Bangalore Bill : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 15ನೇ ಬಜೆಟ್ ನಲ್ಲಿ ಬೆಂಗಳೂರು ವ್ಯಾಪಾರ ಉತ್ತೇಜನ ನೀಡಲು ಬೆಳಗ್ಗಿನ ಜಾವ ಒಂದು ಗಂಟೆ ವರೆಗೆ ನಿರ್ಬಂಧನೆ ಸಡಿಲ ಮಾಡಿ ಘೋಷಣೆ ಮಾಡಿದರು.


COMMERCIAL BREAK
SCROLL TO CONTINUE READING

ಬೆಂಗಳೂರು ಹಾಗೂ 10 ಮಹಾನಗರ ಪಾಲಿಕೆಗಳಲ್ಲಿ ವಾಣಿಜ್ಯ ಮತ್ತು ವ್ಯಾಪಾರದ ದೃಷ್ಟಿಯಿಂದ ರಾತ್ರಿಯ ವೇಳೆ ವ್ಯಾಪಾರ-ವಹಿವಾಟಿನ ಮೇಲಿನ ನಿರ್ಬಂಧವನ್ನು ಬೆಳಗಿನ ಜಾವ ಒಂದು ಗಂಟೆಯವರೆಗೆ (1:00 am) ವಿಸ್ತರಿಸಲಾಗುವುದು, ಎಂದು ಹೇಳಿದರು.


ಮನೆಗಳಿಂದ ತ್ಯಾಜ್ಯ ಸಂಸ್ಕರಣಾ ಘಟಕಗಳವರೆಗೂ ತ್ಯಾಜ್ಯಗಳ ವಿಲೇವಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಬೆಂಗಳೂರು ನಗರ ಜಿಲ್ಲೆಯನ್ನು ನಾಲ್ಕು ವಲಯಗಳನ್ನಾಗಿ ವಿಂಗಡಿಸಿ, ಪ್ರತಿಯೊಂದು ವಲಯಕ್ಕೂ ನುರಿತ ಸಂಸ್ಥೆಯನ್ನು ಪಾರದರ್ಶಕವಾಗಿ ನೇಮಿಸಲಾಗುವುದು. ನಗರದ ಹೊರವಲಯದ ನಾಲ್ಕು ಕಡೆಗಳಲ್ಲಿ 50 ರಿಂದ 100 ಎಕರೆ ಜಮೀನನ್ನು ಗುರುತಿಸಿ ಮುಂದಿನ 30 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟು ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ಅವಕಾಶ ಕಲ್ಪಿಸಲಾಗುವುದು.


ಇದನ್ನೂ ಓದಿ: Karnataka Budget 2024:ಒಲಿಂಪಿಕ್, ಕಾಮನ್ ವೆಲ್ತ್ ವಿಜೇತರಿಗೆ ಭರ್ಜರಿ ಘೋಷಣೆ


ಸಂಚಾರ ದಟ್ಟನೆ ನಿರ್ವಹನೆಗೆ ಸಣ್ಣ ಪ್ರಯತ್ನ :


ಜಪಾನ್ ಸರ್ಕಾರದ ಸಹಯೋಗದೊಂದಿಗೆ ಬೆಂಗಳೂರು ನಗರದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು Area Traffic Signal Control System ಅನ್ನು ನಗರದ ಪ್ರಮುಖ 28 ಜಂಕ್ಷನ್‌ಗಳಲ್ಲಿ ಅಳವಡಿಸುವ ಮೂಲಕ ಟ್ರಾಫಿಕ್ ಸಿಗ್ನಲ್ ನಲ್ಲಿ ವಾಹನಗಳ ಸಂದಣಿಯನ್ನು ಶೇ.30ರಷ್ಟು ಹಾಗೂ ಸರಾಸರಿ ವಿಳಂಬವನ್ನು ಶೇ.13ರಷ್ಟು ಕಡಿಮೆಗೊಳಿಸಲಾಗುವುದು.


ಹಣ ಘೋಷಣೆ ಇಲ್ಲದೆ, ಬಜೆಟ್ ಪ್ರತಿಗೆ ಸೀಮಿತವಾಯ್ತಾ ಸುರಂಗ ಮಾರ್ಗ ಘೋಷಣೆ?


ಸಂಚಾರ ದಟ್ಟನೆ ನಿರ್ವಹನೆಗೆ ಸುರಂಗ ಮಾರ್ಗ ಯೋಜನೆ ಘೋಷಣೆಯನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದು, ಯಾವುದೇ ಆರ್ಥಿಕ ಘೋಷಣೆ ಇಲ್ಲದೆ ಕೇವಲ ನಿರ್ಮಾಣದ ಆಶ್ವಾಸನೆ ನೀಡಿದರು. ಭೂಮಿಯ ಅಲಭ್ಯತೆ ಮತ್ತು ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ತೊಡಕುಗಳ ಕಾರಣ ಅಸ್ತಿತ್ವದಲ್ಲಿರುವ ರಸ್ತೆಗಳ ವಿಸ್ತರಣೆಯು ಅತ್ಯಂತ ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸುರಂಗ ಮಾರ್ಗ (Tunnel) ನಿರ್ಮಿಸುವ ಮೂಲಕ ನಗರದಲ್ಲಿ ಸಂಚಾರ ದಟ್ಟಣೆಯನ್ನು ಬಗೆಹರಿಸಲು ನಿರ್ಧರಿಸಿದೆ. ಈ ವರ್ಷ ಸಂಚಾರ ದಟ್ಟಣೆ ಅತ್ಯಂತ ತೀವ್ರವಾಗಿರುವ ಹೆಬ್ಬಾಳ ಜಂಕ್ಷನ್ ನಲ್ಲಿ ಪ್ರಾಯೋಗಿಕವಾಗಿ ಟನೆಲ್ ಅನ್ನು ನಿರ್ಮಿಸಲಾಗುವುದು, ಎಂದು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.