ಆರ್ಬಿಐನ ಹೊಸ ಆದೇಶ- ಈ ಬ್ಯಾಂಕ್‌ನಿಂದ 15,000 ಕ್ಕಿಂತ ಹೆಚ್ಚು ಹಣ ಡ್ರಾ ಮಾಡಲು ಸಾಧ್ಯವಿಲ್ಲ
RBI Imposes Restrictions: ಎರಡು ದೊಡ್ಡ ಬ್ಯಾಂಕ್‌ಗಳಿಗೆ ದಂಡ ವಿಧಿಸಿದ ಬಳಿಕ ಇದೀಗ ಆರ್‌ಬಿಐ ಒಂದು ಬ್ಯಾಂಕ್‌ನಿಂದ ಹಣ ಹಿಂಪಡೆಯುವಿಕೆಯ ಮೇಲೆ ಕಠಿಣ ನಿಯಮವನ್ನು ಜಾರಿಗೊಳಿಸಿದೆ. ಇದರ ಅಡಿಯಲ್ಲಿ, ಈಗ ಮುಂಬೈ ಮೂಲದ ರಾಯಗಡ ಸಹಕಾರ ಬ್ಯಾಂಕ್‌ನ ಗ್ರಾಹಕರು 15,000 ರೂ.ಗಿಂತ ಹೆಚ್ಚಿನ ಹಣವನ್ನು ವಿತ್ ಡ್ರಾ ಮಾಡಲು ಸಾಧ್ಯವಿಲ್ಲ.
ನಿರ್ಬಂಧ ಹೇರಿದ ಆರ್‌ಬಿಐ: ಕಳೆದ ಕೆಲವು ದಿನಗಳ ಹಿಂದೆ ಎರಡು ದೊಡ್ಡ ಬ್ಯಾಂಕ್‌ಗಳಿಗೆ ದಂಡ ವಿಧಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್, ಇದೀಗ ಒಂದು ಬ್ಯಾಂಕ್‌ನಿಂದ ಹಣ ಹಿಂಪಡೆಯುವಿಕೆಯ ಮೇಲೆ ಕಠಿಣ ನಿಯಮವನ್ನು ಜಾರಿಗೊಳಿಸಿದೆ. ಆರ್‌ಬಿಐ ನಿಯಮಗಳ ಪ್ರಕಾರ ಈಗ ಈ ಬ್ಯಾಂಕ್‌ನಿಂದ 15,000 ಕ್ಕಿಂತ ಹೆಚ್ಚು ಹಣ ಡ್ರಾ ಮಾಡಲು ಸಾಧ್ಯವಿಲ್ಲ.
ವಾಸ್ತವವಾಗಿ, ಆರ್‌ಬಿಐ ಮುಂಬೈನ ರಾಯಗಡ ಸಹಕಾರಿ ಬ್ಯಾಂಕ್ ಲಿಮಿಟೆಡ್‌ಗೆ ಹಲವು ರೀತಿಯ ನಿರ್ಬಂಧಗಳನ್ನು ವಿಧಿಸಿದೆ. ಬ್ಯಾಂಕ್‌ನ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಕೇಂದ್ರ ಬ್ಯಾಂಕ್ ಈ ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ- Edible Oil Price Cut: ಶ್ರೀಸಾಮಾನ್ಯರಿಗೊಂದು ಭಾರಿ ಸಂತಸದ ಸುದ್ದಿ, ಅಡುಗೆ ಎಣ್ಣೆ ಬೆಲೆಯಲ್ಲಿ ಲೀಟರ್ ಗೆ ರೂ.30 ಇಳಿಕೆ
ರಾಯಗಡ ಸಹಕಾರಿ ಬ್ಯಾಂಕ್‌ನ ಗ್ರಾಹಕರಿಗೆ ವಿತ್ ಡ್ರಾ ಮಿತಿ:
ಆರ್‌ಬಿಐ ರಾಯಗಡ ಸಹಕಾರಿ ಬ್ಯಾಂಕ್‌ನ ಗ್ರಾಹಕರಿಗೆ 15,000 ರೂಪಾಯಿ ವಿತ್ ಡ್ರಾ ಮಿತಿ ವಿಧಿಸಿದ್ದು ಇನ್ನೂ ಹಲವು ನಿರ್ಬಂಧಗಳನ್ನು ಸಹ ಹೇರಿದೆ. ಈ ಕಟ್ಟುನಿಟ್ಟಿನ ನಿಯಮಗಳಲ್ಲಿ, ಸಹಕಾರಿ ಬ್ಯಾಂಕ್ ರಿಸರ್ವ್ ಬ್ಯಾಂಕಿನ ಪೂರ್ವಾನುಮತಿ ಇಲ್ಲದೆ ಸಾಲ ನೀಡಲು ಸಾಧ್ಯವಾಗುವುದಿಲ್ಲ, ಯಾವುದೇ ಹೂಡಿಕೆ ಮಾಡಲು ಸಾಧ್ಯವಾಗುವುದಿಲ್ಲ ಮತ್ತು ಹೊಸ ಠೇವಣಿಗಳನ್ನು ಸ್ವೀಕರಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಲಾಗಿದೆ.
ಆರು ತಿಂಗಳ ಕಾಲ ಮುಂದುವರೆಯಲಿರುವ ನಿಷೇಧ:
ರಾಯಗಡ ಸಹಕಾರಿ ಬ್ಯಾಂಕ್‌ನ ಮೇಲೆ ಆರ್‌ಬಿಐ ವಿಧಿಸಿರುವ ನಿಷೇಧವು ಮುಂದಿನ ಆರು ತಿಂಗಳವರೆಗೆ ಮುಂದುವರೆಯಲಿದೆ. ಈ ಅವಧಿಯಲ್ಲಿ ಬ್ಯಾಂಕ್ ಗ್ರಾಹಕರು ತಮ್ಮ ಉಳಿತಾಯ ಮತ್ತು ಚಾಲ್ತಿ ಖಾತೆಯಿಂದ 15,000 ರೂ.ಗಿಂತ ಹೆಚ್ಚಿನ ಹಣವನ್ನು ವಿತ್ ಡ್ರಾ ಮಾಡಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ. ಇದೇ ವೇಳೆ ರಾಯಗಢ ಸಹಕಾರಿ ಬ್ಯಾಂಕ್‌ಗೆ ನೀಡಿರುವ ಸೂಚನೆಗಳು ಅದರ ಬ್ಯಾಂಕಿಂಗ್ ಪರವಾನಗಿಯನ್ನು ರದ್ದುಗೊಳಿಸುವುದು ಎಂದು ಅರ್ಥವಲ್ಲ ಎಂಬುದನ್ನು ರಿಸರ್ವ್ ಬ್ಯಾಂಕ್ ಸ್ಪಷ್ಟಪಡಿಸಿದೆ.
ಇದನ್ನೂ ಓದಿ- Mahindra Scorpioಯಿಂದ Boleroವರೆಗೆ 1.79 ಲಕ್ಷ ರಿಯಾಯಿತಿ ದರದಲ್ಲಿ ಸಿಗುತ್ತಿವೆ ಈ ಕಾರುಗಳು
ಎರಡು ದೊಡ್ಡ ಬ್ಯಾಂಕ್‌ಗಳಿಗೆ ದಂಡ:
ಇದಕ್ಕೂ ಮುನ್ನ ಆರ್‌ಬಿಐ ನಿಯಮ ಪಾಲಿಸದ ಎರಡು ದೊಡ್ಡ ಬ್ಯಾಂಕ್‌ಗಳಿಗೆ ದಂಡ ವಿಧಿಸಿತ್ತು. ಆರ್‌ಬಿಐ ನೀಡಿರುವ ಮಾಹಿತಿಯಲ್ಲಿ ಕೋಟಕ್ ಮಹೀಂದ್ರಾ ಬ್ಯಾಂಕ್ ಮತ್ತು ಇಂಡಸ್‌ಇಂಡ್ ಬ್ಯಾಂಕ್‌ಗಳು ನಿಯಂತ್ರಕ ಅನುಸರಣೆಯನ್ನು ಅನುಸರಿಸದ ಕಾರಣಕ್ಕೆ ತಲಾ ಒಂದು ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ ಎಂದು ತಿಳಿಸಲಾಗಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.