Union Budget 2024 : ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ವಿಸ್ತರಣೆ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಬಜೆಟ್‌ನಲ್ಲಿ ಒಂಬತ್ತು ಆದ್ಯತೆಗಳನ್ನು ನಿಗದಿಪಡಿಸಲಾಗಿದೆ. ಬಜೆಟ್‌ನಲ್ಲಿ ಈವರೆಗೆ ಘೋಷಣೆಯಾದ ಪ್ರಮುಖ ಘೋಷಣೆಗಳು ಯಾವುವು ನೋಡೋಣ. 


COMMERCIAL BREAK
SCROLL TO CONTINUE READING

ಮೊದಲ ಕೆಲಸದಲ್ಲಿ EPFO ​​ಖಾತೆಗೆ 15 ಸಾವಿರ :
ಕೇಂದ್ರ ಹಣಕಾಸು ಸಚಿವರು 2 ಲಕ್ಷ ಕೋಟಿ ರೂ.ಗಳ 5 ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. ಈ ಪೈಕಿ ಮೊದಲ ಯೋಜನೆಯನ್ನು ವಿವರಿಸಿದ ನಿರ್ಮಲಾ ಸೀತಾರಾಮನ್,'ಎಲ್ಲಾ ಔಪಚಾರಿಕ ವಲಯಗಳಲ್ಲಿನ  ಹೊಸ ಉದ್ಯೋಗಿಗಳಿಗೆ ಒಂದು ತಿಂಗಳ ವೇತನ ಮತ್ತು ಇಪಿಎಫ್‌ಒನಲ್ಲಿ ನೋಂದಾಯಿಸಿದವರಿಗೆ  15,000 ರೂಪಾಯಿಯ ನೇರ ವರ್ಗಾವಣೆಯನ್ನು ಘೋಷಿಸಿದ್ದಾರೆ. 


ಇದನ್ನೂ ಓದಿ : Budget 2024: ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ, ಸ್ಟ್ಯಾಂಡರ್ಡ್ ಡಿಡಕ್ಷನ್ ಮಿತಿ ಏರಿಕೆ


100 ನಗರಗಳಲ್ಲಿ ಪಾರ್ಕ್ :
100 ನಗರಗಳಲ್ಲಿ ಕೈಗಾರಿಕಾ ಪಾರ್ಕ್ ನಿರ್ಮಾಣವನ್ನು ಸಚಿವರು ಬಜೆಟ್ ನಲ್ಲಿ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಐದು ವರ್ಷಗಳಲ್ಲಿ ಒಂದು ಕೋಟಿ ಯುವಕರಿಗೆ ತರಬೇತಿ ನೀಡುವ ಬಗ್ಗೆಯೂ ಹೇಳಿದ್ದಾರೆ. 


ಉದ್ಯೋಗಕ್ಕಾಗಿ 5 ಹೊಸ ಯೋಜನೆಗಳು :
4.1 ಕೋಟಿ ಯುವಕರಿಗೆ ಉದ್ಯೋಗ ಕಲ್ಪಿಸಲು ಐದು ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. 


ರೈತರಿಗೆ ನೀಡಿದ್ದು  : 
ಎರಡು ವರ್ಷಗಳಲ್ಲಿ, 1 ಕೋಟಿ ರೈತರನ್ನು ನೈಸರ್ಗಿಕ ಕೃಷಿಗೆ ಪ್ರೇರೇಪಿಸಲಾಗುವುದು. 10,000 ಅಗತ್ಯ ಆಧಾರಿತ ಜೈವಿಕ ಇನ್ಪುಟ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು.ಬಳಕೆಯ ಕೇಂದ್ರಗಳ ಸಮೀಪದಲ್ಲಿ ತರಕಾರಿ ಉತ್ಪಾದನೆಗೆ ಕ್ಲಸ್ಟರ್‌ಗಳನ್ನು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿಪಡಿಸಲಾಗುವುದು.


ಇದನ್ನೂ ಓದಿ : Budget 2024 : ಇನ್ನು ಮುಂದೆ ಚಿನ್ನ, ಬೆಳ್ಳಿ ಅಗ್ಗ : ಬಜೆಟ್ ನಲ್ಲೇ ಆಯಿತು ಘೋಷಣೆ


ಕಿಸಾನ್ ಕ್ರೆಡಿಟ್ ಕಾರ್ಡ್: 
ಸಾರ್ವಜನಿಕ ಬೆಂಬಲ ಆಧಾರಿತ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ಐದು ರಾಜ್ಯಗಳಲ್ಲಿ ನೀಡಲಾಗುವುದು. ಸೀಗಡಿ ಸಾಕಾಣಿಕೆ, ಸಂಸ್ಕರಣೆ ಮತ್ತು ರಫ್ತಿಗೆ ನಬಾರ್ಡ್ ಮೂಲಕ  ಹಣಕಾಸಿನ ನೆರವು ಸುಗಮಗೊಳಿಸಲಾಗುವುದು. 


10 ಲಕ್ಷದವರೆಗೆ ಶಿಕ್ಷಣ ಸಾಲ :
'ದೇಶೀಯ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ 10 ಲಕ್ಷ ರೂ.ವರೆಗಿನ ಸಾಲಕ್ಕೆ ಸರ್ಕಾರ ಆರ್ಥಿಕ ನೆರವು ನೀಡುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ. 


ಪಿಎಂಜಿಕೆವೈ 5 ವರ್ಷದವರಗೆ ವಿಸ್ತರಣೆ :  
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು  ಐದು ವರ್ಷಗಳವರೆಗೆ ವಿಸ್ತರಣೆ ಮಾಡಲಾಗಿದೆ. ಇದು 80 ಕೋಟಿ ಜನರಿಗೆ ಪ್ರಯೋಜನವಾಗಲಿದೆ. 


ಮುದ್ರಾ ಸಾಲದ ಮಿತಿ ಹೆಚ್ಚಳ : 
ಮುದ್ರಾ ಸಾಲದ ಮಿತಿಯನ್ನು 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಿಸಲಾಗಿದೆ.ಅಂದರೆ ಮೊದಲು ಪಡೆದ ಸಾಲವನ್ನು ಸರಿಯಾಗಿ ಮರುಪಾವತಿ ಮಾಡಿದವರಿಗೆ ಮುದ್ರಾ ಸಾಲದ ಮಿತಿಯನ್ನು 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಿಸಲಾಗಿದೆ.


ಇದನ್ನೂ ಓದಿ : Budget 2024: ರೈತರಿಗೆ ಹೊಸ ರೀತಿಯ ಕಿಸಾನ್ ಕ್ರೆಡಿಟ್ ಕಾರ್ಡ್‌ ಘೋಷಣೆ : ರೈತರಿಗೆ ಭಾರೀ ಕೊಡುಗೆ ನೀಡಿದ ಸರ್ಕಾರ


ಬಿಹಾರ ಮತ್ತು ಆಂಧ್ರಕ್ಕೆ ವಿಶೇಷ ಘೋಷಣೆ :
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಿಹಾರದ ಪಿರ್ಪೈಂಟಿಯಲ್ಲಿ 21,400 ಕೋಟಿ ವೆಚ್ಚದಲ್ಲಿ ಹೊಸ 2400 ಮೆಗಾವ್ಯಾಟ್ ವಿದ್ಯುತ್ ಸ್ಥಾವರ ಸ್ಥಾಪನೆ ಸೇರಿದಂತೆ ವಿದ್ಯುತ್ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು ಎದ್ನು ಹೇಳಿದ್ದಾರೆ. ಬಿಹಾರದಲ್ಲಿ ಹೊಸ ವಿಮಾನ ನಿಲ್ದಾಣಗಳು, ವೈದ್ಯಕೀಯ ಕಾಲೇಜುಗಳು ಮತ್ತು ಕ್ರೀಡಾ ಮೂಲಸೌಕರ್ಯಗಳ ನಿರ್ಮಾಣ ಬಾಹ್ಯ ಸಹಾಯಕ್ಕಾಗಿ ಸರ್ಕಾರದ ವಿನಂತಿಗಳನ್ನು ತ್ವರಿತವಾಗಿ ಪ್ರಕ್ರಿಯೆಗೊಳಿಸಲಾಗುವುದು ಎಂದು ಹೇಳಿದ್ದಾರೆ.ಇನ್ನು ಆಂಧ್ರಪ್ರದೇಶದ ಮರುಸಂಘಟನೆ ಕಾಯಿದೆಯಲ್ಲಿನ ಬದ್ಧತೆಗಳನ್ನು ಪೂರೈಸಲು ನಮ್ಮ ಸರ್ಕಾರವು ಪ್ರಯತ್ನಗಳನ್ನು ಮಾಡಿದೆ. ಬಹುಪಕ್ಷೀಯ ಏಜೆನ್ಸಿಗಳ ಮೂಲಕ ವಿಶೇಷ ಹಣಕಾಸಿನ ನೆರವನ್ನು ಒದಗಿಸುವುದಾಗಿ ಹೇಳಿದ್ದಾರೆ. ಮುಂದಿನ ವರ್ಷಗಳಲ್ಲಿ ಹೆಚ್ಚುವರಿ ಹಣವನ್ನು ಒದಗಿಸುವುದಾಗಿ ಭರವಸೆ ನೀಡಿದ್ದಾರೆ.


https://bit.ly/3AClgDd


Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ