ಇನ್ನೂ ನಿಮ್ಮ ಖಾತೆ ಸೇರಿಲ್ಲವೇ ಗೃಹ ಲಕ್ಷ್ಮಿ ಯೋಜನೆಯ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು?
Gruha Lakshmi: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಲ್ಲಿ ಇದುವರೆಗೂ 93 ಲಕ್ಷ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
Minister Lakshmi Hebbalkar About Gruha Lakshmi Scheme: ಸಿಎಂ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ 'ಗೃಹ ಲಕ್ಷ್ಮಿ' ಯೋಜನೆಯಲ್ಲಿ ಮಹಿಳೆಯರಿಗೆ 2,000ರೂ.ಗಳ ಆರ್ಥಿಕ ನೆರವನ್ನು ನೀಡಲಾಗುತ್ತಿದೆ. ಆದಾಗ್ಯೂ, ಇದುವರೆಗೂ 9.44ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿಲ್ಲ. ಈ ಕುರಿತಂತೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮೀ ಯೋಜನೆಯ ಗೊಂದಲದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಕೆಲವರು ಗೃಹಲಕ್ಷ್ಮಿ ಯೋಜನೆಯ 2,000 ರೂ. ಖಾತೆಗೆ ಜಮೆ ಆಗಿದೆ ಎಂದು ಸಂತಸಗೊಂಡಿದ್ದರೆ, ಇನ್ನೂ ಕೆಲವೆಡೆ ಮಹಿಳೆಯರು ತಮ್ಮ ಖಾತೆಗೆ ಇನ್ನೂ ಸಹ ಗೃಹಲಕ್ಷ್ಮೀ ಯೋಜನೆ ಹಣ ಜಮೆಯಾಗಿಲ್ಲ ಎಂದು ಬೇಸರಗೊಂಡಿದ್ದಾರೆ. ಈ ಹಿನ್ನೆಲೆ ಮಾದ್ಯಮ ಪ್ರಕಟಣೆ ಹೊರಡಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಇದನ್ನೂ ಓದಿ- ಜನಜಾಗೃತಿಯಿಂದ ವನ್ಯಜೀವಿ ಸಂರಕ್ಷಣೆ ಸಾಧ್ಯ: ಸಚಿವ ಈಶ್ವರ ಖಂಡ್ರೆ
ಆಗಸ್ಟ್ ತಿಂಗಳಲ್ಲಿ 1.08ಕೋಟಿ ಅರ್ಜಿ ಸಲ್ಲಿಕೆಯಾಗಿತ್ತು. ಆಗಸ್ಟ್ ತಿಂಗಳಲ್ಲಿ 1.08ಕೋಟಿ ಅರ್ಜಿದಾರರಿಗೆ ಸರ್ಕಾರ 2169ಕೋಟಿ ರೂ. ಹಣ ಬಿಡುಗಡೆ ಮಾಡಿತ್ತು. 1.8ಕೋಟಿ ಅರ್ಜಿದಾರರಲ್ಲಿ 93ಲಕ್ಷ ಫಲಾನುಭವಿಗಳಿಗೆ ಹಣ ಜಮೆ ಆಗಿದೆ. 5.5ಲಕ್ಷ ಅರ್ಜಿದಾರರಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಚಾಲ್ತಿಯಲ್ಲಿದೆ. ಆದಾಗ್ಯೂ, ಇದುವರೆಗೂ 9.44ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲ ಎಂದವರು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಹಣ ಜಮೆಯಾಗದಿರೋದಕ್ಕೆ ಕಾರಣ ನೀಡಿರುವ ಸಚಿವೆ ಹೆಬ್ಬಾಳ್ಕರ್!
ಇನ್ನೂ 9.44ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆ ಆಗದೇ ಇರುವುದಕ್ಕೂ ಕಾರಣ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, 3082 ಅರ್ಜಿದಾರರು ಮರಣ ಹೊಂದಿದ್ದು ಅವುಗಳನ್ನು ಅನರ್ಹಗೊಳಿಸಲಾಗಿದೆ. 1ಲಕ್ಷದ 59ಸಾವಿರದ ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. 5ಲಕ್ಷದ 96ಸಾವಿರದ 268ಅರ್ಜಿದಾರ ಬ್ಯಾಂಕ್ ಆಧಾರ್ ಜೋಡಣೆಯಾಗಿಲ್ಲ. 1 ಲಕ್ಷದ 75 ಸಾವಿರ 683 ಅರ್ಜಿದಾರರ ಹೆಸರು ಮತ್ತು ವಿಳಾಸದಲ್ಲಿ ವ್ಯತ್ಯಾಸ ಕಂಡು ಬಂದಿದೆ. 9766 ಅರ್ಜಿ ಸೇವಾಸಿಂದು ವತಿಯಿಂದ ಪುನರ್ ಪರೀಶೀಲನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ- ಕಡಿಮೆ ಹೂಡಿಕೆ ಮಾಡಿ ಲಕ್ಷ ಲಕ್ಷ ಗಳಿಸುವ ಬ್ಯುಸಿನೆಸ್ ಐಡಿಯಾ!
ಸೆಪ್ಟೆಂಬರ್ ತಿಂಗಳಲ್ಲಿ 1ಕೋಟಿ 14ಲಕ್ಷ ಜನ ಗೃಹಲಕ್ಷ್ಮೀ ಫಲಾನುಭವಿಗಳಿದ್ದಾರೆ ಎಂದು ತಿಳಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಪ್ಟೆಂಬರ್ ತಿಂಗಳ ಗೃಹಲಕ್ಷ್ಮೀ ಯೋಜನೆಗಾಗಿ 2280ಕೋಟಿ ಹಣವನ್ನ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.