Ration Card Update: ಇನ್ಮುಂದೆ ಪಡಿತರ ಅಂಗಡಿ ಮಾಲೀಕರು ಪಡಿತರ ತೂಕದಲ್ಲಿ ಮೋಸ ಮಾಡಲು ಸಾಧ್ಯವಿಲ್ಲ, ಬಂದಿದೆ ಹೊಸ ನಿಯಮ

New Ration Rule - ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ, ಫಲಾನುಭವಿಗಳಿಗೆ ಸರಿಯಾದ ಪ್ರಮಾಣದ ಆಹಾರ ಧಾನ್ಯಗಳು ಲಭ್ಯವಾಗುವಂತೆ ನೋಡಿಕೊಳ್ಳಲು ಪಡಿತರ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ಮಾಪಕಗಳಿಗೆ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ (ಇಪಿಒಎಸ್) ಸಾಧನಗಳನ್ನು ಸಂಪರ್ಕಿಸಲು ಕೇಂದ್ರ ಸರ್ಕಾರ ಆದೇಶ ನೀಡಿದೆ.  

Written by - Nitin Tabib | Last Updated : Jun 6, 2022, 11:47 PM IST
  • ಇನ್ಮುಂದೆ ಪಡಿತರ ಅಂಗಡಿ ಮಾಲೀಕರು ಪಡಿತರ ತೂಕದಲ್ಲಿ ಮೋಸ ಮಾಡಲು ಸಾಧ್ಯವಿಲ್ಲ,
  • ಏಕೆಂದರೆ ಪಡಿತರ ವಿತರಣೆಗಾಗಿ ಬಂದಿದೆ ಹೊಸ ನಿಯಮ
  • ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ (ಇಪಿಒಎಸ್) ಸಾಧನಗಳನ್ನು ಎಲೆಕ್ಟ್ರಾನಿಕ್ ಮಾಪಕಗಳೊಂದಿಗೆ ಸಂಪರ್ಕಿಸಲು ಸರ್ಕಾರದ ಆದೇಶ
Ration Card Update: ಇನ್ಮುಂದೆ ಪಡಿತರ ಅಂಗಡಿ ಮಾಲೀಕರು ಪಡಿತರ ತೂಕದಲ್ಲಿ ಮೋಸ ಮಾಡಲು ಸಾಧ್ಯವಿಲ್ಲ, ಬಂದಿದೆ ಹೊಸ ನಿಯಮ title=
Ration Card Update

Ration Card Update: ಪಡಿತರ ಚೀಟಿಯ ಮೂಲಕ ಆಹಾರ ಧಾನ್ಯ ಪಡೆಯುವವರ ಪಾಲಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಒಂದೆಡೆ ಸರ್ಕಾರ ಉಚಿತ ಪಡಿತರ ಅವಧಿಯನ್ನು ಸೆಪ್ಟೆಂಬರ್‌ವರೆಗೆ ವಿಸ್ತರಿಸಿದೆ. ಮತ್ತೊಂದೆಡೆ, ಪಡಿತರ ಅಂಗಡಿ ಮಾಲೀಕರು ಪಡಿತರ ತೂಕದಲ್ಲಿ ಮೋಸ ಮಾಡಲು ಸಾಧ್ಯವಾಗುವುದಿಲ್ಲ. ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯಡಿ, ಫಲಾನುಭವಿಗಳಿಗೆ ಸರಿಯಾದ ಪ್ರಮಾಣದ ಆಹಾರ ಧಾನ್ಯಗಳ ಪೂರೈಕೆಯನ್ನು ಸುನಿಸ್ಚಿತಗೊಳಿಸಲು, ಕೇಂದ್ರ ಸರ್ಕಾರವು ಆಹಾರ ಭದ್ರತಾ ಕಾಯ್ದೆಯ ನಿಯಮಗಳನ್ನು ಜಾರಿಗೊಳಿಸಿದ್ದು, ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ (ಇಪಿಒಎಸ್) ಸಾಧನಗಳನ್ನು ಎಲೆಕ್ಟ್ರಾನಿಕ್ ಮಾಪಕಗಳೊಂದಿಗೆ ಸಂಪರ್ಕಿಸಲು ಆದೇಶ ನೀಡಿದೆ. ಪಡಿತರ ಅಂಗಡಿಗಳಲ್ಲಿ ಪಾರದರ್ಶಕತೆ ಹೆಚ್ಚಿಸಲು ಮತ್ತು ಫಲಾನುಭವಿಗಳಿಗೆ ಆಹಾರ ಧಾನ್ಯಗಳನ್ನು ತೂಗುವಾಗ ನಡೆಯುವ ಮೋಸವನ್ನು ತಡೆಯಲು ಸರ್ಕಾರ ಈ ಕ್ರಮ ಕೈಗೊಂಡಿದೆ.

ನಿಯಮ ಏನು ಹೇಳುತ್ತದೆ
ಈ ತಿದ್ದುಪಡಿಯು ಎನ್‌ಎಫ್‌ಎಸ್‌ಎ ಅಡಿಯಲ್ಲಿ ಉದ್ದೇಶಿತ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಟಿಪಿಡಿಎಸ್) ಕಾರ್ಯಾಚರಣೆಯ ಪಾರದರ್ಶಕತೆಯನ್ನು ಸುಧಾರಿಸುವ ಮೂಲಕ ಕಾಯಿದೆಯ ಸೆಕ್ಷನ್ 12 ರ ಅಡಿಯಲ್ಲಿ ಸರಿಯಾದ ತೂಕದ ಆಹಾರ ಧಾನ್ಯಗಳನ್ನು ಪೂರೈಸುವ ಪ್ರಕ್ರಿಯೆಯನ್ನು ಮುಂದಕ್ಕೆ ಕೊಂಡೊಯ್ಯುವ ಒಂದು ಪ್ರಯತ್ನವಾಗಿದೆ ಎಂದು ಸರ್ಕಾರ ಹೇಳಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ (NFSA) ಅಡಿಯಲ್ಲಿ, ದೇಶದ ಸುಮಾರು 80 ಕೋಟಿ ಜನರಿಗೆ ಸರ್ಕಾರವು ಪ್ರತಿ ವ್ಯಕ್ತಿಗೆ ಐದು ಕಿಲೋಗ್ರಾಂಗಳಷ್ಟು ಗೋಧಿ ಮತ್ತು ಅಕ್ಕಿಯನ್ನು (ಆಹಾರ ಧಾನ್ಯಗಳು) ಪ್ರತಿ ಕೆಜಿಗೆ  ಕ್ರಮಶಃ 2 ಮತ್ತು 3 ರೂಪಾಯಿಗಳ ಸಬ್ಸಿಡಿ ದರದಲ್ಲಿ ನೀಡುತ್ತಿದೆ.

ಈ ಕುರಿತು ಮಾತನಾಡಿರುವ ಅಧಿಕಾರಿಯೊಬ್ಬರು "ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಜೂನ್ 18, 2021 ರಂದು ಎನ್‌ಎಫ್‌ಎಸ್‌ಎ 2013 ರ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸರಿಯಾದ ಪ್ರಮಾಣದಲ್ಲಿ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳ ವಿತರಣೆಯನ್ನು  ಖಚಿತಪಡಿಸಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ." ಎಂದಿದ್ದಾರೆ.

ಇದನ್ನೂ ಓದಿ-Scheme For Higher Return: ಈ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿದರೆ, ತಿಂಗಳಿಗೆ 50,000 ನಿಯಮಿತ ಆದಾಯ ಪಡೆಯಬಹುದು

ಏನು ಬದಲಾವಣೆಯಾಗಿದೆ?
EPOS ಸಾಧನಗಳನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಲು ರಾಜ್ಯಗಳಿಗೆ ಉತ್ತೇಜಿಸಲು ಮತ್ತು ಪ್ರತಿ ಕ್ವಿಂಟಾಲ್‌ಗೆ ರೂ.17.00 ಹೆಚ್ಚುವರಿ ಲಾಭದ ಉಳಿತಾಯವನ್ನು ಉತ್ತೇಜಿಸಲು, ಆಹಾರ ಭದ್ರತೆ (ರಾಜ್ಯ ಸರ್ಕಾರದ ಸಹಾಯ ನಿಯಮಗಳು) 2015 ರ ಉಪ ನಿಯಮ 2ರ ನಿಯಮ 7ಕ್ಕೆ ತಿದ್ದುಪಡಿ ತರಲಾಗಿದೆ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ-7th Pay Commission: ಸರ್ಕಾರಿ ನೌಕರರಿಗೆ ವೇತನದಲ್ಲಿ ಸಿಗಲಿದೆ ಹೆಚ್ಚುವರಿ 30,000 ರೂ.ಗಳ ಲಾಭ! ಈ ಷರತ್ತು ಪೂರೈಸಬೇಕು

ಇದರ ಅಡಿಯಲ್ಲಿ, ಯಾವುದೇ ರಾಜ್ಯ/ಕೇಂದ್ರಾಡಳಿತ ಪ್ರದೇಶ  ಪಾಯಿಂಟ್-ಆಫ್-ಸೇಲ್ ಸಾಧನಗಳ ಖರೀದಿ, ಕಾರ್ಯಾಚರಣೆ ಮತ್ತು ನಿರ್ವಹಣೆ ವೆಚ್ಚಕ್ಕಾಗಿ ಒದಗಿಸಲಾದ ಹೆಚ್ಚುವರಿ ಮಾರ್ಜಿನ್ ನಿಂದ ಉಳಿತಾಯವಾದರೆ, ಅದನ್ನು ಎಲೆಕ್ಟ್ರಾನಿಕ್ ತೂಕದ ಮಾಪಕಗಳ ಖರೀದಿ, ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ  ಎರಡೂ ಸಾಧನಗಳ ಏಕೀಕರಣಕ್ಕಾಗಿ ಬಳಸಬಹುದಾಗಿದೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News