ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಗುರುವಾರ ಇ-ರೂಪಿ (e-RUPI) ಪ್ರಿಪೇಯ್ಡ್ ಡಿಜಿಟಲ್ ವೋಚರ್‌ಗಳ ಅಡಿಯಲ್ಲಿ ಮಿತಿಯನ್ನು ಹೆಚ್ಚಿಸಲು ಪ್ರಸ್ತಾಪಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ:  ಶಾಲಾ-ಕಾಲೇಜುಗಳಲ್ಲಿ ವಸ್ತ್ರಸಂಹಿತೆ ವಿಚಾರದಲ್ಲಿ ನ್ಯಾಯಾಲಯದ ತೀರ್ಪಿಗೆ ಬದ್ಧರಾಗೋಣ: ಸಿಎಂ


ಪ್ರಸ್ತುತ ರೂ 10,000 ರ ಮಿತಿಯನ್ನು ಪ್ರತಿ ವೋಚರ್‌ಗೆ ರೂ 1 ಲಕ್ಷಕ್ಕೆ ಹೆಚ್ಚಿಸಲಾಗುವುದು ಮತ್ತು ಅಂತಹ ವೋಚರ್‌ಗಳನ್ನು ಒಂದಕ್ಕಿಂತ ಹೆಚ್ಚು ಬಾರಿ ಬಳಸಲು ಅನುಮತಿಸಲಾಗುವುದು ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ (Shaktikanta Das) ಹೇಳಿದ್ದಾರೆ.


ಈ ವರ್ಧನೆಯು ಸರ್ಕಾರದ ವಿವಿಧ ಯೋಜನೆಗಳನ್ನು ಫಲಾನುಭವಿಗಳಿಗೆ ಹೆಚ್ಚು ಪರಿಣಾಮಕಾರಿಯಾಗಿ ತಲುಪಿಸಲು ಮತ್ತಷ್ಟು ಅನುಕೂಲವಾಗುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ:  Weak Password:ಇವು ವಿಶ್ವದ ಅತ್ಯಂತ ದುರ್ಬಲ ಪಾಸ್‌ವರ್ಡ್‌ಗಳು


ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಅಭಿವೃದ್ಧಿಪಡಿಸಿದ e-RUPI ಪ್ರಿ-ಪೇಯ್ಡ್ ಡಿಜಿಟಲ್ ವೋಚರ್ ಅನ್ನು ಆಗಸ್ಟ್ 2021 ರಲ್ಲಿ ಪ್ರಾರಂಭಿಸಲಾಗಿದೆ ಎಂದು ದಾಸ್ ಹೇಳಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.