RBI ಗವರ್ನರ್ ಶಕ್ತಿಕಾಂತ ದಾಸ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 67 ವರ್ಷದ ಶಕ್ತಿಕಾಂತ ದಾಸ್ ಅವರನ್ನು ವೈದ್ಯರ ನಿಗಾದಲ್ಲಿ ಇರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆರ್‌ಬಿಐ ಗವರ್ನರ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆ ಮೂಲಗಳು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿವೆ.
ಆಸಿಡಿಟಿ ಕಾರಣದಿಂದ ಆಸ್ಪತ್ರೆಗೆ ದಾಖಲು :
ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಆಸಿಡಿಟಿಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಆಸಿಡಿಟಿಯ ಕಾರಣದಿಂದ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎನ್ನಲಾಗಿದೆ. ಮುಂದಿನ 2-3 ಗಂಟೆಗಳಲ್ಲಿ ಶಕ್ತಿಕಾಂತ ದಾಸ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.
ಏರಿಕೆ ಬೆನ್ನಲ್ಲೇ ಭಾರೀ ಇಳಿಕೆ ಕಂಡ ಚಿನ್ನದ ಬೆಲೆ, ಬೆಳ್ಳಿ ಬೆಲೆಯೂ ಅಗ್ಗ : ಬಂಗಾರ ಖರೀದಿಸುವುದಾದರೆ ಇದುವೇ ಒಳ್ಳೆಯ ಸಮಯ
2018 ರಲ್ಲಿ ಆರ್‌ಬಿಐ ಗವರ್ನರ್ ಆದ ಶಕ್ತಿಕಾಂತ ದಾಸ್:
ಆರ್‌ಬಿಐ ಗವರ್ನರ್ ಆಗಿದ್ದ ಊರ್ಜಿತ್ ಪಟೇಲ್ 2018ರ ಡಿಸೆಂಬರ್‌ನಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ನಂತರ, ಶಕ್ತಿಕಾಂತ ದಾಸ್ ಅವರನ್ನು 3 ವರ್ಷಗಳ ಅವಧಿಗೆ ಆರ್‌ಬಿಐ ಗವರ್ನರ್ ಆಗಿ ನೇಮಿಸಲಾಯಿತು. 2021ರಲ್ಲಿ ಅವರ ಅಧಿಕಾರಾವಧಿಯನ್ನು ಮೂರು ವರ್ಗಳವರೆಗೆ ವಿಸ್ತರಿಸಲಾಯಿತು. ಮುಂಬರುವ ಡಿಸೆಂಬರ್ 10 ರಂದು ಶಕ್ತಿಕಾಂತ ದಾಸ್ ಅಧಿಕಾರಾವಧಿ ಕೊನೆಯಾಗಲಿದೆ.
ಶಕ್ತಿಕಾಂತ ದಾಸ್‌ಗೆ ಮೂರನೇ ಅವಧಿ ಸಿಗುತ್ತಾ? :
ಶಕ್ತಿಕಾಂತ ದಾಸ್ ಅವರು, ರಿಸರ್ವ್ ಬ್ಯಾಂಕಿನ ಗವರ್ನರ್ ಆಗಿ ಉತ್ತಮ ಅವಧಿಯನ್ನು ಹೊಂದಿದ್ದು, ಹಣಕಾಸು ಕ್ಷೇತ್ರವನ್ನು ಉತ್ತಮವಾಗಿ ನಿರ್ವಹಿಸಿದ್ದಾರೆ. ಇದರ ಜೊತೆಗೆ ಕೇಂದ್ರ ಸರ್ಕಾರದೊಂದಿಗೆ ಅವರ ಸಂಬಂಧವೂ ಉತ್ತಮವಾಗಿದೆ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿ ಇರಿಸಿಕೊಂಡು ಅವರ ಅಧಿಕಾರಾವಧಿಯನ್ನು ಮತ್ತೊಮ್ಮೆ ವಿಸ್ತರಿಸಬಹುದು. ಆದರೆ, ಶಕ್ತಿಕಾಂತ ದಾಸ್ ಅವರಿಗೆ ಮೂರನೇ ಅವಧಿ ನೀಡಲಾಗುವುದೋ ಅಥವಾ ಅವರ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡುವುದೋ ಎಂಬುದನ್ನು ಕೇಂದ್ರ ಸರ್ಕಾರ ಇದುವರೆಗೂ ಸ್ಪಷ್ಟಪಡಿಸಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ