PM Kisan Yojana : ಇಂದು ರೈತರಿಗೆ ಭರ್ಜರಿ ಗಿಫ್ಟ್ : ನಿಮ್ಮ ಖಾತೆಗೆ ಜಮಾ ಆಗಲಿದೆ 16,800 ಕೋಟಿ ಹಣ!

PM Kisan Samman Nidhi : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿಗಳಿಗೆ ಬಿಗ್ ನ್ಯೂಸ್ ಇದಾಗಿದೆ. ಪಿಎಂ ನರೇಂದ್ರ ಮೋದಿ ಅವರು ಇಂದು ಪಿಎಂ ಕಿಸಾನ್ ರೈತರ ಬ್ಯಾಂಕ್ ಖಾತೆಗಳಿಗೆ 16,800 ಕೋಟಿ ರೂಪಾಯಿಗಳನ್ನು ಜಮಾ  ಮಾಡಲಿದ್ದಾರೆ.

Written by - Channabasava A Kashinakunti | Last Updated : Feb 27, 2023, 07:28 AM IST
  • ವಾರ್ಷಿಕ 6000 ರೂ. ನೀಡಲಾಗುತ್ತದೆ
  • ಕೃಷಿ ಸಚಿವರು ಸೇರಿದಂತೆ ಹಲವು ಸಚಿವರು ಭಾಗಿ
  • ಎಷ್ಟು ಕಂತುಗಳನ್ನು ಬಿಡುಗಡೆ ಮಾಡಲಾಗಿದೆ?
PM Kisan Yojana : ಇಂದು ರೈತರಿಗೆ ಭರ್ಜರಿ ಗಿಫ್ಟ್ : ನಿಮ್ಮ ಖಾತೆಗೆ ಜಮಾ ಆಗಲಿದೆ 16,800 ಕೋಟಿ ಹಣ! title=

PM Kisan Samman Nidhi Scheme : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿಗಳಿಗೆ ಬಿಗ್ ನ್ಯೂಸ್ ಇದಾಗಿದೆ. ಪಿಎಂ ನರೇಂದ್ರ ಮೋದಿ ಅವರು ಇಂದು ಪಿಎಂ ಕಿಸಾನ್ ರೈತರ ಬ್ಯಾಂಕ್ ಖಾತೆಗಳಿಗೆ 16,800 ಕೋಟಿ ರೂಪಾಯಿಗಳನ್ನು ಜಮಾ  ಮಾಡಲಿದ್ದಾರೆ. ಈ ಬಗ್ಗೆ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

ವಾರ್ಷಿಕ 6000 ರೂ. ನೀಡಲಾಗುತ್ತದೆ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆಯಡಿ, ಅರ್ಹ ರೈತರಿಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳ ಮೂರು ಸಮಾನ ಕಂತುಗಳಲ್ಲಿ ವಾರ್ಷಿಕವಾಗಿ 6,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. ಈ ಮೊತ್ತವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದೆ. ಈ ಯೋಜನೆಯನ್ನು ಫೆಬ್ರವರಿ, 2019 ರಲ್ಲಿ ಪರಿಚಯಿಸಲಾಯಿತು, ಆದರೆ ಡಿಸೆಂಬರ್, 2018 ರಿಂದ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ.

ಕೃಷಿ ಸಚಿವರು ಸೇರಿದಂತೆ ಹಲವು ಸಚಿವರು ಭಾಗಿ

ಅಧಿಕೃತ ಹೇಳಿಕೆಯ ಪ್ರಕಾರ, ಪ್ರಧಾನಿ ಮೋದಿ ಅವರು ಇಂದು ಬೆಳಗಾವಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಿಎಂ-ಕಿಸಾನ್ ಯೋಜನೆಯ 13 ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ಪಿಎಂ ಕಿಸಾನ್ ಮತ್ತು ಜಲ ಜೀವನ್ ಮಿಷನ್ ಫಲಾನುಭವಿಗಳು ಸೇರಿದಂತೆ ಸುಮಾರು ಒಂದು ಲಕ್ಷ ಜನ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಸಿಎಂ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಕೃಷಿ ಕಾರ್ಯದರ್ಶಿ ಮನೋಜ್ ಅಹುಜಾ ಮುಂತಾದವರು ಉಪಸ್ಥಿತರಿರುವರು.

ಎಷ್ಟು ಕಂತುಗಳನ್ನು ಬಿಡುಗಡೆ ಮಾಡಲಾಗಿದೆ?

ಪಿಎಂ-ಕಿಸಾನ್ ಯೋಜನೆಯ 11 ನೇ ಕಂತನ್ನು ಮೇ, 2022 ರಲ್ಲಿ ಬಿಡುಗಡೆ ಮಾಡಲಾಯಿತು ಮತ್ತು 12 ನೇ ಕಂತು ಅಕ್ಟೋಬರ್, 2022 ರಲ್ಲಿ ಬಿಡುಗಡೆಯಾಯಿತು. ಈ ಯೋಜನೆಯಡಿ ಇದುವರೆಗೆ 11 ಕೋಟಿಗೂ ಹೆಚ್ಚು ರೈತರಿಗೆ ಒಟ್ಟು 2.25 ಲಕ್ಷ ಕೋಟಿ ರೂ.ಗಳನ್ನು ವಿತರಿಸಲಾಗಿದೆ. ಈ ಪೈಕಿ ಕೋವಿಡ್-19 ಅವಧಿಯಲ್ಲಿ ರೈತರಿಗೆ ಹಲವು ಕಂತುಗಳಲ್ಲಿ 1.75 ಲಕ್ಷ ಕೋಟಿ ರೂ. ಬಿಡುಗಡೆ ಮಾಡಲಾಗಿದೆ. 

ಪಟ್ಟಿಯಲ್ಲಿ ನಿಮ್ಮ ಹೆಸರನ್ನು ನೀವು ಹೇಗೆ ಪರಿಶೀಲಿಸಬಹುದು? 

>> ನೀವು ಮೊದಲು ಅಧಿಕೃತ ವೆಬ್‌ಸೈಟ್ https://pmkisan.gov.in/ ಗೆ ಹೋಗಬೇಕು.
>> ಈಗ ಮುಖಪುಟದಲ್ಲಿ ಡ್ಯಾಶ್ ಬೋರ್ಡ್ ಮೇಲೆ ಕ್ಲಿಕ್ ಮಾಡಿ.
>> ಇದರ ನಂತರ ನಿಮ್ಮ ರಾಜ್ಯ, ಜಿಲ್ಲೆ ಮತ್ತು ಗ್ರಾಮವನ್ನು ಆಯ್ಕೆ ಮಾಡಿ.
>> ಈಗ ಪಟ್ಟಿಯು ನಿಮ್ಮ ಪರದೆಯ ಮೇಲೆ ತೆರೆಯುತ್ತದೆ.
>> ಇದರಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News