Ration Card: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್

Ration Card Update: ದೇಶಾದ್ಯಂತ ಬಡ ಮತ್ತು ಕಡಿಮೆ ಆದಾಯ ಹೊಂದಿರುವ ಕುಟುಂಬಗಳಿಗೆ ಆಹಾರ ಭದ್ರತೆಯನ್ನು ಒದಗಿಸುವ ಉದ್ದೇಶದಿಂದ ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಪ್ರಾರಂಭಿಸಿತು. 

Written by - Yashaswini V | Last Updated : Jun 12, 2024, 11:12 AM IST
  • ಕೆಲವರು ಒಂದಕ್ಕಿಂತ ಅಧಿಕ ರೇಷನ್ ಕಾರ್ಡ್ ಹೊಂದಿದ್ದು, ವಿವಿಧೆಡೆ ಉಚಿತ ಪಡಿತರ ಚೀಟಿಯ ಲಾಭ ಪಡೆಯುತ್ತಿದ್ದಾರೆ.
  • ಇದಲ್ಲದೆ, ಪಡಿತರ ಚೀಟಿಗಳಲ್ಲಿ ಮೃತರ ಹೆಸರನ್ನು ತೆಗೆಯದೆ ಸರ್ಕಾರದ ಸವಲತ್ತುಗಳನ್ನು ಪಡೆಯಲಾಗುತ್ತಿದೆ ಎಂಬ ಬಗ್ಗೆ ಹಲವು ದೂರುಗಳನ್ನು ಸ್ವೀಕರಿಸಲಾಗಿದೆ.
  • ಇಂತಹ ಆಕ್ರಮಗಳನ್ನು ತಡೆಗಟ್ಟಲು ಹಾಗೂ ಅಗತ್ಯವಿರುವವರಿಗೆ ಪಡಿತರ ಚೀಟಿ ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ, ಪಡಿತರ ಚೀಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ.
Ration Card: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್  title=

Aadhaar Ration Card Linking: ನೀವು ಪಡಿತರ ಚೀಟಿದಾರರಾಗಿದ್ದರೆ ನಿಮಗಾಗಿ ಮಹತ್ವದ ಮಾಹಿತಿಯೊಂದಿದೆ. ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದೆ. ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಪಡೆಯಲು ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, ಕೇಂದ್ರ ಸರ್ಕಾರ ಪಡಿತರ ಮತ್ತು ಆಧಾರ್ ಲಿಂಕಿಂಗ್ ಗೆ ನಿಗಡಿಗೊಳಿಸಿದ್ದ ಗಡುವನ್ನು ಮತ್ತೊಮ್ಮೆ ವಿಸ್ತರಿಸಿದೆ. 

ರೇಷನ್ ಕಾರ್ಡ್-ಆಧಾರ್ ಲಿಂಕ್ ಮಾಡಲು ಮೂರು ತಿಂಗಳ ಗಡುವು ವಿಸ್ತರಣೆ: 
ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಮೋದಿ ಸರ್ಕಾರ (Modi Govt),  ಆಧಾರ್ ಮತ್ತು ರೇಷನ್ ಕಾರ್ಡ್ ಲಿಂಕ್ ಮಾಡಲು ಮೂರು ತಿಂಗಳವರೆಗೆ ಗಡುವು ವಿಸ್ತರಿಸಿದೆ. ಈ ಬಗ್ಗೆ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಆಧಾರ್-ರೇಷನ್ ಕಾರ್ಡ್ ಲಿಂಕ್ ಮಾಡಲು ಜೂನ್ 30ರವರೆಗೆ ನಿಗಡಿಗೊಳಿಸಿದ್ದ ಗಡುವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ. 

ಇದನ್ನೂ ಓದಿ- UPI Transaction Limit: ಒಂದು ದಿನದಲ್ಲಿ ಯುಪಿಐ ಮೂಲಕ ಎಷ್ಟು ಹಣ ಪಾವತಿಸಬಹುದು?

"ಒಂದು ರಾಷ್ಟ್ರ-ಒಂದು ಪಡಿತರ ಚೀಟಿ" ! 
ಕೋವಿಡ್-19 ಸಂದರ್ಭದಲ್ಲಿ ಕೇಂದ್ರ ಸರ್ಕಾರ ಪಡಿತರ ಚೀಟಿದಾರರಿಗೆ (Ration Card) ಅನುಕೂಲವಾಗುವಂತೆ "ಒಂದು ರಾಷ್ಟ್ರ-ಒಂದು ಪಡಿತರ ಚೀಟಿ" (One Nation-One Ration) ಅನ್ನು ಘೋಷಿಸಿದೆ. ಇದರ ಅಧಿಯಲ್ಲಿ ಸರ್ಕಾರದ ಪ್ರಯೋಜನಗಳನ್ನು ಪಡೆಯಲು ರೇಷನ್ ಕಾರ್ಡ್ ಅನ್ನು  ಆಧಾರ್‌ನೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. 

ವಾಸ್ತವವಾಗಿ, ಕೆಲವರು ಒಂದಕ್ಕಿಂತ ಅಧಿಕ ರೇಷನ್ ಕಾರ್ಡ್ ಹೊಂದಿದ್ದು,  ವಿವಿಧೆಡೆ ಉಚಿತ ಪಡಿತರ ಚೀಟಿಯ ಲಾಭ ಪಡೆಯುತ್ತಿದ್ದಾರೆ. ಇದಲ್ಲದೆ, ಪಡಿತರ ಚೀಟಿಗಳಲ್ಲಿ ಮೃತರ ಹೆಸರನ್ನು ತೆಗೆಯದೆ ಸರ್ಕಾರದ ಸವಲತ್ತುಗಳನ್ನು ಪಡೆಯಲಾಗುತ್ತಿದೆ ಎಂಬ ಬಗ್ಗೆ ಹಲವು ದೂರುಗಳನ್ನು ಸ್ವೀಕರಿಸಲಾಗಿದೆ. ಇಂತಹ ಆಕ್ರಮಗಳನ್ನು ತಡೆಗಟ್ಟಲು ಹಾಗೂ ಅಗತ್ಯವಿರುವವರಿಗೆ ಪಡಿತರ ಚೀಟಿ ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ, ಪಡಿತರ ಚೀಟಿಗೆ ಆಧಾರ್ ಕಾರ್ಡ್ ಲಿಂಕ್ (Ration Aadhaar Link) ಮಾಡುವುದನ್ನು ಕಡ್ಡಾಯಗೊಳಿಸಿದೆ. 

ಇದನ್ನೂ ಓದಿ- ನಿಮ್ಮ ಸಮ್ಮತಿ ಇಲ್ಲದೆಯೇ ಬ್ಯಾಂಕ್ ಕ್ರೆಡಿಟ್ ಕಾರ್ಡ್ ನೀಡಿದ್ಯಾ? ಈ ರೀತಿ ಮಾಡಿ

ಇದೀಗ ಆಧಾರ್-ರೇಷನ್ ಕಾರ್ಡ್ ಲಿಂಕ್ ಮಾಡಲು ಸರ್ಕಾರವು ಇನ್ನೂ ಮೂರು ತಿಂಗಳವರೆಗೆ ಸಮಯಾವಕಾಶ ನೀಡಿರುವುದರಿಂದ ಜೂನ್ ಬಳಿಕವೂ ಅರ್ಹ ಫಲಾನುಭವಿಗಳು ಪಡಿತರ ಪ್ರಯೋಜನವನ್ನು ಪಡೆಯುವುದನ್ನು ಮುಂದುವರೆಸುತ್ತಾರೆ. ಆದರೆ, ಸರ್ಕಾರದಿಂದ ನೀಡಲಾಗುತ್ತಿರುವ ಅಗ್ಗದ ಪಡಿತರ ಮತ್ತು ಉಚಿತ ಪಡಿತರ ಪ್ರಯೋಜನವನ್ನು ಯಾವುದೇ ಅಡೆತಡೆ ಇಲ್ಲದೆ ಪಡೆಯಲು ಬಯಸಿದರೆ ಸೆಪ್ಟೆಂಬರ್ 30, 2024ರ ಮೊದಲು ನಿಮ್ಮ ಆಧಾರ್-ರೇಷನ್ ಕಾರ್ಡ್ ಅನ್ನು ಲಿಂಕ್ ಮಾಡುವುದನ್ನು ಮರೆಯಬೇಡಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News