ಮಾರ್ಚ್ ವೇಳೆಗೆ ಬದಲಾಗಲಿದೆ ಟೋಲ್-ಟ್ಯಾಕ್ಸ್ ಸಂಗ್ರಹ ವಿಧಾನ: ಈ ಬಗ್ಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದೇನು?

Toll-Tax Collection: ಹೊಸ ವರ್ಷಕ್ಕೆ ಇನ್ನೂ ಕೆಲವೇ ದಿನಗಳಷ್ಟೇ ಬಾಕಿ ಉಳಿದಿದೆ. ಹೊಸ ವರ್ಷದಲ್ಲಿ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ವಿಧಾನದಲ್ಲಿ ದೊಡ್ಡ ಬದಲಾವಣೆಯನ್ನು ಕಾಣಬಹುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. 

Written by - Yashaswini V | Last Updated : Dec 21, 2023, 10:01 AM IST
  • ಹೆದ್ದಾರಿಗಳಲ್ಲಿ ದೊಡ್ಡ ಬದಲಾವಣೆಗೆ ಮುಂದಾದ ಸರ್ಕಾರ
  • ದೇಶದಲ್ಲಿ ಟೋಲ್ ಪ್ಲಾಜಾಗಳನ್ನು ಬದಲಿಸಿ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ ಸೇರಿದಂತೆ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ.
  • ಮುಂದಿನ ವರ್ಷ ಮಾರ್ಚ್ ವೇಳೆಗೆ ನಾವು ದೇಶಾದ್ಯಂತ ಹೊಸ ಜಿಪಿಎಸ್ ಉಪಗ್ರಹ ಆಧಾರಿತ ಟೋಲ್ ಸಂಗ್ರಹವನ್ನು ಪ್ರಾರಂಭ
ಮಾರ್ಚ್ ವೇಳೆಗೆ ಬದಲಾಗಲಿದೆ  ಟೋಲ್-ಟ್ಯಾಕ್ಸ್ ಸಂಗ್ರಹ ವಿಧಾನ: ಈ ಬಗ್ಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದೇನು?  title=

Toll-Tax Collection: ಮುಂದಿನ ವರ್ಷ ಅಂದರೆ 2024ರಲ್ಲಿ   ಹೆದ್ದಾರಿಗಳಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಮಾರ್ಚ್ 2024 ರೊಳಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪರಿಚಯಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ದೇಶದಲ್ಲಿ ಟೋಲ್ ಪ್ಲಾಜಾಗಳನ್ನು ಬದಲಿಸಿ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ ಸೇರಿದಂತೆ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ.  ಮುಂದಿನ ವರ್ಷ ಮಾರ್ಚ್ ವೇಳೆಗೆ ನಾವು ದೇಶಾದ್ಯಂತ ಹೊಸ ಜಿಪಿಎಸ್ ಉಪಗ್ರಹ ಆಧಾರಿತ ಟೋಲ್ ಸಂಗ್ರಹವನ್ನು ಪ್ರಾರಂಭಿಸುತ್ತೇವೆ. ವಾಹನಗಳನ್ನು ನಿಲ್ಲಿಸದೆ ಸ್ವಯಂಚಾಲಿತ ಟೋಲ್ ಸಂಗ್ರಹವನ್ನು ಸಕ್ರಿಯಗೊಳಿಸಲು ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ ವ್ಯವಸ್ಥೆಯ (ಸ್ವಯಂಚಾಲಿತ ನಂಬರ್ ಪ್ಲೇಟ್ ರೀಡರ್ ಕ್ಯಾಮೆರಾಗಳು) ಎರಡು ಪ್ರಾಯೋಗಿಕ ಯೋಜನೆಗಳನ್ನು ಸರ್ಕಾರ ನಡೆಸಿದೆ  ಎಂದು ಅವರು ಮಾಹಿತಿ ನೀಡಿದ್ದಾರೆ.  

ಇದನ್ನೂ ಓದಿ- ಹೆಚ್ಚುತ್ತಿರುವ ಕೋರೋನಾ ಆತಂಕದ ನಡುವೆ 930 ಅಂಕಗಳಷ್ಟು ಕುಸಿದ ಸೆನ್ಸೆಕ್ಸ್!

ಅಷ್ಟೇ ಅಲ್ಲ, ಸಂಚಾರ ದಟ್ಟನೆಯನ್ನು ಕಡಿಮೆ ಮಾಡುವುದರ ಜೊತೆಗೆ ಜನರು ಎಷ್ಟು ದೂರ ಪ್ರಯಾಣಿಸುತ್ತಾರೋ ಅಷ್ಟು ದೂರಕ್ಕೆ ಮಾತ್ರ ಶುಲ್ಕ ವಿಧಿಸುವುದು ಈ ಹೊಸ ವ್ಯವಸ್ಥೆಯ ಉದ್ದೇಶವಾಗಿದೆ ಎಂದವರು ತಿಳಿಸಿದ್ದಾರೆ. 

ಫಾಸ್ಟ್ಯಾಗ್ ವ್ಯವಸ್ಥೆಯನ್ನು ಪರಿಚಯಿಸಿದ ನಂತರ ಟೋಲ್ ಪ್ಲಾಜಾಗಳಲ್ಲಿ 2018-19ರಲ್ಲಿ ಸುಮಾರು 8 ನಿಮಿಷಗಳಿದ್ದ ಸರಾಸರಿ ಕಾಯುವ ಸಮಯವು 2020-21 ಮತ್ತು 2021-22 ರಲ್ಲಿ 47 ಸೆಕೆಂಡುಗಳಿಗೆ ಕಡಿಮೆಯಾಗಿದೆ. ಕೆಲವು ಸ್ಥಳಗಳಲ್ಲಿ, ವಿಶೇಷವಾಗಿ ನಗರಗಳ ಸಮೀಪದಲ್ಲಿ, ಜನನಿಬಿಡ ಪಟ್ಟಣಗಳಲ್ಲಿ ಕಾಯುವ ಸಮಯದಲ್ಲಿ ಗಣನೀಯ ಸುಧಾರಣೆ ಕಂಡುಬಂದರೂ ಸಹ ಪೀಕ್ ಅವರ್‌ಗಳಲ್ಲಿ ಟೋಲ್ ಪ್ಲಾಜಾಗಳಲ್ಲಿ ವಿಳಂಬವಾಗುವುದನ್ನು ನಿರೀಕ್ಷೆಯಂತೆ ತಡೆಯಲು ಸಾಧ್ಯವಾಗುತ್ತಿಲ್ಲ ಎಂದರು.  

ಇದನ್ನೂ ಓದಿ- Uber ಹೊಸ ವೈಶಿಷ್ಟ್ಯ: ಈಗ ಒಮ್ಮೆಗೆ 5 ದಿನಗಳ ರೌಂಡ್ ಟ್ರಿಪ್‌ ಬುಕ್ ಮಾಡಬಹುದು

ಏತನ್ಮಧ್ಯೆ, ಮುಂದಿನ ಸಾರ್ವತ್ರಿಕ ಚುನಾವಣೆಗೆ ಮಾದರಿ ನೀತಿ ಸಂಹಿತೆ ಜಾರಿಯಾಗುವ ಮೊದಲು 1,000 ಕಿಲೋಮೀಟರ್‌ಗಿಂತ ಕಡಿಮೆ ಉದ್ದದ ಹೆದ್ದಾರಿ ಯೋಜನೆಗಳಿಗಾಗಿ ಬಿಲ್ಡ್ ಆಪರೇಟ್ ಟ್ರಾನ್ಸ್‌ಫರ್ (ಬಿಒಟಿ) ಮಾದರಿಯಲ್ಲಿ 1.5-2 ಲಕ್ಷ ಕೋಟಿ ರೂಪಾಯಿ ಮೌಲ್ಯದ ರಸ್ತೆ ಯೋಜನೆಗಳನ್ನು ಸರ್ಕಾರ ಬಿಡ್ ಮಾಡಲಿದೆ ಎಂದು ಸಚಿವ ನಿತಿನ್ ಗಡ್ಕರಿ ಇದೇ ಸಂದರ್ಭದಲ್ಲಿ ತಿಳಿಸಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News