SBI Latest Rule: ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿಯೊಂದಿದೆ. ಎಟಿಎಂಗಳಿಂದ ಹಣ ಡ್ರಾ ಮಾಡುವ ನಿಯಮಗಳು ಬದಲಾಗಿವೆ. ಎಟಿಎಂ ವಹಿವಾಟುಗಳನ್ನು ಹೆಚ್ಚು ಸುರಕ್ಷಿತಗೊಳಿಸಲು ಎಸ್‌ಬಿಐ ಈ ಕ್ರಮ ಕೈಗೊಂಡಿದೆ. ಈಗ ನೀವು ಎಸ್‌ಬಿಐ ಎಟಿಎಂನಿಂದ ಹಣವನ್ನು ಹಿಂಪಡೆಯಲು ಒಟಿಪಿ ನಮೂದಿಸುವುದು ಕಡ್ಡಾಯವಾಗಿದೆ. ಈಗ ಹೊಸ ನಿಯಮದ ಪ್ರಕಾರ ಗ್ರಾಹಕರು ಒಟಿಪಿ ಇಲ್ಲದೆ ನಗದು ಹಿಂಪಡೆಯುವಂತಿಲ್ಲ. ಇದರಲ್ಲಿ, ನಗದು ಹಿಂಪಡೆಯುವ ಸಮಯದಲ್ಲಿ, ಗ್ರಾಹಕರು ತಮ್ಮ ಮೊಬೈಲ್ ಫೋನ್‌ನಲ್ಲಿ OTP ಅನ್ನು ಪಡೆಯುತ್ತಾರೆ, ಅದನ್ನು ನಮೂದಿಸಿದ ನಂತರವೇ ಎಟಿಎಂನಿಂದ ಹಣವನ್ನು ಹಿಂಪಡೆಯಲಾಗುತ್ತದೆ. 


COMMERCIAL BREAK
SCROLL TO CONTINUE READING

ಎಸ್‌ಬಿಐ ಎಟಿಎಂಗಳಲ್ಲಿನ (SBI ATM) ವಹಿವಾಟುಗಳಿಗಾಗಿ ನಮ್ಮ ಒಟಿಪಿ ಆಧಾರಿತ ನಗದು ಹಿಂಪಡೆಯುವ ವ್ಯವಸ್ಥೆಯು ವಂಚಕರ ವಿರುದ್ಧ ವ್ಯಾಕ್ಸಿನೇಷನ್ ಆಗಿದೆ ಎಂದು ಬ್ಯಾಂಕ್ ಟ್ವೀಟ್ ಮಾಡಿದೆ. ನಿಮ್ಮನ್ನು ವಂಚನೆಯಿಂದ ರಕ್ಷಿಸುವುದು ಯಾವಾಗಲೂ ನಮ್ಮ ಪ್ರಮುಖ ಆದ್ಯತೆಯಾಗಿರುತ್ತದೆ. ಅದಕ್ಕಾಗಿ, OTP ಆಧಾರಿತ ನಗದು ಹಿಂಪಡೆಯುವ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು SBI ಗ್ರಾಹಕರು ತಿಳಿದಿರಬೇಕು ಎಂದು ಬ್ಯಾಂಕ್ ಹೇಳಿದೆ.


ಇದನ್ನೂ ಓದಿ- Advance Tax ಪಾವತಿಸಲು ನಾಳೆಯೇ ಕೊನೆಯ ದಿನ! ತಪ್ಪಿದರೆ ತೆರಬೇಕಾಗುತ್ತದೆ ಭಾರೀ ದಂಡ


ಏನಿದು ಹಣ ವಿತ್ ಡ್ರಾ ಮಾಡಲು ಹೊಸ ನಿಯಮ:
ಗ್ರಾಹಕರು 10,000 ರೂ. ಮತ್ತು ಅದಕ್ಕಿಂತ ಹೆಚ್ಚಿನ ಹಣವನ್ನು ಹಿಂತೆಗೆದುಕೊಳ್ಳುವಾಗ (Cash Withdrawal) ಈ ನಿಯಮಗಳು ಅನ್ವಯಿಸುತ್ತವೆ. SBI ಗ್ರಾಹಕರು ತಮ್ಮ ಬ್ಯಾಂಕ್ ಖಾತೆಯಿಂದ  ಡೆಬಿಟ್ ಕಾರ್ಡ್ ಮೂಲಕ ಹಣ ಹಿಂಪಡೆಯುವಾಗ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾದ OTP ಬಳಸಿ ಹಣವನ್ನು ಹಿಂಪಡೆಯಬಹುದು. ಅದರ ಸಂಪೂರ್ಣ ಪ್ರಕ್ರಿಯೆಯನ್ನು ತಿಳಿಯೋಣ. 


ಇಲ್ಲಿ ಪ್ರಕ್ರಿಯೆಯನ್ನು ತಿಳಿಯಿರಿ:
* SBI ATM ನಿಂದ ಗ್ರಾಹಕರು 10,000 ರೂ. ಮತ್ತು ಅದಕ್ಕಿಂತ ಹೆಚ್ಚಿನ ಹಣವನ್ನು ಹಿಂಪಡೆಯಲು  OTP ಅಗತ್ಯವಿರುತ್ತದೆ.
* ಇದಕ್ಕಾಗಿ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ.
* ಈ OTP ನಾಲ್ಕು ಅಂಕಿಗಳ ಸಂಖ್ಯೆಯಾಗಿದ್ದು, ಗ್ರಾಹಕರು ಒಂದೇ ವಹಿವಾಟಿಗೆ  ಈ ಒಟಿಪಿ ಪಡೆಯುತ್ತಾರೆ.
*  ಒಮ್ಮೆ ನೀವು ಹಿಂಪಡೆಯಲು ಬಯಸುವ ಮೊತ್ತವನ್ನು ನಮೂದಿಸಿದ ನಂತರ, ATM ಪರದೆಯಲ್ಲಿ OTP ಅನ್ನು ನಮೂದಿಸಲು ನಿಮ್ಮನ್ನು ಕೇಳಲಾಗುತ್ತದೆ.
* ನಗದು ಹಿಂಪಡೆಯಲು ಈ ಪರದೆಯಲ್ಲಿ ಬ್ಯಾಂಕ್‌ನಲ್ಲಿ ನೋಂದಾಯಿಸಲಾದ ಮೊಬೈಲ್ ಸಂಖ್ಯೆಯಲ್ಲಿ ನೀವು ಸ್ವೀಕರಿಸಿದ OTP ಅನ್ನು ನಮೂದಿಸಬೇಕು. 


ಇದನ್ನೂ ಓದಿ- Bank Holiday March 2022: ಬ್ಯಾಂಕ್ ಗ್ರಾಹಕರಿಗೊಂದು ಮಹತ್ವದ ಮಾಹಿತಿ


ಗ್ರಾಹಕರನ್ನು ವಂಚನೆಯಿಂದ ರಕ್ಷಿಸಲು ಬ್ಯಾಂಕ್ ಈ ಕ್ರಮ ಕೈಗೊಂಡಿದೆ. ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ SBI ಭಾರತದಲ್ಲಿ 71,705 BC ಔಟ್‌ಲೆಟ್‌ಗಳೊಂದಿಗೆ 22,224 ಶಾಖೆಗಳು ಮತ್ತು 63,906 ATM/CDMಗಳ ದೊಡ್ಡ ಜಾಲವನ್ನು ಹೊಂದಿದೆ. ಇಂಟರ್ನೆಟ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್ ಬಳಸುವ ಗ್ರಾಹಕರ ಸಂಖ್ಯೆ ಸರಿಸುಮಾರು 91 ಮಿಲಿಯನ್ ಮತ್ತು 20 ಮಿಲಿಯನ್.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.