Karnataka Budget 2024: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕಿಯರಿಗೆ ಸ್ಮಾರ್ಟ್ ಫೋನ್, ಗ್ರಾಚ್ಯುಟಿ ಸವಲತ್ತು

Karnataka Budget 2024:ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕಿಯರಿಗೆ 75,938 ಸ್ಮಾರ್ಟ್ ಫೋನ್ ನೀಡುವ ಬಗ್ಗೆ ಸಿದ್ದರಾಮಯ್ಯ ಘೋಷಿಸಿದ್ದಾರೆ. 

Written by - Ranjitha R K | Last Updated : Feb 16, 2024, 12:35 PM IST
  • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ನೀಡಿದ್ದೇನು ?
  • ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ವಿಶೇಷ ಪ್ಯಾಕೇಜ್
  • 200 ಕೋಟಿ ರೂ.ಗಳ ವೆಚ್ಚದಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣ
Karnataka Budget 2024: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕಿಯರಿಗೆ ಸ್ಮಾರ್ಟ್ ಫೋನ್,  ಗ್ರಾಚ್ಯುಟಿ ಸವಲತ್ತು title=

ಬೆಂಗಳೂರು : Latest news on Karnataka state budget 2024: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿಯಡಿ  2024-25ನೇ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  

ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ  ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 ಕೋಟಿ APL, BPL, AAY ಪಡಿತರ ಚೀಟಿ ಹೊಂದಿರುವ ಯಜಮಾನಿ ಮಹಿಳೆಯರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಈವರೆಗೆ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ ಎದ್ನು ಸಿದ್ದರಾಮಯ್ಯ ಹೇಳಿದ್ದಾರೆ. 

ಇದನ್ನೂ ಓದಿ :  Karnataka Budget 2024: ಸಿಎಂ ಸಿದ್ದರಾಮಯ್ಯರ ಬಜೆಟ್‌ನಲ್ಲಿ ಯಾವ್ಯಾವ ಇಲಾಖೆಗೆ ಸಿಕ್ಕಿದ್ದೆಷ್ಟು..?

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ನೀಡಿದ್ದೇನು ? : 
-ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 
-ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ.
-ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕಿಯರಿಗೆ 75,938 ಸ್ಮಾರ್ಟ್ ಫೋನ್ 
- 200 ಕೋಟಿ ರೂ.ಗಳ ವೆಚ್ಚದಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣ   
-ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತು
- ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ
- ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು 1500 ರೂ.ಗಳಿಂದ 2000 ರೂ.ಗಳಿಗೆ ಹೆಚ್ಚಳ  
-ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ವಿಶೇಷ ಪ್ಯಾಕೇಜ್
-2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ  86,423 ಕೋಟಿ ರೂ.
-ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2024-25ನೇ ಸಾಲಿನಲ್ಲಿ 54,617 ಕೋಟಿ ರೂ.

ಇದನ್ನೂ ಓದಿ :  Karnataka budget 2024: ಬೆಂಗಳೂರು ಓಪನ್ ಟಿಲ್ 1 am; ಸುರಂಗ ಮಾರ್ಗ ಕೇವಲ ಆಶ್ವಾಸನೆ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News