Karnataka Budget 2025 : SSLC ಮತ್ತು PUC ಪರೀಕ್ಷೆಗಳ ಫಲಿತಾಂಶದಲ್ಲಿ ಸುಧಾರಣೆ ತರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಗಮನ ಹರಿಸಿದ್ದಾರೆ. ಇದಕ್ಕಾಗಿ ಹಲವು ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಹೊರಟಿದ್ದಾರೆ. LKG ಯಿಂದ ದ್ವಿತೀಯ ಪಿ.ಯು.ಸಿ ವರೆಗಿನ ಎಲ್ಲಾ ತರಗತಿಗಳ ವಿದ್ಯಾರ್ಥಿಗಳು, ಆಯಾ ತರಗತಿಗೆ ತಕ್ಕಂತೆ ಕಲಿಕೆಯ ಮಟ್ಟವನ್ನು ಹೊಂದುವ ನಿಟ್ಟಿನಲ್ಲಿ ಮೂರು ವರ್ಷಗಳ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಲು ತೀರ್ಮಾನಿಸಿದ್ದಾರೆ.
ಫಲಿತಾಂಶ ಸುಧಾರಿಸಲು ಕೈಗೊಂಡ ಕ್ರಮ :
1) ಪ್ರಸ್ತುತ 2,619 ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಟ್ಟು 90,195 ವಿದ್ಯಾರ್ಥಿಗಳು ದಾಖಲಾಗಿರುತ್ತಾರೆ. ಈ ಯೋಜನೆಯನ್ನು 70 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 5,000 ಶಾಲೆಗಳಿಗೆ ವಿಸ್ತರಿಸಲಾಗುವುದು.
ii) 'ಕಲಿಕಾ ಚಿಲುಮೆ' ಕಾರ್ಯಕ್ರಮದಡಿ ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂತಸದಾಯಕ ಕಲಿಕಾ ಅನುಭವ ಒದಗಿಸುವುದು.
ಇದನ್ನೂ ಓದಿ : Karnataka Budget 2025 : ಕರ್ನಾಟಕ ಪಬ್ಲಿಕ್ ಶಾಲೆಗಳವಿಸ್ತರಣೆ ! ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣು ಆರು ದಿನವೂ ಲಭ್ಯ !
iii) 'ಗಣಿತ ಗಣಕ' ಕಾರ್ಯಕ್ರಮದಡಿ 3 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಫೋನ್ ಮೂಲಕ ವೈಯಕ್ತಿಕ ಬೋಧನೆಯೊಂದಿಗೆ ಬುನಾದಿ ಗಣಿತ ಕೌಶಲ್ಯವನ್ನು ಅಭಿವೃದ್ಧಿಪಡಿಸಿ ರಾಜ್ಯಾದ್ಯಂತ ವಿಸ್ತರಿಸುವುದು.
iv) 'ಓದು ಕರ್ನಾಟಕ' ಯೋಜನೆಯಡಿ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾಜ್ಞಾನದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವುದು.
v) ಸರ್ಕಾರಿ ಶಾಲೆಗಳಲ್ಲಿ ಅತೀ ಕಡಿಮೆ ಕಲಿಕಾ ಸ್ತರದಲ್ಲಿರುವ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವ 'ಮರುಸಿಂಚನ' ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸುವುದು.
vi) ಕನ್ನಡ ಮತ್ತು ಆಂಗ್ಲ ಭಾಷೆಯನ್ನು ಆತ್ಮವಿಶ್ವಾಸದಿಂದ ಓದಲು ಹಾಗೂ ಗಣಿತದ ಆರಂಭಿಕ ಸಾಮರ್ಥ್ಯಗಳನ್ನು ಗಳಿಸಲು Ek-Step ಸಂಸ್ಥೆಯ ಸಹಯೋಗದೊಂದಿಗೆ AI ಆಧಾರಿತ 'ಕಲಿಕಾದೀಪ' ಕಾರ್ಯಕ್ರಮವನ್ನು 2,000 ಶಾಲೆಗಳಿಗೆ ವಿಸ್ತರಿಸುವುದು.
ಇದನ್ನೂ ಓದಿ : ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಗೌರವಧನ ಹೆಚ್ಚಳ: ಬಜೆಟ್ ನಲ್ಲಿ ಸಿದ್ದರಾಮಯ್ಯ ಘೋಷಣೆ
vii) 'ಜ್ಞಾನಸೇತು' ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳಲ್ಲಿ ವಿಜ್ಞಾನ ಮತ್ತು ಗಣಿತ ವಿಷಯಗಳ ಬೋಧನಾ ವಿಧಾನದಲ್ಲಿ ನಾವೀನ್ಯತೆ ಅಳವಡಿಸಿ, ಖಾನ್ ಅಕಾಡೆಮಿ ಸಹಯೋಗದಲ್ಲಿ ಯೋಜನೆ ರೂಪಿಸಲಾಗುವುದು. ರಾಜ್ಯದ 5,000 ಸರ್ಕಾರಿ ಶಾಲೆಗಳ 20 ಲಕ್ಷ ವಿದ್ಯಾರ್ಥಿಗಳು ಹಾಗೂ 15,000 ಶಿಕ್ಷಕರು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ.
viii) ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೋಡಿಂಗ್ ಕಲಿಕೆ ಪರಿಚಯಿಸಲು ಅಗಸ್ಯ ಫೌಂಡೇಶನ್ ಸಹಯೋಗದೊಂದಿಗೆ ಐ-ಕೋಡ್ ಲ್ಯಾಬ್ ಸ್ಥಾಪಿಸಲಾಗುವುದು. ಈ ನಿಟ್ಟಿನಲ್ಲಿ ಪ್ರಸಕ್ತ ವರ್ಷ ICT ಸೌಲಭ್ಯವಿರುವ ಆಯ್ದ 63 ಶಾಲೆಗಳನ್ನು ಹಬ್ ಗಳೆಂದು ಪರಿಗಣಿಸಿ 756 ಸ್ಪೋಕ್ ಶಾಲೆಗಳಿಗೆ ಅನುಕೂಲ ಕಲ್ಪಿಸುವುದು.
ix) 'ವಿದ್ಯಾವಿಜೇತ' ಕಾರ್ಯಕ್ರಮದಡಿ ಪೂರ್ವ ಕಾಲೇಜುಗಳ ಸರ್ಕಾರಿ ಪದವಿ 25,000 ವಿದ್ಯಾರ್ಥಿಗಳಿಗೆ CET/NEET/JEE ತರಬೇತಿ ನೀಡಲಾಗಿದ್ದು, ಸದರಿ ಕಾರ್ಯಕ್ರಮವನ್ನು ಮುಂದುವರೆಸಲು 5 ಕೋಟಿ ರೂ. ಒದಗಿಸಲಾಗುವುದು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.









