4 ಬ್ಯಾಂಕ್‌ಗಳಿಗೆ ಶಾಶ್ವತವಾಗಿ ಬೀಗ ಹಾಕಿದ ಆರ್‌ಬಿಐ ! ಈ ಬ್ಯಾಂಕ್ ನಲ್ಲಿದೆಯಾ ನಿಮ್ಮ ಅಕೌಂಟ್?

ನಿಯಮಗಳನ್ನು ಉಲ್ಲಂಘಿಸಿದ ಆರೋಪ ಮೇಲೆ ರಿಸರ್ವ್ ಬ್ಯಾಂಕ್ 8 ಬ್ಯಾಂಕುಗಳಿಗೆ ದಂಡ ವಿಧಿಸಲಾಗಿದೆ. 4 ಬ್ಯಾಂಕ್ ಗಳ ಪರವಾನಗಿ ರದ್ದು ಮಾಡಲಾಗಿದೆ.  

Written by - Ranjitha R K | Last Updated : May 2, 2025, 11:31 AM IST
  • ಈ ತಿಂಗಳು, ರಿಸರ್ವ್ ಬ್ಯಾಂಕ್ 8 ಬ್ಯಾಂಕುಗಳಿಗೆ ದಂಡ ವಿಧಿಸಿದೆ.
  • ಬ್ಯಾಂಕ್ ಗಳ ಮೇಲೆ ನಿಯಮಗಳನ್ನು ಉಲ್ಲಂಘಿಸಿದ ಆರೋಪ
  • ಪರವಾನಗಿಗಳನ್ನು ರದ್ದುಗೊಳಿಸಲಾದ ಬ್ಯಾಂಕುಗಳು
4 ಬ್ಯಾಂಕ್‌ಗಳಿಗೆ ಶಾಶ್ವತವಾಗಿ ಬೀಗ ಹಾಕಿದ ಆರ್‌ಬಿಐ ! ಈ ಬ್ಯಾಂಕ್ ನಲ್ಲಿದೆಯಾ ನಿಮ್ಮ ಅಕೌಂಟ್?

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ದೇಶಾದ್ಯಂತ ಎಲ್ಲಾ ಬ್ಯಾಂಕುಗಳು ಮತ್ತು ಎನ್‌ಬಿಎಫ್‌ಸಿಗಳನ್ನು ನಿಯಂತ್ರಿಸುತ್ತದೆ. ಅದು ನಿಯಮಗಳ ಉಲ್ಲಂಘನೆಯಾಗಿರಲಿ ಅಥವಾ ಗ್ರಾಹಕರ ಹಿತಾಸಕ್ತಿಗಳ ಉಲ್ಲಂಘನೆಯಾಗಿರಲಿ,  ಆ ಸಂದರ್ಭಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲ್‌ನಲ್ಲಿ, ರಿಸರ್ವ್ ಬ್ಯಾಂಕ್ ಹಲವಾರು ಬ್ಯಾಂಕುಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಇದರ ಅಡಿಯಲ್ಲಿ ನಾಲ್ಕು ಬ್ಯಾಂಕ್‌ಗಳ ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ. ನಾಲ್ಕು ಬ್ಯಾಂಕುಗಳನ್ನು ಶಾಶ್ವತವಾಗಿ ಮುಚ್ಚಲಾಗಿದೆ. 8 ಬ್ಯಾಂಕ್‌ಗಳಿಗೆ ಭಾರೀ  ದಂಡ ವಿಧಿಸಲಾಗಿದೆ. ಇನ್ನು ಮುಂದೆ ಈ ಬ್ಯಾಂಕುಗಳಿಗೆ ವ್ಯವಹಾರ ಮಾಡಲು ಸಾಧ್ಯವಾಗುವುದಿಲ್ಲ. ಆದರೆ ಗ್ರಾಹಕರು  ಡಿಐಸಿಜಿಸಿಯಿಂದ 5 ಲಕ್ಷ ರೂ.ವರೆಗಿನ ಠೇವಣಿ ವಿಮಾ ರಕ್ಷಣೆಯನ್ನು ಪಡೆಯಬಹುದು. 

Add Zee News as a Preferred Source

ಈ ತಿಂಗಳು, ರಿಸರ್ವ್ ಬ್ಯಾಂಕ್ 8 ಬ್ಯಾಂಕುಗಳಿಗೆ ದಂಡ ವಿಧಿಸಿದೆ. ಈ ಎಲ್ಲಾ ಬ್ಯಾಂಕ್ ಗಳ ಮೇಲೆ ನಿಯಮಗಳನ್ನು ಉಲ್ಲಂಘಿಸಿದ ಆರೋಪ ಹೊರಿಸಲಾಗಿದೆ. ಈ ಪಟ್ಟಿಯಲ್ಲಿ ಸಿಟಿಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಕೋಟಕ್ ಮಹೀಂದ್ರಾ ಬ್ಯಾಂಕ್ ಸೇರಿವೆ. ಆದರೆ ಈ ಕ್ರಮವು ಗ್ರಾಹಕರು ಮತ್ತು ಬ್ಯಾಂಕ್ ನಡುವಿನ ವಹಿವಾಟುಗಳು ಅಥವಾ ಒಪ್ಪಂದಗಳ ಮೇಲೆ ಪರಿಣಾಮ ಬೀರುವುದಿಲ್ಲ.

ಇದನ್ನೂ ಓದಿ : ಕ್ರೆಡಿಟ್ ಕಾರ್ಡ್ ಬಳಕೆದಾರರು ಬಾಕಿ ಹಣ ಪಾವತಿಸದೆ ಮೃತಪಟ್ಟರೇ ಏನಾಗುತ್ತದೆ? ಆ ಮೊತ್ತವನ್ನು ಬ್ಯಾಂಕ್ ಯಾರಿಂದ ವಸೂಲಿ ಮಾಡುತ್ತದೆ?

ಪರವಾನಗಿಗಳನ್ನು ರದ್ದುಗೊಳಿಸಲಾದ ಬ್ಯಾಂಕುಗಳು : 
-ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿರುವ ಅಂಜನಾ ಅರ್ಬನ್ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ನ ಪರವಾನಗಿಯನ್ನು ಏಪ್ರಿಲ್ 22 ರಂದು ರದ್ದುಗೊಳಿಸಲಾಗಿದೆ.
- ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಕಲರ್ ಮರ್ಚೆಂಟ್ಸ್ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ನ ಪರವಾನಗಿಯನ್ನು ಏಪ್ರಿಲ್ 16 ರಂದು ರದ್ದುಗೊಳಿಸಲಾಗಿದೆ.
- ಜಲಂಧರ್‌ನಲ್ಲಿರುವ ಇಂಪೀರಿಯಲ್ ಅರ್ಬನ್ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ನ ಪರವಾನಗಿಯನ್ನು ಸಹ ರದ್ದುಗೊಳಿಸಲಾಗಿದೆ. ಏಪ್ರಿಲ್ 25 ರಿಂದ ಬ್ಯಾಂಕಿಂಗ್ ವ್ಯವಹಾರವನ್ನು ಮುಚ್ಚಲು ಆದೇಶ ಹೊರಡಿಸಲಾಗಿದೆ.
- ಮಹಾರಾಷ್ಟ್ರದ ಅಕ್ಲುಜ್‌ನಲ್ಲಿರುವ ಶಂಕರರಾವ್ ಮೋಹಿತೆ ಪಾಟೀಲ್ ಸಹಕಾರಿ ಬ್ಯಾಂಕ್ ಲಿಮಿಟೆಡ್‌ನ ಪರವಾನಗಿಯನ್ನು ಸಹ ರದ್ದುಗೊಳಿಸಲಾಗಿದೆ. ಏಪ್ರಿಲ್ 11 ರಿಂದ ಬ್ಯಾಂಕಿಂಗ್ ವ್ಯವಹಾರಕ್ಕೆ ಅವಕಾಶ ನೀಡಲಾಗಿಲ್ಲ.

ಪರವಾನಗಿ ರದ್ದಾಗಿರುವ ಹಿಂದಿನ ಕಾರಣ : 
ಸಾಕಷ್ಟು ಬಂಡವಾಳ ಮತ್ತು ಆದಾಯ ಗಳಿಕೆಯ ಅವಕಾಶಗಳ ಕೊರತೆಯಿಂದಾಗಿ ಈ ಬ್ಯಾಂಕುಗಳ ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ.  ಬ್ಯಾಂಕುಗಳನ್ನು ಮುಂದುವರಿಸುವುದರಿಂದ ತನ್ನ ಗ್ರಾಹಕರಿಗೆ ಹಾನಿಯಾಗುತ್ತದೆ ಎಂದು ರಿಸರ್ವ್ ಬ್ಯಾಂಕ್ ಹೇಳಿದೆ. 

ಇದನ್ನೂ ಓದಿ : ಈ ತಿಂಗಳು ಸರ್ಕಾರಿ ನೌಕರರ ವೇತನ ಹೆಚ್ಚಳ! ತುಟ್ಟಿ ಭತ್ಯೆ ಕುರಿತು ಕೂಡಾ ಹೊರ ಬೀಳುವುದು ಅತಿ ದೊಡ್ಡ ಘೋಷಣೆ

ರಿಸರ್ವ್ ಬ್ಯಾಂಕ್ ದಂಡ ವಿಧಿಸಿದ ಬ್ಯಾಂಕುಗಳು : 
ಆರ್ಯವರ್ಡ್ ಬ್ಯಾಂಕ್, ಲಕ್ನೋ
ಶ್ರೀ ಗಣೇಶ್ ಸಹಕಾರಿ ಬ್ಯಾಂಕ್ ಲಿಮಿಟೆಡ್, ನಾಸಿಕ್, ಮಹಾರಾಷ್ಟ್ರ
ಸಿಟಿ ಬ್ಯಾಂಕ್ 
ಪಂಜಾಬ್ ನ್ಯಾಷನಲ್ ಬ್ಯಾಂಕ್
IDFC ಫಸ್ಟ್ ಬ್ಯಾಂಕ್ ಲಿಮಿಟೆಡ್
ಕೋಟಕ್ ಮಹೀಂದ್ರಾ ಬ್ಯಾಂಕ್ ಲಿಮಿಟೆಡ್
ಇಂಡಿಯನ್ ಓವರ್ಸೀಸ್ ಬ್ಯಾಂಕ್
ಇಂಡಿಯನ್ ಬ್ಯಾಂಕ್

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News