ಉಚಿತ ರೇಷನ್ ಬೇಕಿದ್ದರೆ ಕೂಡಲೇ ಈ ಕೆಲಸ ಮಾಡಿ
ರೇಷನ್ ಕಾರ್ಡ್ ಲೇಟೆಸ್ಟ್ ಸುದ್ದಿ: ಅಗತ್ಯವಿರುವರಿಗೆ ಯಾವುದೇ ತೊಂದರೆ ಇಲ್ಲದೆ ಪಡಿತರ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು ಒನ್ ನೇಷನ್ ಒನ್ ರೇಷನ್ ಕಾರ್ಡ್ ಎಂಬ ಮಹಾತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದ ಗ್ರಾಹಕರು ದೇಶಾದ್ಯಂತ ಯಾವುದೇ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಪಡಿತರವನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ.
ರೇಷನ್ ಕಾರ್ಡ್ ಲೇಟೆಸ್ಟ್ ಸುದ್ದಿ: ಕರೋನಾ ಸಾಂಕ್ರಾಮಿಕ ಸಮಯದಲ್ಲಿ , ಬಡ ಕುಟುಂಬಗಳಿಗೆ ಉಚಿತ ಪಡಿತರವನ್ನು ಒದಗಿಸುವ ಉದ್ದೇಶದಿಂದ ಸರ್ಕಾರ ಒನ್ ನೇಷನ್ ಒನ್ ರೇಷನ್ ಕಾರ್ಡ್ ಎಂಬ ಮಹಾತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೊಳಿಸಿದೆ. ಇದರಿಂದಾಗಿ ದೇಶಾದ್ಯಂತ ಲಕ್ಷಾಂತರ ಜನರು ಪ್ರಯೋಜನ ಪಡೆದಿದ್ದಾರೆ. ಆದರೆ, ಇನ್ನು ಮುಂದೆಯೂ ನೀವು ಸರ್ಕಾರದ ಈ ಸೌಲಭ್ಯದ ಲಾಭ ಪಡೆಯಲು ಬಯಸುವುದಾದರೆ ಅದಕ್ಕಾಗಿ ಕೂಡಲೇ ಒಂದು ಪ್ರಮುಖ ಕೆಲಸವನ್ನು ಪೂರ್ಣಗೊಳಿಸಬೇಕು. ಸರ್ಕಾರದಿಂದ ಉಚಿತ ಪಡಿತರ ಸೌಲಭ್ಯವನ್ನು ಪಡೆಯಲು ಪಡಿತರ ಚೀಟಿದಾರರು ಈಗ ರೇಷನ್ ಕಾರ್ಡ್ ಅನ್ನು ಆಧಾರ್ ಸಂಖ್ಯೆ ಜೊತೆಗೆ ಲಿಂಕ್ ಮಾಡುವುದು ಅತ್ಯಗತ್ಯವಾಗಿದೆ.
ವಾಸ್ತವವಾಗಿ, ಬಡ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ಸರ್ಕಾರವು ಒನ್ ನೇಷನ್ ಒನ್ ರೇಷನ್ ಎಂಬ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆ ಅಡಿಯಲ್ಲಿ, ಪಡಿತರ ಚೀಟಿದಾರರು ದೇಶಾದ್ಯಂತ ಯಾವುದೇ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ನಿಮ್ಮ ಪಡಿತರ ಚೀಟಿಯಿಂದ ಪಡಿತರವನ್ನು ತೆಗೆದುಕೊಳ್ಳಬಹುದು. ಇದು ಮುಂದಿನ ದಿನಗಳಲ್ಲಿ ಇಡೀ ವ್ಯವಸ್ಥೆಯಲ್ಲಿ ಹೆಚ್ಚು ಪಾರದರ್ಶಕತೆಯನ್ನು ತರುವ ನಿರೀಕ್ಷೆಯಿದೆ. ನಿಮ್ಮ ಪಡಿತರ ಚೀಟಿಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡದಿದ್ದರೆ, ಮುಂದಿನ ದಿನಗಳಲ್ಲಿ ಸಮಸ್ಯೆಗಳು ಎದುರಾಗಬಹುದು.
ಇದನ್ನೂ ಓದಿ- ರೇಷನ್ ಕಾರ್ಡ್ ಹೊಸ ನಿಯಮ, ಇಂತಹವರು ಕೂಡಲೇ ನಿಮ್ಮ ಕಾರ್ಡ್ ಸರೆಂಡರ್ ಮಾಡಿ ಇಲ್ಲವೇ....
ಪಡಿತರ ಚೀಟಿ ಹೊಂದಿರುವ ಸಾವಿರಾರು ಕುಟುಂಬಗಳಿದ್ದರೂ ಕಾರಣಾಂತರಗಳಿಂದ ಬಹುತೇಕ ಜನರು ಇನ್ನೂ ಸಹ ರೇಷನ್ ಕಾರ್ಡ್ ಜೊತೆಗೆ ಆಧಾರ್ ಲಿಂಕ್ ಮಾಡಿಲ್ಲ. ಅಂತಹವರಲ್ಲಿ ನೀವೂ ಒಬ್ಬರಾಗಿದ್ದರೆ ನಿಮ್ಮ ಪಡಿತರ ಚೀಟಿಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲು ನಿಮಗೆ ಇನ್ನೂ ಸಾಧ್ಯವಾಗದಿದ್ದರೆ, ಸಾಧ್ಯವಾದಷ್ಟು ಬೇಗ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ. ನೀವು ಆಫ್‌ಲೈನ್ ಮತ್ತು ಆನ್‌ಲೈನ್‌ನಲ್ಲಿ ಆಧಾರ್‌ನೊಂದಿಗೆ ಲಿಂಕ್ ಮಾಡಬಹುದು. ಆಧಾರ್ ಮತ್ತು ರೇಷನ್ ಕಾರ್ಡ್ ಅನ್ನು ಲಿಂಕ್ ಮಾಡುವ ಪ್ರಕ್ರಿಯೆಯನ್ನು ತಿಳಿಯೋಣ.
ಪಡಿತರ ಚೀಟಿಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದು ಹೇಗೆ?
1. ಮೊದಲನೆಯದಾಗಿ ಆಧಾರ್ ವೆಬ್‌ಸೈಟ್ uidai.gov.in ಗೆ ಭೇಟಿ ನೀಡಿ.
2. ಇಲ್ಲಿ 'ಸ್ಟಾರ್ಟ್ ನೌ' ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
3. ಇಲ್ಲಿ, ನಿಮ್ಮ ವಿಳಾಸ ಮತ್ತು ಜಿಲ್ಲೆಯ ವಿವರಗಳನ್ನು ಭರ್ತಿ ಮಾಡಿ.
4. ಇದರ ನಂತರ 'ರೇಷನ್ ಕಾರ್ಡ್ ಬೆನಿಫಿಟ್' ಆಯ್ಕೆಯನ್ನು ಕ್ಲಿಕ್ ಮಾಡಿ.
5. ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ, ರೇಷನ್ ಕಾರ್ಡ್ ಸಂಖ್ಯೆ, ಇ-ಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆ ಇತ್ಯಾದಿಗಳನ್ನು ನಮೂದಿಸಿ.
6. ಅದನ್ನು ಭರ್ತಿ ಮಾಡಿದ ನಂತರ, ನೋಂದಾಯಿತ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ.
7. ನೀವು ಒಟಿಪಿ ಅನ್ನು ನಮೂದಿಸಿದ ತಕ್ಷಣ, ನಿಮ್ಮ ಪರದೆಯ ಮೇಲೆ ಪ್ರಕ್ರಿಯೆ ಪೂರ್ಣಗೊಂಡ ಸಂದೇಶವನ್ನು ನೀವು ಪಡೆಯುತ್ತೀರಿ.
8. ಈ ಪ್ರಕ್ರಿಯೆಯ ಪೂರ್ಣಗೊಂಡ ನಂತರ, ನಿಮ್ಮ ಆಧಾರ್ ಅನ್ನು ಪರಿಶೀಲಿಸಲಾಗುತ್ತದೆ. ನಂತರ ಆಧಾರ್ ಮತ್ತು ಪಡಿತರ ಚೀಟಿಯನ್ನು ಲಿಂಕ್ ಮಾಡಲಾಗುತ್ತದೆ.
ನೀವೂ ಈ ತಪ್ಪು ಮಾಡಿದ್ದರೆ ಕ್ಷಣಾರ್ಧದಲ್ಲಿ ರದ್ದಾಗಲಿದೆ ಪಡಿತರ ಚೀಟಿ , ಹೊಸ ನಿಯಮ ಏನು ಹೇಳುತ್ತದೆ ತಿಳಿಯಿರಿ
ಆಧಾರ್ ಅನ್ನು ಆಫ್‌ಲೈನ್‌ನಲ್ಲಿ ಲಿಂಕ್ ಮಾಡುವುದು ಹೇಗೆ?
ಆನ್ಲೈನ್ ಮೂಲಕ ಮಾತ್ರವಲ್ಲದೆ ಆಫ್‌ಲೈನ್‌ನಲ್ಲಿಯೂ ಪಡಿತರ ಚೀಟಿಯೊಂದಿಗೆ ಆಧಾರ್ ಲಿಂಕ್ ಮಾಡಬಹುದು. ಇದಕ್ಕಾಗಿ, ಮೊದಲು ಅಗತ್ಯವಿರುವ ದಾಖಲೆಗಳನ್ನು ಪಡಿತರ ಚೀಟಿ ಕೇಂದ್ರದಲ್ಲಿ ಸಲ್ಲಿಸಬೇಕಾಗುತ್ತದೆ. ಆಧಾರ್ ಕಾರ್ಡ್ ನಕಲು, ಪಡಿತರ ಚೀಟಿಯ ನಕಲು ಮತ್ತು ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಇದಕ್ಕೆ ಅಗತ್ಯ ದಾಖಲೆಗಲಾಗಿದೆ. ಇದಲ್ಲದೆ, ಪಡಿತರ ಚೀಟಿ ಕೇಂದ್ರದಲ್ಲಿ ನಿಮ್ಮ ಆಧಾರ್ ಕಾರ್ಡ್‌ನ ಬಯೋಮೆಟ್ರಿಕ್ ಡೇಟಾವನ್ನು ಸಹ ಪರಿಶೀಲಿಸಬಹುದು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ