ಹಳೆ ಪೆನ್ಷನ್ ಯೋಜನೆಯ ಕುರಿತು ಇಲ್ಲಿದೆ ಒಂದು ಅಪ್ಡೇಟ್! ಈ ಸರ್ಕಾರಿ ನೌಕರರಿಗೆ ಸಿಗಲಿದೆ ಓಪಿಎಸ್ ಲಾಭ

Old Pension Scheme: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಧ್ಯಪ್ರದೇಶದಲ್ಲೂ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರುವುದಾಗಿ ಅಲ್ಲಿನ ಪ್ರತಿಪಕ್ಷ ನಾಯಕ ಕಮಲ್ ನಾಥ್ ಘೋಷಿಸಿದ್ದಾರೆ. ಆದರೆ, ಇದರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಯಾವುದೇ ಸ್ಪಷ್ಟ ಉತ್ತರ ನೀಡಿಲ್ಲ.  

Written by - Nitin Tabib | Last Updated : Jan 27, 2023, 12:47 PM IST
  • ಹಣಕಾಸು ಸಚಿವಾಲಯದ 2003 ರ ಅಧಿಸೂಚನೆ ಮತ್ತು ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯ 2020 ರ ಆಫೀಸ್ ಮೆಮೊರೆಂಡಮ್ ಅನ್ನು ಹೈಕೋರ್ಟ್ ತಿರಸ್ಕರಿಸಿದೆ.
  • ಜನವರಿ 1, 2004 ರ ಜಾಹೀರಾತಿನ ಪ್ರಕಾರ, ಕೇಂದ್ರ ಅರೆಸೇನಾ ಪಡೆಗಳಲ್ಲಿ ನೇಮಕಗೊಂಡ ಸಿಬ್ಬಂದಿಗಳು ಹಳೆಯ ಪಿಂಚಣಿ ಯೋಜನೆಯ ಪ್ರಯೋಜನಗಳಿಂದ ವಂಚಿತರಾಗಿದ್ದಾರೆ.
ಹಳೆ ಪೆನ್ಷನ್ ಯೋಜನೆಯ ಕುರಿತು ಇಲ್ಲಿದೆ ಒಂದು ಅಪ್ಡೇಟ್! ಈ ಸರ್ಕಾರಿ ನೌಕರರಿಗೆ ಸಿಗಲಿದೆ ಓಪಿಎಸ್ ಲಾಭ title=
ಹಳೆ ಪಿಂಚಣಿ ಯೋಜನೆ ಅಪ್ಡೇಟ್

NPS: ದೇಶದಲ್ಲಿ ಹಳೆಯ ಪಿಂಚಣಿ ಯೋಜನೆ (OPS) ಮರುಸ್ಥಾಪನೆ ಬಗ್ಗೆ ವಿಭಿನ್ನ ಚರ್ಚೆ ಪ್ರಾರಂಭವಾಗಿವೆ. ಹೊಸ ಪಿಂಚಣಿ ಯೋಜನೆಯನ್ನು (ಎನ್‌ಪಿಎಸ್) ಸ್ಥಗಿತಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವಂತೆ ದೇಶಾದ್ಯಂತ ನೌಕರರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರವಿರುವ ಕೆಲವು ರಾಜ್ಯಗಳು ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವುದಾಗಿ ಘೋಷಿಸಿವೆ. ಛತ್ತೀಸ್‌ಗಢ, ರಾಜಸ್ಥಾನ, ಹಿಮಾಚಲ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ಅಧಿಕಾರಕ್ಕೆ ಬಂದರೆ OPS ಅನ್ನು ಪುನಃ ಜಾರಿಗೆ ತರಲಾಗುವುದು
ಮಧ್ಯಪ್ರದೇಶದಲ್ಲೂ ಪ್ರತಿಪಕ್ಷ ಕಾಂಗ್ರೆಸ್ ನಾಯಕ ಕಮಲ್ ನಾಥ್ ಅಧಿಕಾರಕ್ಕೆ ಬಂದ ಮೇಲೆ ಹಳೆಯ ಪಿಂಚಣಿಯನ್ನು ಜಾರಿಗೊಳಿಸುವುದಾಗಿ ಘೋಷಿಸಿದ್ದಾರೆ. ಆದರೆ, ಇದರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಯಾವುದೇ ಸ್ಪಷ್ಟ ಉತ್ತರ ನೀಡಿಲ್ಲ. ಹಳೆಯ ಪಿಂಚಣಿ ಮರುಸ್ಥಾಪನೆಗೆ ಸಂಬಂಧಿಸಿದಂತೆ ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕರಾಡ್ ಅವರು ಕಳೆದ ದಿನಗಳಲ್ಲಿ ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದರು. ಏತನ್ಮಧ್ಯೆ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ಎಲ್ಲಾ ಸಿಬ್ಬಂದಿ ಹಳೆಯ ಪಿಂಚಣಿ ಯೋಜನೆಯ ಪ್ರಯೋಜನವನ್ನು ಪಡೆಯಲಿದ್ದಾರೆ.

ಇದನ್ನೂ ಓದಿ-ಯುವಕರಿಗೊಂದು ಭಾರಿ ಸಂತಸದ ಸುದ್ದಿ! ಏಪ್ರಿಲ್ 1 ರಿಂದ ಸಿಗಲಿದೆ ನಿರುದ್ಯೋಗ ಭತ್ಯೆ, ಎಷ್ಟು?

ಎಂಟು ವಾರಗಳಲ್ಲಿ ಮಾರ್ಗಸೂಚಿ ಹೊರಡಿಸಲು ಆದೇಶ
ದೆಹಲಿ ಹೈಕೋರ್ಟ್‌ನ ತೀರ್ಪಿನಲ್ಲಿ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಎಲ್ಲಾ ಉದ್ಯೋಗಿಗಳಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲು ಆದೇಶವನ್ನು ನೀಡಲಾಗಿದೆ ಎಂಬುದು ಇಲ್ಲಿ ಉಲ್ಲೇಖನೀಯ. ಎಂಟು ವಾರಗಳಲ್ಲಿ ಈ ಕುರಿತು ಅಗತ್ಯ ಮಾರ್ಗಸೂಚಿಗಳನ್ನು ನೀಡುವಂತೆ ಕೇಂದ್ರಕ್ಕೆ ನ್ಯಾಯಾಲಯ ಸೂಚಿಸಿದೆ.

ಇದನ್ನೂ ಓದಿ-ಎರಡು ಬಂಬಾಟ್ ಯೋಜನೆಗಳನ್ನು ಬಿಡುಗಡೆಗೊಳಿಸಿದ ಭಾರ್ತಿ ಏರ್ಟೆಲ್

ಕಚೇರಿ ಜ್ಞಾಪಕ ಪತ್ರವನ್ನು ತಿರಸ್ಕರಿಸಲಾಗಿದೆ
ಹಣಕಾಸು ಸಚಿವಾಲಯದ 2003 ರ ಅಧಿಸೂಚನೆ ಮತ್ತು ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯ 2020 ರ ಆಫೀಸ್ ಮೆಮೊರೆಂಡಮ್ ಅನ್ನು ಹೈಕೋರ್ಟ್ ತಿರಸ್ಕರಿಸಿದೆ. ಜನವರಿ 1, 2004 ರ ಜಾಹೀರಾತಿನ ಪ್ರಕಾರ, ಕೇಂದ್ರ ಅರೆಸೇನಾ ಪಡೆಗಳಲ್ಲಿ ನೇಮಕಗೊಂಡ ಸಿಬ್ಬಂದಿಗಳು ಹಳೆಯ ಪಿಂಚಣಿ ಯೋಜನೆಯ ಪ್ರಯೋಜನಗಳಿಂದ ವಂಚಿತರಾಗಿದ್ದಾರೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News