ಮಾರ್ಚ್ 8ರ ಮಹಿಳಾ ದಿನಕ್ಕೆ ಭರ್ಜರಿ ಸಿಹಿಸುದ್ದಿ; ಮಹಿಳೆಯರಿಗೆ ಪ್ರತಿ ತಿಂಗಳೂ ಸಿಗಲಿದೆ 2,500 ರೂ.!!

2500 Rupees For Woman: ಮಹಿಳೆಯರಿಗೆ ಮಾಸಿಕ 2,500 ರೂ.ಗಳ ಪ್ರೋತ್ಸಾಹ ಧನ ನೀಡುವ ಯೋಜನೆಯ ಕುರಿತು ಮಾರ್ಚ್ 8ರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಘೋಷಣೆ ಮಾಡಲಾಗುತ್ತದೆ ಎಂದು ವರದಿಯಾಗಿದೆ.

Written by - Puttaraj K Alur | Last Updated : Mar 3, 2025, 04:09 PM IST
  • ದೆಹಲಿ ಮಹಿಳೆಯರಿಗೆ ಪ್ರತಿತಿಂಗಳು ಸಿಗಲಿದೆ 2,500 ರೂ.ಗಳ ಪ್ರೋತ್ಸಾಹ ಧನ
  • ಮಾರ್ಚ್ 8ರ ಮಹಿಳಾ ದಿನಾಚರಣೆಯಂದು ಅಧಿಕೃತ ಘೋಷಣೆಯಾಗುವ ಸಾಧ್ಯತೆ
  • 2,500 ರೂ. ಬಗ್ಗೆ ಚಿಂತಿಸಬೇಡಿ ಎಂದಿರುವ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ
ಮಾರ್ಚ್ 8ರ ಮಹಿಳಾ ದಿನಕ್ಕೆ ಭರ್ಜರಿ ಸಿಹಿಸುದ್ದಿ; ಮಹಿಳೆಯರಿಗೆ ಪ್ರತಿ ತಿಂಗಳೂ ಸಿಗಲಿದೆ 2,500 ರೂ.!!
ಮಹಿಳೆಯರಿಗೆ 2500 ರೂಪಾಯಿಗಳು

2500 Rupees For Woman: ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರವು ಮಹಿಳಾ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸಲು ಪರಿಚಯಿಸಿದ “ಕಲೈಂಘರ್ ಮಗಳಿರ್ ಉರಿಮೈ ತೊಗೈ ತಿಟ್ಟಂʼ ಯೋಜನೆ ರಾಜ್ಯದಾದ್ಯಂತ ವ್ಯಾಪಕ ಗಮನ ಸೆಳೆದಿದೆ. ಈ ಯೋಜನೆಯಡಿ ಪ್ರತಿ ತಿಂಗಳು ಕೆಲವು ಅರ್ಹತಾ ಮಾನದಂಡ ಹೊಂದಿರುವ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ನೇರವಾಗಿ 1000 ರೂ.ಗಳನ್ನು ಪಾವತಿಸಲಾಗುತ್ತದೆ.  

Add Zee News as a Preferred Source

ಮಹಿಳೆಯರಿಗೆ 2,500 ರೂಪಾಯಿ: ತಮಿಳುನಾಡಿನಿಂದ ಆರಂಭ...

ಪ್ರಸ್ತುತ ತಮಿಳುನಾಡಿನಲ್ಲಿ 1.14 ಕೋಟಿ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಇದರ ಜೊತೆಗೆ ತಮಿಳುನಾಡು ಸರ್ಕಾರದ ಉಪಕ್ರಮವನ್ನು ಅನುಸರಿಸಿ, ಮಧ್ಯಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಹಿಳೆಯರಿಗೆ ಮಾಸಿಕ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಪಂಚ ಗ್ಯಾರಂಟಿಗಳ ಮೂಲಕ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ರಾಜ್ಯದ ಮಹಿಳೆಯರಿಗೆ ಪ್ರತಿತಿಂಗಳು 2000 ರೂ. ನೀಡಲಾಗುತ್ತಿದೆ. ಇದೇ ನಿಟ್ಟಿನಲ್ಲಿ ದೆಹಲಿಯಲ್ಲಿ ಹೊಸದಾಗಿ ರಚನೆಯಾದ ಬಿಜೆಪಿ ಸರ್ಕಾರವು ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವ ಯೋಜನೆಯನ್ನು ಘೋಷಿಸಲು ಸಜ್ಜಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ₹10,000 ಮೊತ್ತದ SIPಯಿಂದ ₹5.31 ಕೋಟಿ ಗಳಿಕೆ; ಹೂಡಿಕೆದಾರರಿಗೆ ಭಾರಿ ಲಾಭ ನೀಡಿದ ಈ ಯೋಜನೆ!!

ಮಹಿಳೆಯರಿಗೆ 2,500 ರೂಪಾಯಿ: ಬಿಜೆಪಿಯ ಭರವಸೆ 

ಇತ್ತೀಚೆಗೆ ದೆಹಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ʼಮಹಿಳಾ ಸಮ್ಮಾನ್ ಯೋಜನೆʼ ಹೆಸರಿನಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 2,100 ರೂ.ಗಳನ್ನು ನೀಡುವುದಾಗಿ ಭರವಸೆ ನೀಡಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 2,500 ರೂ. ಪ್ರೋತ್ಸಾಹ ಧನ ನೀಡುವುದಾಗಿ ಭರವಸೆ ನೀಡಿತು.

ಮಹಿಳೆಯರಿಗೆ 2,500 ರೂಪಾಯಿ: ಮಾರ್ಚ್ 8ರ ಮಹಿಳಾ ದಿನಕ್ಕೆ ಸಿಹಿಸುದ್ದಿ

ದೆಹಲಿಯ 70 ಸ್ಥಾನಗಳ ಪೈಕಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರವು ಮಹಿಳೆಯರಿಗೆ 2,500 ರೂ.ಗಳ ಪ್ರೋತ್ಸಾಹ ಧನ ನೀಡುವ ಯೋಜನೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಿದೆ ಎಂದು ಹೇಳಲಾಗಿತ್ತು. ಆ ನಿಟ್ಟಿನಲ್ಲಿ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಮಾರ್ಚ್ 8ರಂದು ಅಂದರೆ ಮಹಿಳಾ ದಿನದಂದು ಈ ಮಹಿಳಾ ಪ್ರೋತ್ಸಾಹಕ ಯೋಜನೆಯ ಬಗ್ಗೆ ಘೋಷಣೆ ಮಾಡುವ ನಿರೀಕ್ಷೆಯಿದೆ.

ಇದನ್ನೂ ಓದಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಕುಸಿಯುತ್ತಿದೆ ಚಿನ್ನ !ನವೆಂಬರ್ ನಂತರ ಇದೇ ಮೊದಲ ಬಾರಿಗೆ ಇಷ್ಟು ಕುಸಿತ ಕಂಡ ಬಂಗಾರ!

ದೆಹಲಿ ಮಹಿಳೆಯರಿಗೆ 2,500 ರೂಪಾಯಿಗಳು

ಮಹಿಳಾ ದಿನಾಚರಣೆ ಪ್ರಯುಕ್ತ ಮಾರ್ಚ್ 8ರಂದು ಜವಾಹರಲಾಲ್ ನೆಹರು ಮೈದಾನದಲ್ಲಿ ಆಯೋಜಿಸಲಾಗಿರುವ ವಿಶೇಷ ಕಾರ್ಯಕ್ರಮದಲ್ಲಿ ಈ ಯೋಜನೆಯ ಕುರಿತು ಘೋಷಣೆ ಮಾಡುವ ನಿರೀಕ್ಷೆಯಿದೆ. ಈ ಕಾರ್ಯಕ್ರಮದಲ್ಲಿ 5,000 ಮಹಿಳೆಯರು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಹಿರಿಯ ಬಿಜೆಪಿ ನಾಯಕರು ಕೂಡ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. 

ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಈ ಯೋಜನೆಯನ್ನು ತರುವುದಾಗಿ ಹೇಳಿದ್ದರೂ, ವಿರೋಧ ಪಕ್ಷದ ನಾಯಕಿ ಅತಿಶಿ ಮೆರ್ಲಿನಾ ಈಗಾಗಲೇ ಬಿಜೆಪಿ ಯೋಜನೆಯನ್ನು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದ್ದರು. ಆದರೆ, ಸಿಎಂ ರೇಖಾ ಗುಪ್ತಾ ಇದಕ್ಕೆ ಪ್ರತಿಕ್ರಿಯಿಸಿ, "2,500 ರೂ. ಬಗ್ಗೆ ಚಿಂತಿಸಬೇಡಿ. ನಾವು ನಮ್ಮ ಭರವಸೆಯನ್ನು ಈಡೇರಿಸುತ್ತೇವೆ" ಎಂದು ಸ್ಪಷ್ಟನೆ ನೀಡಿದ್ದರು. ಇದಲ್ಲದೆ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ್‌ ಸುದ್ದಿಗಾರರ ಜೊತೆಗೆ ಮಾತನಾಡಿ, ʼನಮ್ಮ ಸರ್ಕಾರ ಸಮಾಜದ ಎಲ್ಲಾ ವರ್ಗಗಳಿಗಾಗಿ ಕೆಲಸ ಮಾಡಲು ಬದ್ಧವಾಗಿದೆ. ಎಲ್ಲರಿಗೂ ಸಮಗ್ರ ಅಭಿವೃದ್ಧಿಯನ್ನು ನಾವು ಖಚಿತಪಡಿಸುತ್ತೇವೆ. ಮಾರ್ಚ್ 8 ಬರಲಿ... ಎಲ್ಲವೂ ತಿಳಿಯಲಿದೆʼ ಎಂದು ಹೇಳಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

About the Author

Puttaraj K Alur

ಪುಟ್ಟರಾಜ ಕೆ ಆಲೂರ ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser) ನ್ಯೂಸ್‌, ಒಪೊಯಿ‌ (Opoyi) ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. ...Read More

Trending News