New Ration Card Updates: ಬರೋಬ್ಬರಿ ಒಂದೂವರೆ ವರ್ಷಗಳ ಕಾಲ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಜೂನ್‌ ತಿಂಗಳಿನಲ್ಲಿ ಮತ್ತೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಅರ್ಜಿ ಸಲ್ಲಿಸುವವರು ಕೆಲವು ಪ್ರಮುಖ ಅಂಶಗಳನ್ನು ಗಮನಿಸಬೇಕು. ಅರ್ಹರು ರಾಜ್ಯದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್‌ ahara.kar.nic.in ಮೂಲಕ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು.


COMMERCIAL BREAK
SCROLL TO CONTINUE READING

ರಾಜ್ಯದ ಪಡಿತರ ಚೀಟಿ ಪಟ್ಟಿಯಲ್ಲಿ ಹೆಸರು ಇಲ್ಲದವರು ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕದಲ್ಲಿ ಹೊಸ APL ಅಥವಾ BPL ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಯಾವ್ಯಾವ ದಾಖಲೆಗಳು ಬೇಕು ಅನ್ನೋದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.


ಇದನ್ನೂ ಓದಿ: ವಾಹನ ಸವಾರರೇ ಮೇ 31ರೊಳಗೆ ಈ ಕೆಲಸ ಮಾಡಿಸದೇ ಹೋದಲ್ಲಿ ಕಟ್ಟಬೇಕಾಗುತ್ತದೆ ಸಾವಿರ ಸಾವಿರ ದಂಡ !


ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲಾತಿಗಳು


* ವೋಟರ್ ಐಡಿ
* ಆಧಾರ್ ಕಾರ್ಡ್
* ಇತ್ತೀಚಿನ ಪಾರ್ಸ್‌ಪೋರ್ಟ್ ಸೈಜ್‌ ಫೋಟೋ
* ಮೊಬೈಲ್ ಸಂಖ್ಯೆ


ಈ ದಾಖಲೆಗಳು ಇದ್ದರೆ ಮಾತ್ರ ಆನ್‌ಲೈನ್ ಮೂಲಕ ಹೊಸ ಪಡಿತರ ಚೀಟಿಗೆ ನೀವು ಅರ್ಜಿ ಸಲ್ಲಿಸಬಹುದು. ಅಧಿಕೃತ ವೆಬ್‌ಸೈಟ್ kar.nic.inಗೆ ಭೇಟಿ ನೀಡಬೇಕು. ಬಳಿಕ ಮುಖಪುಟದಲ್ಲಿನ ಇ-ಸೇವೆಗಳು ಎನ್ನುವ ಆಯ್ಕೆ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. ಇದಲ್ಲದೆ https://ahara.kar.nic.in/Home/EServices ವೆಬ್‌ಸೈಟ್‌ನ ಲಿಂಕ್‌ಅನ್ನು ನೇರವಾಗಿ ಕ್ಲಿಕ್ ಮಾಡಬಹುದು. ಬಳಿಕ ಇ-ಪಡಿತರ ಚೀಟಿ ಆಯ್ಕೆ ಮಾಡಿ. ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದರೆ, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವ ಲಿಂಕ್ ಸಿಗಲಿದೆ. ಅಲ್ಲಿ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಾಡಬೇಕು. 


ಅಲ್ಲಿ ಕೇಳುವ ಎಲ್ಲಾ ಮಾಹಿತಿ ಭರ್ತಿ ಮಾಡಬೇಕು. ನೀವು BPL ಅಥವಾ APL ಕಾರ್ಡ್‌ಗೆ ಅರ್ಜಿ ಸಲ್ಲಿಸುತ್ತಿದ್ದೀರಾ ಅನ್ನೋದನ್ನು ಆಯ್ಕೆ ಮಾಡಿಕೊಂಡು ನಮೂದಿಸಬೇಕು. ಅಂತಿಮವಾಗಿ ಅರ್ಜಿಯ ಜೊತೆ ಅಲ್ಲಿ ಕೇಳುವ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್‌ಲೋಡ್ ಮಾಡಿ, ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.


ಇದನ್ನೂ ಓದಿ: Work From Home ಕೆಲಸಕ್ಕೆ ಬಂತು ಆಪತ್ತು...! ಹೊಸ ನಿಯಮಗಳಿಗೆ ಕಂಪನಿಗಳ ಮೊರೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.