ರಿಲಯನ್ಸ್ ಜಿಯೋ ಮೊದಲ ತ್ರೈಮಾಸಿಕ ಲಾಭ 5,445 ಕೋಟಿ ರೂಪಾಯಿ: ಮುಂದಿನ ವರ್ಷ ಐಪಿಒ ಸಾಧ್ಯತೆ

ರಿಲಯನ್ಸ್ ಜಿಯೋದ 2024-25ನೇ ಸಾಲಿನ ಪ್ರಥಮ ತ್ರೈಮಾಸಿಕದ, ಅಂದರೆ ಏಪ್ರಿಲ್ ನಿಂದ ಜೂನ್ ತಿಂಗಳ ತನಕದ ಹಣಕಾಸು ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಲಾಗಿದೆ. ಕಳೆದ ತ್ರೈಮಾಸಿಕದಲ್ಲಿ 5,337 ಕೋಟಿ ರೂಪಾಯಿಯ ನಿವ್ವಳ ಲಾಭ ಘೋಷಿಸಿದ್ದ ಕಂಪನಿಯು ಈ ತ್ರೈಮಾಸಿಕದಲ್ಲಿ 5,445 ಕೋಟಿ ರೂಪಾಯಿ ನಿವ್ವಳ ಲಾಭವನ್ನು ಗಳಿಸಿದೆ. ರಿಲಯನ್ಸ್ ಜಿಯೋ ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವುದು ಮತ್ತೆ ಮುಂದುವರಿದಿದೆ. ಜೂನ್ ಗೆ ಕೊನೆಯಾದ ತ್ರೈಮಾಸಿಕದಲ್ಲಿ 90 ಲಕ್ಷ ಬಳಕೆದಾರರು ಸೇರ್ಪಡೆಯಾಗಿದ್ದಾರೆ. ಅಂದ ಹಾಗೆ ವರ್ಷದ ಹಿಂದಿನ ಇದೇ ಹಣಕಾಸು ತ್ರೈಮಾಸಿಕದಲ್ಲಿ ಜಿಯೋ 4,863 ಕೋಟಿ ರೂಪಾಯಿ ಲಾಭ ಗಳಿಸಿತ್ತು. 

ರಿಲಯನ್ಸ್ ಜಿಯೋ ಮೊದಲ ತ್ರೈಮಾಸಿಕ ಲಾಭ 5,445 ಕೋಟಿ ರೂಪಾಯಿ: ಮುಂದಿನ ವರ್ಷ ಐಪಿಒ ಸಾಧ್ಯತೆ
Image Credit: file photo

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More