ಶಿವರಾತ್ರಿ ಜಾತ್ರೆ ಎಫೆಕ್ಟ್: ಕೇವಲ 25 ದಿನಕ್ಕೆ 3 ಕೋಟಿಗೂ ಹೆಚ್ಚು ಆದಾಯ ಸಂಗ್ರಹಿಸಿದ ಮಲೈ ಮಹದೇಶ್ವರ

ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ (ಮಾರ್ಚ್ 26)  ಬೆಳಿಗ್ಗೆ 8 ಗಂಟೆಯಲ್ಲಿ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ರಾತ್ರಿ 10:30ರ ಗಂಟೆಯವರೆಗೂ ನಡೆಯಿತು. 

Written by - Yashaswini V | Last Updated : Mar 27, 2024, 11:52 AM IST
  • ಕೇವಲ 25 ದಿನಕ್ಕೆ 3 ಕೋಟಿಗೂ ಹೆಚ್ಚು ಆದಾಯ ಸಂಗ್ರಹಿಸಿರುವ ಮಲೈಮಾದಪ್ಪ
  • ಇದೇ ಮೊದಲ ಬಾರಿ ಮಲೈಮಹದೇಶ್ವರ ಬೆಟ್ಟದಲ್ಲಿ ಭಕ್ತರಿಂದ ಬಾರಿ‌ ಪ್ರಮಾಣದ ಕಾಣಿಕೆ
  • ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೈಮಹದೇಶ್ವರ ಬೆಟ್ಟ
ಶಿವರಾತ್ರಿ ಜಾತ್ರೆ ಎಫೆಕ್ಟ್: ಕೇವಲ 25 ದಿನಕ್ಕೆ 3 ಕೋಟಿಗೂ ಹೆಚ್ಚು ಆದಾಯ ಸಂಗ್ರಹಿಸಿದ ಮಲೈ ಮಹದೇಶ್ವರ  title=

ಚಾಮರಾಜನಗರ: ಹನೂರು  ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 25 ದಿನಗಳ ಅವಧಿಯಲ್ಲಿ  ದಾಖಲೆಯ 3.13 ಕೋಟಿ ರೂ. ಸಂಗ್ರಹವಾಗಿದೆ. 

ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ (ಮಾರ್ಚ್ 26)  ಬೆಳಿಗ್ಗೆ 8 ಗಂಟೆಯಲ್ಲಿ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ರಾತ್ರಿ 10:30ರ ಗಂಟೆಯವರೆಗೂ ನಡೆಯಿತು. 

ಇದನ್ನೂ ಓದಿ- ವಿಶ್ವದ ಪ್ರಬಲ ವಿಮಾ ಬ್ರ್ಯಾಂಡ್ ಆಗಿ ಹೊರಹೊಮ್ಮಿದ ಎಲ್‌ಐ‌ಸಿ

ಈ ಬಾರಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ  ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ  ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಇದೇ ಮೊದಲ ಬಾರಿ ಮಲೈಮಹದೇಶ್ವರ ಬೆಟ್ಟದಲ್ಲಿ ಭಕ್ತರಿಂದ ಬಾರಿ‌ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಹರಕೆಯ ರೂಪದಲ್ಲಿ ಭಕ್ತರು ಹಣ ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ. ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 3,13,00,931 ರೂ. ಸಂಗ್ರಹವಾಗಿದೆ. ಇದೇ ವೇಳೆ 47 ಗ್ರಾಂ ಚಿನ್ನ ಮತ್ತು 2 ಕೆಜಿ 309 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

ಇದಲ್ಲದೆ ಯು ಎಸ್ ಎ, ಬಾಂಗ್ಲಾದೇಶ ನೇಪಾಳ , ಮಲೇಶಿಯಾ ಸೇರಿದಂತೆ 7  ವಿದೇಶಿ ನೋಟುಗಳು, ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 26 ನೋಟುಗಳು ಹುಂಡಿಯಲ್ಲಿ ಹಾಕಿದ್ದಾರೆ. 

ಇದನ್ನೂ ಓದಿ- ಉದ್ಯೋಗ ಬದಲಾಯಿಸುವಾಗ ಇಪಿಎಫ್ ಗೆ ಸಂಬಂಧಿಸಿದ ಈ ಕೆಲಸ ಮಾಡುವುದನ್ನು ಮರೆಯದಿರಿ ! ನಷ್ಟವಾಗುವುದು ಖಂಡಿತಾ !

ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕ ಅಧೀಕ್ಷಕ ನಾಗೇಶ್,  ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News