ಟಾಟಾ ಟಿಯಾಗೋ ಇವಿ:  ಇತ್ತೀಚೆಗೆ ಬಿಡುಗಡೆಯಾದ ಟಾಟಾ ಟಿಯಾಗೊ ಇವಿ ಭಾರತೀಯ ಮಾರುಕಟ್ಟೆಯಲ್ಲಿ ರೂ. 8.49 ಲಕ್ಷ (ಎಕ್ಸ್ ಶೋ ರೂಂ) ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಲಾಯಿತು. ಇದು ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಅಗ್ಗದ ಎಲೆಕ್ಟ್ರಿಕ್ ಕಾರ್ ಆಗಿದ್ದು, ಇದು 7 ರೂಪಾಂತರಗಳಲ್ಲಿ ಲಭ್ಯವಿದೆ. ಇದರ ಬೆಲೆ 11.79 ಲಕ್ಷ ರೂ. ಆಗಿದೆ. ಟಾಟಾ ಟಿಯಾಗೊ ಇವಿಯ ಮೊದಲ 10,000 ಯುನಿಟ್‌ಗಳಿಗೆ ಮಾತ್ರ ಈ ಬೆಲೆಗಳು ಅನ್ವಯಿಸಲಿವೆ. ಈ ಅಗ್ಗದ ಎಲೆಕ್ಟ್ರಿಕ್ ಕಾರನ್ನು ಟಾಟಾ ಮೋಟಾರ್ಸ್ ಕಳೆದ ತಿಂಗಳ ಕೊನೆಯಲ್ಲಿ ಲಾಂಚ್ ಮಾಡಿತ್ತು. ಅಕ್ಟೋಬರ್‌ನಲ್ಲಿ ಟಿಯಾಗೋ ಇವಿಗಾಗಿ ಬುಕಿಂಗ್ ಪ್ರಾರಂಭವಾಗಲಿದೆ ಎಂದು ಟಾಟಾ ಮೋಟಾರ್ಸ್ ಈ ಮೊದಲೇ ತಿಳಿಸಿತ್ತು. ಅದರಂತೆ ಟಾಟಾ ಟಿಯಾಗೊ ಇವಿ ಬುಕಿಂಗ್  ಅಕ್ಟೋಬರ್ 10, 2022 ರಿಂದ ಅಂದರೆ ಇಂದಿನಿಂದ ಪ್ರಾರಂಭವಾಗಲಿದೆ. ನೀವೂ ಈ ಕಾರನ್ನು ಕೊಳ್ಳಲು ಬಯಸಿದರೆ ಕೇವಲ 21,000 ರೂ.ಗೆ  ಹೊಸ ಟಾಟಾ ಟಿಯಾಗೊ ಇವಿ ಅನ್ನು ಬುಕ್ ಮಾಡಬಹುದಾಗಿದೆ.
 
ಬ್ಯಾಟರಿ ಪ್ಯಾಕ್, ಮೋಟಾರ್ ಮತ್ತು ಶ್ರೇಣಿ: 
ಟಾಟಾ ಟಿಯಾಗೊ ಇವಿ ಎರಡು ಬ್ಯಾಟರಿ ಪ್ಯಾಕ್‌ಗಳ ಆಯ್ಕೆಯನ್ನು ಹೊಂದಿದೆ - 19.2 kWh ಮತ್ತು 24 kWh. 19.2 kWh ಜೊತೆಗೆ, ಕಾರಿನಲ್ಲಿರುವ ಮೋಟಾರ್ 60 bhp ಪವರ್ ಮತ್ತು 110 Nm ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದು ಒಮ್ಮೆ ಸಂಪೂರ್ಣ ಚಾರ್ಜ್ ಮಾಡಿದರೆ 250 ಕಿ.ಮೀ.ವರೆಗೆ ಕ್ರಮಿಸುವ ಸಾಮರ್ಥ್ಯ ಹೊಂದಿದೆ. ಅದೇ ಸಮಯದಲ್ಲಿ, ದೊಡ್ಡ 24 kWh ಬ್ಯಾಟರಿ ಪ್ಯಾಕ್ ಹೊಂದಿರುವ ಕಾರಿನಲ್ಲಿರುವ ಮೋಟಾರ್ 74 bhp ಪವರ್ ಮತ್ತು 114 Nm ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದು ಫುಲ್ ಚಾರ್ಜ್ನಲ್ಲಿ 315 ಕಿಮೀ ವ್ಯಾಪ್ತಿಯನ್ನು ಪಡೆಯುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ- Hero MotoCorp ನ ಮೊದಲ ಇ-ಸ್ಕೂಟರ್ ಇಂದು ಬಿಡುಗಡೆ, ಬೆಲೆ ಮತ್ತು ವೈಶಿಷ್ಟ್ಯ ತಿಳಿಯಿರಿ


ವೈಶಿಷ್ಟ್ಯಗಳು:
ಟಾಟಾ ಟಿಯಾಗೊ ಇವಿ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಜೊತೆಗೆ), ನಾಲ್ಕು-ಸ್ಪೀಕರ್ ಹರ್ಮನ್ ಸೌಂಡ್ ಸಿಸ್ಟಮ್, ಆಟೋ ಎಸಿ, ಫೋಲ್ಡಬಲ್ ORVM ಗಳು, ರೈನ್ ಸೆನ್ಸಿಂಗ್ ವೈಪರ್‌ಗಳು ಮತ್ತು ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್‌ಗಳಂತಹ ಎಲ್ಲಾ ವೈಶಿಷ್ಟ್ಯಗಳನ್ನು ಪಡೆಯುತ್ತದೆ. ಇದು ಕ್ರೂಸ್ ಕಂಟ್ರೋಲ್ ಮತ್ತು ರಿಜೆನೆರೇಟಿವ್ ಬ್ರೇಕಿಂಗ್‌ನಂತಹ ವೈಶಿಷ್ಟ್ಯಗಳನ್ನು ಸಹ ಹೊಂದಿದೆ.


ಇದನ್ನೂ ಓದಿ- ರೈಲ್ವೇ ನಿಲ್ದಾಣದಲ್ಲಿ ಉಚಿತ ವೈಫೈ ಕುರಿತ ಬಿಗ್ ಅಪ್ಡೇಟ್


ಸುರಕ್ಷತಾ ವೈಶಿಷ್ಟ್ಯಗಳು:
ಇದರೊಂದಿಗೆ, ಸುರಕ್ಷತೆಯ ದೃಷ್ಟಿಯಿಂದ, ಇದು ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಕಾರ್ನರಿಂಗ್ ಬ್ರೇಕ್ ಕಂಟ್ರೋಲ್, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ (TPMS), EBD ಜೊತೆಗೆ ABS ಮತ್ತು ರಿಯರ್‌ವ್ಯೂ ಕ್ಯಾಮೆರಾವನ್ನು ಸಹ ಪಡೆಯುತ್ತದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.