ಬೆಂಗಳೂರು: ಸಿಂಗಾಪುರದ ಉದ್ಯಮಿಗಳು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ ಮುಂದೆ ಬಂದರೆ ಅವರಿಗೆ ಅಗತ್ಯವಾಗಿ ಬೇಕಾದ ಭೂಮಿ ಮತ್ತಿತರ ಮೂಲಸೌಕರ್ಯಗಳನ್ನು ಸಮರೋಪಾದಿಯಲ್ಲಿ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಅಲ್ಲಿನ ಉದ್ಯಮಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ತಮ್ಮನ್ನು ಇಲ್ಲಿ ಸೋಮವಾರ ಭೇಟಿಯಾದ `ಸಿಂಗಪುರ್ ಬಿಜಿನೆಸ್ ಫೆಡರೇಶನ್’(Singapore Business Federation)ನ ಉನ್ನತ ಮಟ್ಟದ ನಿಯೋಗದ ಸದಸ್ಯರೊಂದಿಗೆ ಅವರು ಉನ್ನತ ಮಟ್ಟದ ಮಾತುಕತೆ ನಡೆಸಿದರು. ಫೆಡರೇಶನ್ನಿನ ಉಪಾಧ್ಯಕ್ಷ ಪ್ರಸೂನ್ ಮುಖರ್ಜಿ ಈ ನಿಯೋಗದ ನೇತೃತ್ವ ವಹಿಸಿದ್ದರು.


ನಿಯೋಗದೊಂದಿಗೆ ಮಾತನಾಡಿದ ಸಚಿವ ಎಂ ಬಿ ಪಾಟೀಲ (Minister MB Patil), 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ `ಜಾಗತಿಕ ಹೂಡಿಕೆದಾರರ ಸಮಾವೇಶ’ದಲ್ಲಿ ಸಿಂಗಪುರದ ಉದ್ದಿಮೆಗಳು ಭಾಗವಹಿಸಬೇಕು ಎಂದು ಆಹ್ವಾನಿಸಿದರು.


ಇದನ್ನೂ ಓದಿ- ಅಕ್ಟೋಬರ್ 1 ರಿಂದ PPFನ ಮೂರು ನಿಯಮಗಳಲ್ಲಿ ಬದಲಾವಣೆ ! ಇನ್ನು ಮುಂದೆ ಈ ಹೂಡಿಕೆ ಮೇಲೆ ಸಿಗುವುದಿಲ್ಲ ಬಡ್ಡಿ !


ಮಾತುಕತೆಯ ಸಂದರ್ಭದಲ್ಲಿ ಸಿಂಗಪುರದ ಅಪ್ಲೈಡ್ ಟೋಟಲ್ ಕಂಟ್ರೋಲ್ ಟ್ರೀಟ್ಮೆಂಟ್ ಪಿಟಿಇ ಲಿಮಿಟೆಡ್, ಬಯೋಮೆಡ್ ಸರ್ವೀಸಸ್ ಪಿಟಿಇ ಲಿಮಿಟೆಡ್, ಕೇಟರಿಂಗ್ ಸೊಲ್ಯೂಷನ್ಸ್ ಲಿ, ಹರ್ಮಿಸ್ ಎಪಿಟೆಕ್ ಕಾರ್ಪೊರೇಷನ್, ಇನ್ಸ್ಫಿಯರ್ ಟೆಕ್ನಾಲಜಿ, ರೀಟ್ಜ್ ಲಿಮಿಟೆಡ್, ಯೂನಿವರ್ಸಲ್ ಸಕ್ಸಸ್ ಎಂಟರ್ಪ್ರೈಸಸ್ ಲಿಮಿಟೆಡ್ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿದವು. ಇದಕ್ಕೆ ಸ್ಪಂದಿಸಿದ ಸಚಿವರು ಭೂಮಿ ಮತ್ತು ಇತರ ಮೂಲಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು.


ಇದಕ್ಕೆ ಪ್ರತಿಕ್ರಿಯಿಸಿದ ಫೆಡರೇಶನ್ನಿನ ಸದಸ್ಯರು, ಬೆಂಗಳೂರಿನಲ್ಲಿ `ಸಿಂಗಪುರ ಬಿಜಿನೆಸ್ ಫೆಡರೇಶನ್’ನ ಕಚೇರಿಯನ್ನು ತೆರೆಯಲು ಆಸಕ್ತಿ ಹೊಂದಿರುವುದಾಗಿ ತಿಳಿಸಿದರು. ಅಲ್ಲದೆ, ರಾಜ್ಯ ಸರಕಾರವು ಸಹಕಾರ ನೀಡಿದರೆ ಕರ್ನಾಟಕದಲ್ಲಿ ಸಿಂಗಪುರ್ ಇರುವಂತೆ ಮಾಡಲಾಗುವುದು. ಈ ರೀತಿಯ ಸೌಲಭ್ಯ ಮತ್ತು ಪ್ರಾವೀಣ್ಯ ಹಾಗೂ ಬಂಡವಾಳ ಹೂಡಿಕೆಯ ಶಕ್ತಿ ತಮ್ಮ ಒಕ್ಕೂಟಕ್ಕಿದೆ ಎಂದು ತಿಳಿಸಿದರು.


ಇದನ್ನೂ ಓದಿ- ನಾನು ಡೇಟ್ ಮಾಡಲು ಬಯಸಿದ್ದು ಈ ರಾಜಕಾರಣಿಯನ್ನು !ಮುಖೇಶ್ ಅಂಬಾನಿ ಮುಂದೆಯೇ ಮನದ ಮಾತು ಹೊರ ಹಾಕಿದ ನೀತಾ


ನಿಯೋಗದಲ್ಲಿ ಹೆಸರಾಂತ ಉದ್ಯಮಿಗಳಾದ ಜೆಫ್ರಿ ಗುವೋ, ಡಗ್ಲಾಸ್ ಟ್ಯಾನ್, ಸಮಂತಾ ಟಿಯೋ, ಚೆನ್ ಚಿಯೋಂಗ್, ಮಾರ್ಕಸ್ ಸಿಯಾ, ಪಪ್ಪು ಮಿಲಿಂದ್ ಸುರೇಶ್, ಎಸ್ ಮಹೇಂದ್ರನ್, ಜೆಫ್ರಿ ಕಾಂಗ್ ಮತ್ತು ಶಂಭುನಾಥ್ ರೇ ಇದ್ದರು. ರಾಜ್ಯ ಸರಕಾರದ ಪರವಾಗಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
WhatsApp Channel- bit.ly/46lENGm
Facebook Link - https://bit.ly/3Hhqmcj 
Youtube Link - https://www.youtube.com/watch?v=kr-YIH866cM
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
Twitter Link - https://bit.ly/3n6d2R8  ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.