)
ಕರ್ನಾಟಕದ ಈ ಬ್ಯಾಂಕ್ ನ ಪರವಾನಿಗೆಯನ್ನು ಕೇಂದ್ರ ಬ್ಯಾಂಕ್ ಆರ್ ಬಿಐ ರದ್ದುಗೊಳಿಸಿದೆ. ಆರ್ ಬಿಐ ಆದೇಶದ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಬ್ಯಾಂಕ್ ತನ್ನ ವ್ಯವಹಾರವನ್ನು ನಿಲ್ಲಿಸುವಂತೆ ಸೂಚಿಸಲಾಗಿದೆ. ಈ ಕಾರಣದಿಂದಾಗಿ, ಬ್ಯಾಂಕ್ ಇನ್ನು ಮುಂದೆ ಬ್ಯಾಂಕಿಂಗ್ ವ್ಯವಹಾರವನ್ನು ಮುಂದುವರಿಸುವಂತಿಲ್ಲ.
ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ನ ಪರವಾನಗಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ರದ್ದುಗೊಳಿಸಿದೆ. ಈ ಆದೇಶದ ಅನ್ವಯ ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಠೇವಣಿಗಳನ್ನು ಸ್ವೀಕರಿಸುವುದು, ಠೇವಣಿಗಳನ್ನು ಮರುಪಾವತಿಸುವುದು ಸೇರಿದಂತೆ 'ಬ್ಯಾಂಕಿಂಗ್' ವ್ಯವಹಾರವನ್ನು ನಡೆಸುವುದನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ" ಎಂದು ಆರ್ಬಿಐ ಆದೇಶದಲ್ಲಿ ತಿಳಿಸಲಾಗಿದೆ.
ಆರ್ಬಿಐ ಹೇಳಿಕೆಯ ಪ್ರಕಾರ, ಬ್ಯಾಂಕನ್ನು ಮುಚ್ಚಲು ಮತ್ತು ಬ್ಯಾಂಕಿಗೆ ಲಿಕ್ವಿಡೇಟರ್ ಅನ್ನು ನೇಮಿಸಲು ಕರ್ನಾಟಕ ಸಹಕಾರಿ ಸಂಘಗಳ ರಿಜಿಸ್ಟ್ರಾರ್ಗೆ ಆದೇಶ ಹೊರಡಿಸಲು ಕೋರಲಾಗಿದೆ. ಕಾರವಾರ ನಗರ ಸಹಕಾರಿ ಬ್ಯಾಂಕ್ ಸಾಕಷ್ಟು ಬಂಡವಾಳ ಮತ್ತು ಗಳಿಕೆಯ ನಿರೀಕ್ಷೆಗಳನ್ನು ಹೊಂದಿಲ್ಲದ ಕಾರಣ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಆರ್ಬಿಐ ತಿಳಿಸಿದೆ.
ಬ್ಯಾಂಕಿನ ವ್ಯವಹಾರವನ್ನು ಮುಂದುವರಿಸುವುದು ಅದರ ಠೇವಣಿದಾರರ ಹಿತಾಸಕ್ತಿಗಳಿಗೆ ಹಾನಿಕರವಾಗಿದೆ ಎಂದು ಆರ್ಬಿಐ ಹೇಳಿದೆ. ಪ್ರಸ್ತುತ ಕಳಪೆ ಆರ್ಥಿಕ ಸ್ಥಿತಿಯನ್ನು ಹೊಂದಿರುವ ಬ್ಯಾಂಕ್ ತನ್ನ ಪ್ರಸ್ತುತ ಠೇವಣಿದಾರರಿಗೆ ಪೂರ್ಣವಾಗಿ ಪಾವತಿಸಲು ಸಾಧ್ಯವಾಗುವುದಿಲ್ಲ. ಬ್ಯಾಂಕ್ ತನ್ನ ಬ್ಯಾಂಕಿಂಗ್ ವ್ಯವಹಾರವನ್ನು ಮುಂದುವರಿಸಲು ಅನುಮತಿಸಿದರೆ ಸಾರ್ವಜನಿಕ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಆರ್ಬಿಐ ಹೇಳಿಕೆಯಲ್ಲಿ ವಿವರಿಸಲಾಗಿದೆ.
DICGC ಕಾಯಿದೆಯ ಪ್ರಕಾರ ಬ್ಯಾಂಕ್ ದಿವಾಳಿಯಾದ ನಂತರ, ಪ್ರತಿಯೊಬ್ಬ ಠೇವಣಿದಾರರು ಠೇವಣಿ ವಿಮಾ ಕ್ಲೈಮ್ ಮೊತ್ತವನ್ನು ಠೇವಣಿ ವಿಮೆ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ (DICGC) ನಿಂದ 5,00,000 ರೂ.ಗಳ ಗರಿಷ್ಠ ಮಿತಿಯವರೆಗೆ ಪಡೆಯಲು ಅರ್ಹರಾಗಿರುತ್ತಾರೆ.
ಬ್ಯಾಂಕ್ ಸಲ್ಲಿಸಿದ ಮಾಹಿತಿಯ ಪ್ರಕಾರ, ಶೇಕಡ 92.90 ರಷ್ಟು ಠೇವಣಿದಾರರು DICGC ಯಿಂದ ತಮ್ಮ ಠೇವಣಿಗಳ ಪೂರ್ಣ ಮೊತ್ತವನ್ನು ಪಡೆಯಲು ಅರ್ಹರಾಗಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.