ನವದೆಹಲಿ: Royal Enfield - ನೀವು ರಾಯಲ್ ಎನ್‌ಫೀಲ್ಡ್ ಬೈಕ್ ಖರೀದಿಸಲು ಯೋಚಿಸುತ್ತಿದ್ದರೆ, ಈ ಸುದ್ದಿ ನಿಮಗಾಗಿ. ಏಕೆಂದರೆ ಮುಂದಿನ ದಿನಗಳಲ್ಲಿ ಕಂಪನಿಯು ತನ್ನ ಎಲೆಕ್ಟ್ರಿಕ್ ಬೈಕ್ ಅನ್ನು ಬಿಡುಗಡೆ ಮಾಡಲಿದೆ. ಆದರೆ, ಈ ಬಗ್ಗೆ ಕಂಪನಿ ನೇರವಾಗಿ ಏನನ್ನೂ ಹೇಳಿಲ್ಲ.

COMMERCIAL BREAK
SCROLL TO CONTINUE READING

ಆಗಸ್ಟ್ 2020 ರಲ್ಲಿ ಕಂಪನಿಯು ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ವಿಭಾಗಕ್ಕೆ ಪ್ರವೇಶಿಸಲು ಯೋಜಿಸುತ್ತಿದೆ ಎಂದು Royal Enfield  CEO ವಿನೋದ್ ದಾಸರಿ ದೃಢಪಡಿಸಿದ್ದರು. ಈ ಪ್ರಕಟಣೆಯ ನಂತರ, ದೇಶೀಯ ಬೈಕ್ ತಯಾರಕ ತನ್ನ ವಾರ್ಷಿಕ ವರದಿ 2020-21 ರಲ್ಲಿ ಕಂಪನಿಯು ಎಲೆಕ್ಟ್ರಿಕ್ ಶ್ರೇಣಿಯನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ದೃಢಪಡಿಸಿದೆ.


ಇದನ್ನೂ ಓದಿ-Electric Vehicle Charging: ಬೆಂಗಳೂರು ಹೃದಯ ಭಾಗದಲ್ಲಿ ಹೆಚ್ಚುವರಿ ಚಾರ್ಜಿಂಗ್ ಸ್ಟೇಷನ್ಗಳ ಅಳವಡಿಕೆಗೆ ಬೆಸ್ಕಾಂ ಸಿದ್ಧತೆ

ಬೈಕ್ ಹೊಸ ಎಲೆಕ್ಟ್ರಿಕ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿರಲಿದೆ
ರಾಯಲ್ ಎನ್‌ಫೀಲ್ಡ್ ಕಂಪನಿ, ಪರಿಸರ, ಸಾಮಾಜಿಕ ಮತ್ತು ಸರ್ಕಾರದ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು, ತನ್ನ ವಿದ್ಯುದ್ದೀಕರಣ ಪ್ರಕ್ರಿಯೆಯನ್ನು ವೇಗಗೊಳಿಸಿದೆ. ಕಂಪನಿಯು ಈಗಾಗಲೇ ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಿಕ್ ಬೈಕ್‌ಗಾಗಿ ಮೂಲಮಾದರಿಯನ್ನು ಸಿದ್ಧಪಡಿಸಿದೆ ಮತ್ತು ಶೀಘ್ರದಲ್ಲೇ Electric Vehicle ಉತ್ಪಾದನೆಯನ್ನು ಪ್ರಾರಂಭಿಸಲಿದೆ. ರಾಯಲ್ ಎನ್‌ಫೀಲ್ಡ್ ತಯಾರಿಸಿದ ಎಲೆಕ್ಟ್ರಿಕ್ ಬೈಕ್,  ಹೊಸ ಎಲೆಕ್ಟ್ರಿಕ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿರಲಿದೆ ಮತ್ತು ಹಲವು ಹೊಸ ವೈಶಿಷ್ಟ್ಯಗಳೊಂದಿಗೆ ಸಜ್ಜುಗೊಳ್ಳಲಿದೆ ಎಂದು ನಿರೀಕ್ಷಿಸಲಾಗಿದೆ.


ಇದನ್ನೂ ಓದಿ-Electric Vehicle: ಎಲೆಕ್ಟ್ರಿಕ್ ವಾಹನ ಮಾಲೀಕರಿಗೆ ಈ ಸರ್ಕಾರದಿಂದ ಸಿಗಲಿದೆ ಭರ್ಜರಿ ಗಿಫ್ಟ್

ಯಾವಾಗ ಬಿಡುಗಡೆ?
ರಾಯಲ್ ಎನ್‌ಫೀಲ್ಡ್ 2023 ರಲ್ಲಿ ಯಾವುದೇ ಸಮಯಕ್ಕೆ ಭಾರತದಲ್ಲಿ ತನ್ನ ಎಲೆಕ್ಟ್ರಿಕ್ ಉತ್ಪಾದನೆಯ ಆರಂಭವನ್ನು ಘೋಷಿಸಬಹುದು. ಯುನೈಟೆಡ್ ಕಿಂಗ್‌ಡಮ್‌ನಲ್ಲಿರುವ ಕಂಪನಿಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗವು ಪ್ರಸ್ತುತ ಮೂಲಮಾದರಿಗಳನ್ನು ನಿರೂಪಿಸಲು ಕೆಲಸ ಮಾಡುತ್ತಿದೆ. ಇಂಡಿಯಾ ಕಾರ್ ನ್ಯೂಸ್‌ನ ವರದಿಯ ಪ್ರಕಾರ, ಬೈಕು 8 kWh ನಿಂದ 10 kWh ವರೆಗಿನ ಬ್ಯಾಟರಿ ಪ್ಯಾಕ್ ಅನ್ನು ಬಳಸಬಹುದು ಮತ್ತು ಎಲೆಕ್ಟ್ರಿಕ್ ಮೋಟರ್‌ಗೆ ಜೋಡಿಸಲಾಗುತ್ತದೆ. ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿನ ಪ್ರಸ್ತುತ ಪ್ರವೃತ್ತಿಗಳ ಪ್ರಕಾರ, ಬೈಕ್‌ಗಳ ಶಕ್ತಿ ಮತ್ತು ಗರಿಷ್ಠ ಟಾರ್ಕ್ ಸುಮಾರು 40 bhp ಮತ್ತು 100Nm ಇರಲಿದೆ ಎಂದು ನಿರೀಕ್ಷಿಸಲಾಗಿದೆ.


ಇದನ್ನೂ ನೋಡಿ-


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.