ನವದೆಹಲಿ : ಇತ್ತೀಚಿನ ದಿನಗಳಲ್ಲಿ ಪ್ಯಾನ್ ಕಾರ್ಡ್ (PAN Card) ಪ್ರಮುಖ ದಾಖಲೆಯಾಗಿದೆ. ಸರ್ಕಾರಿ ಮತ್ತು ಖಾಸಗಿ ಕೆಲಸ ಮಾಡಲು ಪ್ಯಾನ್ ಕಾರ್ಡ್ ಬಳಕೆ ಕಡ್ಡಾಯವಾಗಿದೆ. ಬ್ಯಾಂಕಿನಲ್ಲಿ ಖಾತೆ ತೆರೆಯಲು, ಕ್ರೆಡಿಟ್ ಕಾರ್ಡ್ (Credit Card)ಮತ್ತು ಡೆಬಿಟ್ ಕಾರ್ಡ್ ತೆಗೆದುಕೊಳ್ಳಲು ಅಥವಾ ಐಟಿಆರ್ ಫೈಲ್ (ITR File) ಮಾಡಲು, ಪ್ಯಾನ್ ಕಾರ್ಡ್ ಬೇಕೇ ಬೇಕು. ಹೀಗಿದ್ದಾಗ ಒಂದು ವೇಳೆ, ಪ್ಯಾನ್ ಕಾರ್ಡ್ ಕಳೆದುಹೋದರೆ, ಏನು ಮಾಡುವುದು?  ಪ್ಯಾನ್ ಕಾರ್ಡ್ ಕಳೆದು ಹೋದರೆ ಈಗ ಚಿಂತೆ ಮಾಡಬೇಕಿಲ್ಲ. ಇ-ಪ್ಯಾನ್ ಕಾರ್ಡ್ ಅನ್ನು ಆದಾಯ ತೆರಿಗೆಯ ಹೊಸ ವೆಬ್‌ಸೈಟ್‌ನಿಂದ ಸುಲಭವಾಗಿ ಡೌನ್‌ಲೋಡ್ ಮಾಡಬಹುದು. 


COMMERCIAL BREAK
SCROLL TO CONTINUE READING

ಪ್ಯಾನ್ ಸಂಖ್ಯೆಯೊಂದಿಗೆ ಇ-ಪ್ಯಾನ್ ಅನ್ನು ಡೌನ್‌ಲೋಡ್ ಮಾಡುವುದು ಹೇಗೆ ?
1. ಮೊದಲನೆಯದಾಗಿ ಆದಾಯ ತೆರಿಗೆ ವೆಬ್‌ಸೈಟ್  https://www.incometax.gov.in/iec/foportal ಗೆ ಲಾಗಿನ್ ಮಾಡಿ .
2. ಈಗ 'Instant E PAN' ಮೇಲೆ ಕ್ಲಿಕ್ ಮಾಡಿ. 
3. ಮುಂದೆ,  'New E PAN'ಮೇಲೆ ಕ್ಲಿಕ್ ಮಾಡಿ. 
4. ಈಗ ನೀವು ನಿಮ್ಮ PAN ಸಂಖ್ಯೆಯನ್ನು ನಮೂದಿಸಿ.
5. ನಿಮ್ಮ ಪ್ಯಾನ್ ಸಂಖ್ಯೆ ನಿಮಗೆ ನೆನಪಿಲ್ಲದಿದ್ದರೆ, ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ.
6. ಇಲ್ಲಿ ಹಲವು ನಿಯಮಗಳು ಮತ್ತು ಷರತ್ತುಗಳನ್ನು ನೀಡಲಾಗಿದೆ, ಅವುಗಳನ್ನು ಎಚ್ಚರಿಕೆಯಿಂದ ಓದಿ ನಂತರ ''Accept' ಕ್ಲಿಕ್ ಮಾಡಿ.
7. ಈಗ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. ಅದನ್ನು ಹಾಕಿ. 
8. ಈಗ ನೀಡಿರುವ ವಿವರಗಳನ್ನು ಓದಿದ ನಂತರ, ' 'Confirm' ಮಾಡಿ 
10. ಈಗ ನಿಮ್ಮ PAN ಅನ್ನು PDF ರೂಪದಲ್ಲಿ ನಿಮ್ಮ ಇಮೇಲ್ ಐಡಿಗೆ ಕಳುಹಿಸಲಾಗುತ್ತದೆ.
11. ಇಲ್ಲಿಂದ ನಿಮ್ಮ 'ಇ-ಪ್ಯಾನ್' ಅನ್ನು ಡೌನ್‌ಲೋಡ್ ಮಾಡಬಹುದು.


ಇದನ್ನೂ ಓದಿ : PM Awas Yojanaಯ ಹೊಸ ನಿಯಮದ ಪ್ರಕಾರ ಹಂಚಿಕೆಯಾದ ಮನೆಯು ರದ್ದಾಗಬಹುದು..!


ಪ್ಯಾನ್-ಆಧಾರ್ ಲಿಂಕ್ ಕಡ್ಡಾಯ :  
ಗಮನಿಸಿ, ನಿಮ್ಮ ಪ್ಯಾನ್ ಸಂಖ್ಯೆ ನಿಮಗೆ ನೆನಪಿಲ್ಲದಿದ್ದರೆ ಅಥವಾ ನೀವು ಗೊಂದಲಕ್ಕೊಳಗಾಗಿದ್ದರೆ ನಿಮ್ಮ ಆಧಾರ್ ಕಾರ್ಡ್‌ನ ಸಹಾಯದಿಂದ  ಇ-ಪ್ಯಾನ್ ಕಾರ್ಡ್ ಅನ್ನು ಡೌನ್‌ಲೋಡ್ (ePAN Download) ಮಾಡಬಹುದು. ಆದರೆ ಇದಕ್ಕಾಗಿ ನಿಮ್ಮ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್‌ನ ಲಿಂಕ್ (PAN Aadhaar link) ಆಗಿರಲೇಬೇಕು. ಪ್ಯಾನ್ ಮತ್ತು ಆಧಾರ್ ಲಿಂಕ್ ಆಗಿರದಿದ್ದರೆ, ಇ-ಪ್ಯಾನ್ ಅನ್ನು ಡೌನ್‌ಲೋಡ್ ಮಾಡಲು ಸಾಧ್ಯವಾಗುವುದಿಲ್ಲ.


ಇದನ್ನೂ ಓದಿ : ವೇತನ ಮತ್ತು ರಜಾ ನಿಯಮಗಳಿಗೆ ಸಂಬಂಧಿಸಿದಂತೆ ಭಾರೀ ಬದಲಾವಣೆ, ಏನು ಹೇಳುತ್ತದೆ New Wage Code


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.