ರಾಜ್ಯದಲ್ಲಿ ₹ 17,836 ಕೋಟಿ ಮೊತ್ತದ ಬಂಡವಾಳ ಹೂಡಿಕೆ ; 27,067 ಹೊಸ ಉದ್ಯೋಗ ಸೃಷ್ಟಿ
ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ ₹ 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಇಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್‌ಎಚ್‌ಎಲ್‌ಸಿಸಿ) 63ನೇ ಸಭೆಯಲ್ಲಿ, ರಾಜ್ಯದಾದ್ಯಂತ 27,067 ಉದ್ಯೋಗಗಳನ್ನು ಸೃಷ್ಟಿಸುವ ₹ 17835.9 ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ದೊರೆತಿದ್ದು, ಇದರಲ್ಲಿ ₹ 8220.05 ಕೋಟಿ ಮೊತ್ತದ 6 ಹೊಸ ಯೋಜನೆಗಳು ಮತ್ತು ₹ 9,615.85 ಕೋಟಿ ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳು ಇವೆ.
ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ ₹ 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ವಿಸ್ಟ್ರಾನ್ ಇನ್ಫೊಕಾಂ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ₹ 2095 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‌ಫೋನ್ ತಯಾರಿಕಾ ಘಟಕ ಆರಂಭಿಸಲಿದೆ. ಇದರಿಂದ 21723 ಜನರಿಗೆ ಉದ್ಯೋಗಗಳು ದೊರೆಯಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ- Holi 2024 ಕ್ಕೂ ಮುನ್ನವೇ ಸರ್ಕಾರಿ ನೌಕರರ ಮೇಲೆ ಹಣದ ಸುರಿಮಳೆ, ಸಿಗಲಿದೆ ₹22788 ಅರಿಯರ್ ಲಾಭ, ಯಾವಾಗ ಖಾತೆ ಸೇರಲಿದೆ ಹಣ?
ಸಭೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ, ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಉಪಸ್ಥಿತರಿದ್ದರು.
ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು :
ರಾಜ್ಯದಲ್ಲಿ ಹೊಸದಾಗಿ ಬಂಡವಾಳ ಹೂಡಿಕೆ ಮಾಡಲಿರುವ ಒಟ್ಟು 6 ಕಂಪನಿಗಳಾದ - ಎಸ್‍ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಇಂಡಿಯನ್ ಕೇನ್ ಪವರ್ ಲಿಮಿಟೆಡ್, ಐ.ಸಿ.ಟಿ ಸರ್ವಿಸ್ ಮ್ಯಾನೇಜ್‌ಮೆಂಟ್ ಸೊಲ್ಯೂಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್, ಶ್ರೀ ಬಾಲಾಜಿ ಷುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಏರ್ ಇಂಡಿಯಾ ಲಿಮಿಟೆಡ್‌ನ ಒಟ್ಟು ₹ 8220.05 ಕೋಟಿ ಮೊತ್ತದ ಬಂಡವಾಳ ಹೂಡಿಕೆಗಳಿಗೆ ಸಮಿತಿಯು ಒಪ್ಪಿಗೆ ನೀಡಿದೆ. ಈ ಹೊಸ ಯೋಜನೆಗಳಿಂದ ರಾಜ್ಯದಲ್ಲಿ ಒಟ್ಟು 27,067 ಹೊಸ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ.
ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು :
ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕಂಪನಿಗಳ ಸಾಮರ್ಥ್ಯ ವಿಸ್ತರಣೆ ಉದ್ದೇಶದ ಹೆಚ್ಚುವರಿ ಹೂಡಿಕೆಯ 8 ಪ್ರಸ್ತಾವನೆಗಳಿಗೂ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಇದನ್ನೂ ಓದಿ- Women’s Day 2024: ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿ, ಸದೃಢಗೊಳಿಸಲು ಸರ್ಕಾರದ ಯೋಜನೆಗಳಿವು
ಬಂಡವಾಳ ಹೂಡಿಕೆ ಹೆಚ್ಚಳದ ಪ್ರಸ್ತಾವನೆಗಳಲ್ಲಿ - ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್, ಆರ್‌ಬಿಎಸ್‌ಎಸ್‌ಎನ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್, ಎಂವಿ ಎನರ್ಜಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ ಎಂವೆ ಫೋಟೊ ವೋಲ್ಟಾಯಿಕ್ ಪವರ್ ಪ್ರೈವೇಟ್ ಲಿಮಿಟೆಡ್), ಇಂಡಿಯನ್ ಕೇನ್ ಪವರ್ ಲಿಮಿಟೆಡ್ (ಅಳಗವಾಡಿ ಬೀರೇಶ್ವರ ಷುಗರ್ಸ್ ಘಟಕ ), ಗ್ರೀನ್ಕೊ ಕೆಎ01 ಐಆರ್‍ಇಪಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ ಗ್ರೀನ್ಕೊ ಸೋಲಾರ್ ಎನರ್ಜಿ ಪ್ರೈವೇಟ್ ಲಿಮಿಟೆಡ್), ಅಥಣಿ ಷುಗರ್ಸ್ ಲಿಮಿಟೆಡ್, ಉಕೆಮ್ ಅಗ್ರಿ ಇನ್‌ಫ್ರಾ ಲಿಮಿಟೆಡ್ ಮತ್ತು ಸ್ನೈಡರ್ ಎಲೆಕ್ಟ್ರಿಕ್ ಐಟಿ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸೇರಿವೆ. ಇವುಗಳ ಹೆಚ್ಚುವರಿ ಹೂಡಿಕೆಯ ಮೊತ್ತವು ₹ 9,615.85 ಕೋಟಿಗಳಷ್ಟಿದೆ.
ಅಭಿವೃದ್ಧಿ ಆಯುಕ್ತೆ ಶ್ರೀಮತಿ ಡಾ.ಶಾಲಿನಿ ರಜನೀಶ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.