ರೇಷನ್ ಕಾರ್ಡ್ ಬಿಗ್ ಅಪ್ಡೇಟ್: 2.4 ಕೋಟಿ ಪಡಿತರ ಚೀಟಿ ರದ್ದು!
Ration Card: ರೇಷನ್ ಕಾರ್ಡ್ ಬಗ್ಗೆ ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ ಲಭ್ಯವಾಗಿದೆ. ಕಳೆದ ಐದು ವರ್ಷಗಳಲ್ಲಿ ದೇಶದಲ್ಲಿ ಅನರ್ಹರಿಗೆ ನೀಡಲಾಗಿದ್ದ ಮತ್ತು ನಕಲಿ 2 ಕೋಟಿ 41 ಲಕ್ಷ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎನ್ನಲಾಗಿದೆ. ಇವುಗಳಲ್ಲಿ ಯಾವ ರಾಜ್ಯದಲ್ಲಿ ಅತಿ ಹೆಚ್ಚು ಪಡಿತರ ಚೀಟಿಗಳನ್ನು ರದ್ದು ಪಡಿಸಲಾಗಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರೂ ಇದೆಯೇ ಎಂದು ತಿಳಿಯಿರಿ.
ರೇಷನ್ ಕಾರ್ಡ್ ಲೇಟೆಸ್ಟ್ ಅಪ್ಡೇಟ್: ನೀವೂ ಸಹ ಪಡಿತರ ಚೀಟಿದಾರರಾಗಿದ್ದರೆ ಈ ಸುದ್ದಿ ನಿಮಗಾಗಿ. ಅರ್ಹರಲ್ಲದಿದ್ದರೂ ಪಡಿತರ ಚೀಟಿ ಹೊಂದಿದ್ದರೆ ಅಥವಾ ನಕಲಿ ರೇಷನ್ ಕಾರ್ಡ್ ಪಡೆದಿದ್ದರೆ ಈ ಸುದ್ದಿಯನ್ನು ತಪ್ಪದೇ ಓದಿ. ಪಡಿತರ ಚೀಟಿದಾರರ ವಿರುದ್ಧ ಪ್ರಮುಖ ಕ್ರಮ ಕೈಗೊಂಡಿರುವ ಸರ್ಕಾರ ಕಳೆದ ಕೆಲವು ದಿನಗಳಲ್ಲಿ ಸುಮಾರು 2.5 ಕೋಟಿ ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ. ಈ ಬಗ್ಗೆ ಸರ್ಕಾರದಿಂದ ಮಾಹಿತಿ ನೀಡಲಾಗಿದೆ.
ಪಡಿತರ ಚೀಟಿಗೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿ ಅವರ ಪ್ರಶ್ನೆಗೆ ಉತ್ತರವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವರಾದ ಸಾಧ್ವಿ ನಿರಂಜನ್ ಜ್ಯೋತಿ ಅವರು ಮಾಹಿತಿ ನೀಡಿದ್ದು ಮಹತ್ವದ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾರೆ. ಈ ವೇಳೆ ಐದು ವರ್ಷಗಳಲ್ಲಿ ದೇಶದಲ್ಲಿ 2 ಕೋಟಿ 41 ಲಕ್ಷ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಇದನ್ನೂ ಓದಿ- ಸರ್ಕಾರದ ಹೊಸ ಪ್ಲಾನ್: ಪೆಟ್ರೋಲ್-ಡೀಸೆಲ್‌ನಿಂದ ಎಲ್‌ಪಿಜಿ ಸಿಲಿಂಡರ್‌ಗಳವರೆಗೆ ಎಲ್ಲವೂ ಅಗ್ಗ!
ಮಹಾರಾಷ್ಟ್ರದಲ್ಲಿ 21.03 ಲಕ್ಷ ಪಡಿತರ ಚೀಟಿ ರದ್ದು:
ಕೇಂದ್ರ ರಾಜ್ಯ ಸಚಿವರು ನೀಡಿರುವ ಮಾಹಿತಿಯಲ್ಲಿ 2017ರಿಂದ 2021ರವರೆಗಿನ ಐದು ವರ್ಷಗಳಲ್ಲಿ ದೇಶದಲ್ಲಿ 2 ಕೋಟಿ 41 ಲಕ್ಷ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಲಾಗಿದೆ. ಬಿಹಾರ ರಾಜ್ಯ ಒಂದರಲ್ಲೇ 7.10 ಲಕ್ಷ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಈ ಸಮಯದಲ್ಲಿ, ಉತ್ತರ ಪ್ರದೇಶದಲ್ಲಿ ಗರಿಷ್ಠ 1.42 ಕೋಟಿ ರೇಷನ್ ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ. ಇದಲ್ಲದೇ ಮಹಾರಾಷ್ಟ್ರ ರಾಜ್ಯದಲ್ಲಿ 21.03 ಲಕ್ಷ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ- ಆಧಾರ್ ಕಾರ್ಡ್ ಹೊಂದಿರುವವರ ಆರ್ಥಿಕ ಚಟುವಟಿಕೆಯನ್ನು ಟ್ರ್ಯಾಕ್ ಮಾಡುತ್ತಾ UIDAI?
ಪಡಿತರ ಚೀಟಿಗೆ ಸಂಬಂಧಿಸಿದ ಅಕ್ರಮಗಳನ್ನು ತಡೆಯಲು ಈ ಬಾರಿಯೂ ಸರ್ಕಾರ ದೊಡ್ಡ ಹೆಜ್ಜೆ ಇಟ್ಟಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಅಡಿಯಲ್ಲಿ ಪಡಿತರ ಪ್ರಯೋಜನ ಪಡೆದ 70 ಲಕ್ಷ ಕಾರ್ಡ್‌ದಾರರನ್ನು ಶಂಕಿತರ ಪಟ್ಟಿಗೆ ಸೇರಿಸಲಾಗಿದೆ. ಈ ಡೇಟಾವನ್ನು ಕೇಂದ್ರ ಸರ್ಕಾರವು ಪರಿಶೀಲನೆಗಾಗಿ ರಾಜ್ಯಗಳಿಗೆ ಕಳುಹಿಸಿದೆ. ಪರಿಶೀಲನೆಯಲ್ಲಿ, ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಂಡವರು ಎನ್‌ಎಫ್‌ಎಸ್‌ಎ ಅಡಿಯಲ್ಲಿ ಪಡಿತರ ಪಡೆಯಲು ಅರ್ಹರೇ ಅಥವಾ ಇಲ್ಲವೇ ಎಂಬುದನ್ನು ಕಂಡುಹಿಡಿಯಲಾಗುತ್ತದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.