ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಗೌರವಧನ ಹೆಚ್ಚಳ: ಬಜೆಟ್ ನಲ್ಲಿ ಸಿದ್ದರಾಮಯ್ಯ ಘೋಷಣೆ

 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು 2,000 ರೂ.ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.   

Written by - Ranjitha R K | Last Updated : Mar 7, 2025, 11:26 AM IST
  • ಸಿಎಂ ಸಿದ್ದರಾಮಯ್ಯ 16ನೇ ಬಜೆಟ್ ಮಂಡಿಸುತ್ತಿದ್ದಾರೆ.
  • ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರಿಗೆ ಸಿಹಿ ಸುದ್ದಿ
  • ಬಿಸಿಯೂಟ ತಯಾರಿಸುವ ಸಿಬ್ಬಂದಿಗೂ ಬಂಪರ್
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಗೌರವಧನ ಹೆಚ್ಚಳ: ಬಜೆಟ್ ನಲ್ಲಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ 16ನೇ ಬಜೆಟ್ ಮಂಡಿಸುತ್ತಿದ್ದಾರೆ. ನಿರೀಕ್ಷೆಯಂತೆ ಸಿದ್ದರಾಮಯ್ಯ ಪೆಟ್ಟಿಗೆಯಿಂದ ಅನೇಕ ಯೋಜನೆಗಳನ್ನು ಪರಿಚಯಿಸಲಾಗುತ್ತಿದೆ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. 

Add Zee News as a Preferred Source

 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು 2,000 ರೂ.ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. 

ಇದನ್ನೂ ಓದಿ : Karnataka Budget 2025: ಸಿಎಂ ಸಿದ್ದು ಲೆಕ್ಕಾಚಾರ: ಜನರ ನಿರೀಕ್ಷೆಗಳೇನು?

ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ. 

ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದಾರೆ. 

ಇದನ್ನೂ ಓದಿ : ತುಟ್ಟಿಭತ್ಯೆ ಹೆಚ್ಚಳದ ಹೊಸ್ತಿಲಲ್ಲಿಯೇ ಶಾಕ್ ! DA ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡ ಸರ್ಕಾರ !

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News