ಸರ್ಕಾರಿ ಅಧಿಕಾರಿಗಳಿಗೆ-ಆದಾಯ ತೆರಿಗೆ ಕಟ್ಟುವವರಿಗೆ ಬಿಪಿಎಲ್ ಕಾರ್ಡ್ ಕೊಡಬೇಕಾ? ಸಿಎಂ
BPL Card: ಹಿಂದಿನ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಅನ್ಯಾಯ ಅನ್ಯಾಯ ಅಂತ ಸುಳ್ ಸುಳ್ಳೇ ಹೇಳಿ ಬಿಜೆಪಿ ನಾಯಕರು ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ - ಸಿಎಂ ಸಿದ್ದರಾಮಯ್ಯ
CM Siddaramaiah On BPL Card: ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಆದಾಯ ತೆರಿಗೆ ಪಾವತಿಸುವವರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಏನ್ ಆರ್.ಅಶೋಕಾ ಫೋಟೋ ತೆಗೆಸಿಕೊಂಡಿದ್ದೇ ಕೊಂಡಿದ್ದು ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.
ಮೈಸೂರು ವಿಮಾನ ನಿಲ್ದಾಣದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸರ್ಕಾರಿ ನೌಕರರಿಗೆ, ಆದಾಯ ತೆರಿಗೆ ಪಾವತಿಸುವವರಿಗೆ ಬಿಪಿಎಲ್ ಕಾರ್ಡ್ ಕೊಡಬಾರದು ಅಂತ ನಿಯಮಾವಳಿ, ಗೈಡ್ ಲೈನ್ ರಚಿಸಿದ್ದೇ ಬಿಜೆಪಿ. ಈಗ ಇವರೇ ಪ್ರತಿಭಟನೆ ಅಂತ ಫೋಟೋ ತೆಗೆಸಿಕೊಳ್ತಾ ಇದಾರೆ ಎಂದು ವಿರೋಧ ಪಕ್ಷದ ವಿರುದ್ಧ ಹರಿಹಾಯ್ದರು.
ಇದನ್ನೂ ಓದಿ- ಬಿಪಿಎಲ್ ಕಾರ್ಡ್ ರದ್ದು ಖಂಡಿಸಿ ಕನ್ನಡಪರ ಹೋರಾಟಗಾರರಿಂದ ತಮಟೆ ಚಳವಳಿ
ಕೇಂದ್ರ ಸರ್ಕಾರವೇ ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಿದೆ. ಈಗ ಅವರೇ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರಲ್ಲಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಆಕ್ರೋಶಗೊಂಡ ಸಿಎಂ, ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಇದನ್ನು ಬಿಜೆಪಿ ವಿರೋಧಿಸಿತ್ತು. ಹಿಂದಿನ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಅನ್ಯಾಯ ಅನ್ಯಾಯ ಅಂತ ಸುಳ್ ಸುಳ್ಳೇ ಹೇಳಿ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ- ಅನರ್ಹ ಬಿಪಿಎಲ್ ಕಾರ್ಡುದಾರರಿಗೆ ಬಿಗ್ ಶಾಕ್..! 14 ಲಕ್ಷ BPL ಕಾರ್ಡ್ ಶೀಘ್ರವೇ ರದ್ದು!
ಮೊದಲಿಗೆ ರಾಜ್ಯದ ಜನರಿಗೆ ಏಳು ಕೆಜಿ ಅಕ್ಕಿ ಕೊಟ್ಟವರು ನಾವು. ಇದನ್ನು ಐದು ಕೆಜಿಗೆ ಇಳಿಸಿದ್ದು ಯಡಿಯೂರಪ್ಪ. ಈಗ ಯಡಿಯೂರಪ್ಪ ಅವರ ಮಗ ವಿಜಯೇಂದ್ರನಿಗೆ ಈ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಯಡಿಯೂರಪ್ಪ ಅಕ್ಕಿ ಪ್ರಮಾಣವನ್ನು ಐದು ಕೆಜಿಗೆ ಇಳಿಸಿದ್ದನ್ನು ಹತ್ತು ಕೆಜಿಗೆ ಏರಿಸಿದ್ದು ನಾವು. ಈ ಸತ್ಯ ರಾಜ್ಯದ ಜನರಿಗೆ ಗೊತ್ತಿದೆ ಎಂದರು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ