Ration Card: ಸೆಪ್ಟೆಂಬರ್ 30ರ ನಂತರ ಕ್ಯಾನ್ಸಲ್ ಆಗುತ್ತೆ ಇಂತವರ ರೇಷನ್ ಕಾರ್ಡ್!
Ration Card Cancellation: ಒಂದೇ ಕುಟುಂಬಸ್ಥರು, ಒಂದೇ ಮನೆಯಲ್ಲಿ ವಾಸಮಾಡುತ್ತಿರುವವರು ತಮ್ಮ ಕುಟುಂಬ ಬೇರೆ ಬೇರೆ ಅನ್ನೋ ರೀತಿ ಒಂದಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್‌ಗಳನ್ನು ಮಾಡಿಸಿಕೊಂಡು ಸರ್ಕಾರಕ್ಕೆ ಮೋಸ ಮಾಡುತ್ತಿದ್ದಾರೆ.
Ration Card Cancellation: ಪ್ರತಿಯೊಬ್ಬ ಜನಸಾಮಾನ್ಯರು ರೇಷನ್ ಕಾರ್ಡ್ ಹೊಂದುವುದು ಅಗತ್ಯ. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗುವ ವಿವಿಧ ಪ್ರಯೋಜನಗಳನ್ನು ಪಡೆಯಲು ಬಿಪಿಎಲ್ ರೇಷನ್ ಕಾರ್ಡ್ ಕಡ್ಡಾಯವಾಗಿರಬೇಕು. ಹೀಗಾಗಿ ಬಿಪಿಎಲ್ ಕಾರ್ಡ್ ಹೊಂದಿರುವ ಬಹುತೇಕರು ಸರ್ಕಾರದಿಂದ ಸಿಗುವ ಎಲ್ಲಾ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಆದರೆ ಸೆಪ್ಟೆಂಬರ್ 30ರೊಳಗೆ ನೀವು ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುತ್ತದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಬಡವರಿಗೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕೃಷಿ, ಆರೋಗ್ಯ, ವಿಮೆ ಮತ್ತು ರೇಷನ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪಡೆಯಲು ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಇರಲೇಬೇಕು. ಆದರೆ ಬಿಪಿಎಲ್ ಕಾರ್ಡ್ ಹೊಂದಿರುವ ಹಲವು ಜನರು ಸರ್ಕಾರಕ್ಕೆ ಮೋಸ ಮಾಡುತ್ತಿರುವುದು ಕಂಡುಬಂದಿದೆ. ಒಂದೇ ಮನೆಯಲ್ಲಿ ವಾಸಮಾಡುತ್ತಾ ಅನೇಕರು ಒದ್ದಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್‌ಗಳನ್ನು ಮಾಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ಎಟಿಎಂ ಕಾರ್ಡ್ ಬಳಕೆದಾರರಿಗೆ ಬಿಗ್ ಶಾಕ್; ಇನ್ಮುಂದೆ ಹೆಚ್ಚಿನ ಶುಲ್ಕ ಪಾವತಿಸಬೇಕು!
ಒಂದೇ ಕುಟುಂಬಸ್ಥರು, ಒಂದೇ ಮನೆಯಲ್ಲಿ ವಾಸಮಾಡುತ್ತಿರುವವರು ತಮ್ಮ ಕುಟುಂಬ ಬೇರೆ ಬೇರೆ ಅನ್ನೋ ರೀತಿ ಒಂದಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್‌ಗಳನ್ನು ಮಾಡಿಸಿಕೊಂಡು ಸರ್ಕಾರಕ್ಕೆ ಮೋಸ ಮಾಡುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ತಡೆ ಹಿಡಿಯಲು ಸರ್ಕಾರ ಒಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲರೂ ಸಹ ಕಡ್ಡಾಯವಾಗಿ ಒಂದು ಪ್ರಮುಖ ಕೆಲಸ ಮಾಡಬೇಕು. ಅದು ಏನು ಅಂತೀರಾ..? ನಿಮ್ಮ ಬಳಿ ಬಿಪಿಎಲ್ ರೇಶನ್ ಕಾರ್ಡ್ ಇದ್ದರೆ, ಕೂಡಲೇ ಅದನ್ನು ನಿಮ್ಮ ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಮಾಡಿಸಬೇಕು.
ರೇಷನ್ ಕಾರ್ಡ್ ವಿಚಾರದಲ್ಲಿ ಆಗುತ್ತಿರುವ ಹಗರಣ ತಡೆಯಲು ಸರ್ಕಾರ ಈ ಒಂದು ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುತ್ತಿದೆ. 2017ರಲ್ಲಿ PDSನ ಮೂಲಕ ಈ ನಿಯಮ ಜಾರಿಗೆ ತರಲಾಗಿದ್ದು, ಈಗಾಗಲೇ ಹಲವು ಬಾರಿ ತಿಳಿಸಿದ್ದರೂ ಸಹ ಬಹಳಷ್ಟು ಜನರು ಇನ್ನು ಸಹ ತಮ್ಮ ರೇಷನ್ ಕಾರ್ಡ್‌ಗೆ ಆಧಾರ್ ಕಾರ್ಡ್‌ಅನ್ನು ಲಿಂಕ್ ಮಾಡಿಸಿಲ್ಲ. ಈ ಪ್ರಕ್ರಿಯೆಗೆ ಈಗ ಕೊನೆಯ ದಿನಾಂಕ ನಿಗದಿ ಮಾಡಲಾಗಿದೆ. 2024ರ ಸೆಪ್ಟೆಂಬರ್ 30ರೊಳಗೆ ನಿಮ್ಮ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು. ಒಂದು ವೇಳೆ ಮಾಡದಿದ್ದರೆ ನಿಮ್ನ ರೇಷನ್ ಕಾರ್ಡ್ ರದ್ದಾಗಲಿದೆ.
ಆಧಾರ್ ಕಾರ್ಡ್‌ಗೆ ರೇಷನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ?
* ಮೊದಲು ನಿಮ್ಮ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
* ವೆಬ್‌ಸೈಟ್‌ಗೆ ಲಾಗಿನ್ ಮಾಡಿ KYC ಪ್ರಕ್ರಿಯೆ ಆಪ್ಶನ್ ಸೆಲೆಕ್ಟ್ ಮಾಡಿ
* ಇಲ್ಲಿ ನಿಮ್ಮ ಹೆಸರು ಅಡ್ರೆಸ್, ಡೇಟ್ ಆಫ್ ಬರ್ತ್ ಸೇರಿದಂತೆ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಬೇಕು.
* ಬಳಿಕ ನಿಮ್ಮ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಹಾಗೂ ಇನ್ನಿತರ ಮಾಹಿತಿಗಳನ್ನು ಅಪ್ಲೋಡ್ ಮಾಡಬೇಕು
* ಇದಿಷ್ಟು ಕೆಲಸ ಆದ ನಂತರ Submit ಮಾಡಬೇಕು
* ನಂತರ ನಿಮ್ಮ ಫೋನ್ ನಂಬರ್ ಅಥವಾ ಇ-ಮೇಲ್ ಐಡಿಗೆ ಸಂದೇಶ ಬರುತ್ತದೆ.
ಇದನ್ನೂ ಓದಿ: Good News: ಸರ್ಕಾರದಿಂದ ಪ್ರತಿ ತಿಂಗಳು ಸಿಗಲಿದೆ 300 ಯೂನಿಟ್ ಉಚಿತ ವಿದ್ಯುತ್!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.