್ಕಾರ ಮತ್ತು ವಿವಿಧ ರಾಜ್ಯ ಸರ್ಕಾರಗಳು ಬಡವರಿಗೆ ಉಚಿತ ಅಥವಾ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳನ್ನು ಒದಗಿಸುತ್ತಿವೆ. ಇದೀಗ ಪಡಿತರ ಚೀಟಿದಾರರಿಗೆ ಉಚಿತ ಧಾನ್ಯ ವಿತರಣೆಯಲ್ಲಿ ಯಾವುದೇ ಅಡಚಣೆಯಾಗದಂತೆ ಎಫ್‌ಸಿಐನಿಂದ ನೇರವಾಗಿ ಅಕ್ಕಿ ಖರೀದಿಸಲು ಕೇಂದ್ರ ಮುಂದಾಗಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ (Union Food and Consumer Affairs Minister Pralhad Joshi) ತಿಳಿಸಿದ್ದಾರೆ.  


COMMERCIAL BREAK
SCROLL TO CONTINUE READING

ಇ-ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವ ಅಗತ್ಯವಿಲ್ಲ!
ವಾಸ್ತವವಾಗಿ, 2023ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ (Guarantee schemes) ಒಂದಾದ ಅನ್ನಭಾಗ್ಯ ಯೋಜನೆಗಾಗಿ ಕೇಂದ್ರ ಸರ್ಕಾರದಿಂದ ಅಕ್ಕಿಗಾಗಿ ಬೇಡಿಕೆ ಇಟ್ಟಿತ್ತು. ಆದರೆ, ಸಿಎಂ ಸಿದ್ದರಾಮಯ್ಯ (CM Siddaramaiah)  ನೇತೃತ್ವದ ಕಾಂಗ್ರೆಸ್ ಸರ್ಕಾರದ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿತ್ತು. 


ವಾಸ್ತವವಾಗಿ, ಜೂನ್ 2023 ರಲ್ಲಿ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (OMSS) ಅಡಿಯಲ್ಲಿ ಕೇಂದ್ರದ ಪೂಲ್‌ನಿಂದ ರಾಜ್ಯ ಸರ್ಕಾರಗಳಿಗೆ ಅಕ್ಕಿ ಮತ್ತು ಗೋಧಿ ಮಾರಾಟ ಮಾಡುವುದನ್ನು ಕೇಂದ್ರವು ನಿಲ್ಲಿಸಿತ್ತು. ಇದೀಗ, ಈ ಕುರಿತಂತೆ ಮಾಹಿತಿ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರಗಳು ಪ್ರತಿ ಕ್ವಿಂಟಲ್‌ಗೆ 2,800 ರೂಪಾಯಿ ದರದಲ್ಲಿ ಕೇಂದ್ರ ಪೂಲ್‌ನಿಂದ ನೇರವಾಗಿ ಅಕ್ಕಿ ಖರೀದಿಸಬಹುದು. ಇದಕ್ಕಾಗಿ, ಇ-ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವ ಅಗತ್ಯವಿಲ್ಲ. ಇದುವರೆಗೂ ಯಾವುದೇ ರಾಜ್ಯದಿಂದ ಬೇಡಿಕೆ ಬಂದಿಲ್ಲ ಎಂದು ಮಾಹಿತಿ ನೀಡಿದ್ದಾರೆ. 


ಇದನ್ನೂ ಓದಿ- Income Tax Refund Status ಅನ್ನು ಪ್ಯಾನ್ ಕಾರ್ಡ್ ಬಳಸಿ ಆನ್‌ಲೈನ್‌ನಲ್ಲಿ ಹೀಗೆ ಪರಿಶೀಲಿಸಿ


ಕೇಂದ್ರ ಸರ್ಕಾರದ ಈ ತೀರ್ಮಾನಕ್ಕೆ ಇದೇ ಪ್ರಮುಖ ಕಾರಣ: 
ಲಭ್ಯವಿರುವ ಮಾಹಿತಿಯ ಪ್ರಕಾರ, ಆಗಸ್ಟ್ 1, 2024 ರಿಂದ ಇ-ಹರಾಜಿನಲ್ಲಿ ಭಾಗವಹಿಸದೆ ರಾಜ್ಯಗಳು ಉಚಿತ ಮಾರುಕಟ್ಟೆ ಮಾರಾಟ ಯೋಜನೆ (ದೇಶೀಯ) ಅಡಿಯಲ್ಲಿ ಎಫ್‌ಸಿಐನಿಂದ ಅಕ್ಕಿ ಖರೀದಿಸಬಹುದು. ಹೊಸ ಖರೀದಿ ಅವಧಿ ಪ್ರಾರಂಭವಾಗುವ ಮೊದಲು ಸ್ಟಾಕ್ ಅನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರದಿಂದ  ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.


'ಭಾರತ್' ಬ್ರಾಂಡ್‌ನಲ್ಲಿ ('Bharat' Brand) ಗೋಧಿ ಹಿಟ್ಟು ಮತ್ತು ಅಕ್ಕಿ ಮಾರಾಟ ಮುಂದುವರೆಯಲಿದೆ. ಎಂದು ಸಹ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. 


ಪಿಎಂಜಿಕೆಎವೈ ಯೋಜನೆಯಡಿ ಸುಮಾರು 81.35 ಕೋಟಿ ಫಲಾನುಭವಿ ಕುಟುಂಬಗಳಿಗೆ ಉಚಿತ ಆಹಾರ ಧಾನ್ಯ ವಿತರಣೆ: 
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ)  ಯಲ್ಲಿ ಜನವರಿ 1, 2024 ರಿಂದ ಐದು ವರ್ಷಗಳವರೆಗೆ ಸುಮಾರು 81.35 ಕೋಟಿ ಫಲಾನುಭವಿ ಕುಟುಂಬಗಳಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡುವುದನ್ನು ಮುಂದುವರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ 11.80 ಲಕ್ಷ ಕೋಟಿ ರೂ. ಆರ್ಥಿಕ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. 


ಇದನ್ನೂ ಓದಿ- 8ನೇ ತರಗತಿವರೆಗಷ್ಟೇ ಶಾಲೆ !ಪುಟ್ಟದೊಂದು ಗೂಡಿನಲ್ಲಿ ವ್ಯಾಪಾರ !ಆದರೆ ಇಂದು 78,000 ಕೋಟಿಯ ಸಾಮ್ರಾಜ್ಯದ ಒಡೆಯ !40 ಕ್ಕೂ ಹೆಚ್ಚು ದೇಶಗಳಲ್ಲಿ ವ್ಯಾಪಾರ


ಎಥೆನಾಲ್ ಉತ್ಪಾದನಾ ಸಾಮರ್ಥ್ಯವು ವರ್ಷಕ್ಕೆ 1,589 ಕೋಟಿ ಲೀಟರ್‌ಗೆ ಏರಿಕೆ: 
2023-24ನೇ ಹಣಕಾಸು ವರ್ಷದಲ್ಲಿ 497 ಲಕ್ಷ ಟನ್ ಆಹಾರ ಧಾನ್ಯಗಳನ್ನು ವಿತರಿಸಲಾಗಿದ್ದು, ಈ ವಿತ್ತೀಯ ವರ್ಷದಲ್ಲಿ ಜೂನ್‌ವರೆಗೆ 125 ಲಕ್ಷ ಟನ್‌ಗಳಷ್ಟಾಗಿದೆ. ಎಥೆನಾಲ್ ಉತ್ಪಾದನಾ ಸಾಮರ್ಥ್ಯವು ವರ್ಷಕ್ಕೆ 1,589 ಕೋಟಿ ಲೀಟರ್‌ಗೆ ಏರಿಕೆಯಾಗಿದ್ದು ಇದು ದೇಶದ ದೇಶೀಯ ಎಥೆನಾಲ್ ಅಗತ್ಯವನ್ನು ಪೂರೈಸಲು ಅನುಕೂಲವಾಗಲಿದೆ ಎಂದು  ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.