ಕೇಂದ್ರ ಸರ್ಕಾರದ ಈ ಯೋಜನೆಗಳಿಂದ ಮಹಿಳೆಯರಿಗೆ ಆರ್ಥಿಕ ಲಾಭ ! ಯಾರ ಹಂಗೂ ಇಲ್ಲದೆ ಬದುಕಲು ಆಗುವುದು ನೆರವು

ಸರ್ಕಾರ ಮಹಿಳೆಯರ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ 5 ಪ್ರಮುಖ ಯೋಜನೆಗಳು ಇಲ್ಲಿವೆ.

Written by - Ranjitha R K | Last Updated : Sep 22, 2023, 08:56 AM IST
  • ಮಹಿಳೆಯರಿಗಾಗಿ ಸರ್ಕಾರದ ಐದು ಪ್ರಮುಖ ಯೋಜನೆಗಳು
  • ಆರ್ಥಿಕ ಸಬಲೀಕರಣದ ಉದ್ದೇಶದಿಂದ ಯೋಜನೆ ಜಾರಿಗೆ
  • ಮಹಿಳಾ ಸಮ್ಮಾನ್ ಬಚತ್ ಪತ್ರ ಯೋಜನೆ
ಕೇಂದ್ರ ಸರ್ಕಾರದ ಈ ಯೋಜನೆಗಳಿಂದ ಮಹಿಳೆಯರಿಗೆ ಆರ್ಥಿಕ ಲಾಭ ! ಯಾರ ಹಂಗೂ ಇಲ್ಲದೆ ಬದುಕಲು ಆಗುವುದು ನೆರವು  title=

ಬೆಂಗಳೂರು : ಮಹಿಳೆಯರ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಅನೇಕ ರೀತಿಯ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಮೂಲಕ ಮಹಿಳೆಯರ ಅಭಿವೃದ್ದಿಗೆ ಒತ್ತು ನೀಡುತ್ತಿದೆ. ಶಿಕ್ಷಣ, ಸುರಕ್ಷತೆ ಮತ್ತು ಆರ್ಥಿಕ ಸ್ವಾತಂತ್ರ್ಯದ ಅಗತ್ಯವನ್ನು  ಪೂರೈಸಲು ನೆರವಾಗುವಂತ ಯೋಜನೆಗಳನ್ನು ಮಹಿಳೆಯರಿಗಾಗಿ ಸರ್ಕಾರ ಜಾರಿಗೆ ತಂದಿದೆ. ಸರ್ಕಾರ ಮಹಿಳೆಯರ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ 5 ಪ್ರಮುಖ ಯೋಜನೆಗಳು ಇಲ್ಲಿವೆ.

1. ಮಹಿಳಾ ಸಮ್ಮಾನ್ ಬಚತ್ ಪತ್ರ ಯೋಜನೆ ಅಥವಾ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಯೋಜನೆ : 
2023 ರ ಬಜೆಟ್‌ನಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಹಿಳೆಯರು ಮತ್ತು ಬಾಲಕಿಯರಿಗಾಗಿ ಮಹಿಳಾ ಸಮ್ಮಾನ್ ಬಚತ್ ಪತ್ರ ಯೋಜನೆ ಅಥವಾ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಯೋಜನೆ ಎಂಬ ಉಳಿತಾಯ ಯೋಜನೆಯನ್ನು ಘೋಷಿಸಿದರು ಮಹಿಳೆಯರು ಮತ್ತು ಹೆಣ್ಣುಮಕ್ಕಳನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದು  ಸಣ್ಣ ಉಳಿತಾಯ ಯೋಜನೆ. ಇಲ್ಲಿ ಒಂದೇ ಬಾರಿ ಹಣವನ್ನು ಠೇವಣಿ ಮಾಡಬಹುದು. ಗರಿಷ್ಠ 2 ಲಕ್ಷ ಠೇವಣಿಗೆ ಶೇಕಡಾ 7.5 ರ ಬಡ್ಡಿದರವನ್ನು ನೀಡುತ್ತದೆ. 

ಇದನ್ನೂ ಓದಿ : Arecanut today price: ಶನಿವಾರ ಮತ್ತೆ ಭಾರೀ ಕುಸಿತ ಕಂಡ ಅಡಿಕೆ ಧಾರಣೆ..!

2. ಸುಕನ್ಯಾ ಸಮೃದ್ಧಿ ಯೋಜನೆ  : 
'ಬೇಟಿ ಪಡಾವೋ-ಬೇಟಿ ಬಚಾವೋ' ಕಾರ್ಯಕ್ರಮದ ಅಡಿಯಲ್ಲಿ ಸರ್ಕಾರವು ಹೆಣ್ಣು ಮಕ್ಕಳಿಗಾಗಿ ಈ ಉಳಿತಾಯ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆಯಡಿಯಲ್ಲಿ, 10 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಗುವಿನ ಹೆಸರಿನಲ್ಲಿ  ಖಾತೆಯನ್ನು ತೆರೆಯಬಹುದು. ಈ ಯೋಜನೆಯು ಹಲವಾರು ತೆರಿಗೆ ಪ್ರಯೋಜನಗಳನ್ನು  ನೀಡುತ್ತದೆ. ಮಾತ್ರವಲ್ಲ ಹೆಚ್ಚಿನ ಬಡ್ಡಿದರವನ್ನು ಕೂಡಾ ಒದಗಿಸುತ್ತದೆ.  ಈ ಯೋಜನೆಯಲ್ಲಿ ಪಾಲಕರು ಹೆಣ್ಣು ಮಗುವಿನ ಹೆಸರಿನಲ್ಲಿ ಕನಿಷ್ಠ 250 ರೂ ಮತ್ತು ಗರಿಷ್ಠ 1,50,000 ವರೆಗೆ  ಠೇವಣಿ  ಮಾಡಬಹುದು. 

3. ಸಖಿ ನಿವಾಸ : 
ಉದ್ಯೋಗಸ್ಥ ಮಹಿಳೆಯರಿಗೆ ಸುರಕ್ಷಿತ ಮತ್ತು ಅನುಕೂಲಕರವಾದ ವಸತಿ ಸೌಕರ್ಯವನ್ನು ಒದಗಿಸುವ ಸಲುವಾಗಿ, ಸಖಿ ನಿವಾಸ್ ಎಂಬ ಯೋಜನೆಯನ್ನು ಪ್ರಾರಂಭಿಸಲಾಯಿತು. ಈ ಯೋಜನೆಯು ಹೊಸ ಹಾಸ್ಟೆಲ್ ಕಟ್ಟಡಗಳ ನಿರ್ಮಾಣ, ಅಸ್ತಿತ್ವದಲ್ಲಿರುವ ಹಾಸ್ಟೆಲ್ ಕಟ್ಟಡಗಳ ವಿಸ್ತರಣೆ ಮತ್ತು ಬಾಡಿಗೆ ಆವರಣದಲ್ಲಿ ಹಾಸ್ಟೆಲ್ ಕಟ್ಟಡಗಳ ಯೋಜನೆಗಳಿಗೆ ಸಹಾಯ ಮಾಡುತ್ತಿದೆ. ಈ ಯೋಜನೆಯಡಿಯಲ್ಲಿ ಸಹಾಯ ಮಾಡಲಾಗುತ್ತಿರುವ ಮಹಿಳಾ ಹಾಸ್ಟೆಲ್ ಜಾತಿ, ಧರ್ಮ, ವೈವಾಹಿಕ ಸ್ಥಿತಿ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಯಾವುದೇ ಭೇದವಿಲ್ಲದೆ ಎಲ್ಲಾ ಉದ್ಯೋಗಸ್ಥ ಮಹಿಳೆಯರಿಗೆ ಲಭ್ಯವಾಗುವಂತೆ ನೋಡಿಕೊಳ್ಳಲಾಗುವುದು. 

ಇದನ್ನೂ ಓದಿ : ಈ ಬ್ಯಾಂಕ್‌ನಲ್ಲಿ ನೀವು ಖಾತೆ ಹೊಂದಿದ್ದರೆ ಸಿಗಲಿದೆ ಮೂರು ಹೊಸ ಸೇವೆ

4. ಮಹಿಳಾ ಶಕ್ತಿ ಕೇಂದ್ರ ಯೋಜನೆ : 
ಕೌಶಲ್ಯಾಭಿವೃದ್ಧಿ, ಉದ್ಯೋಗ, ಡಿಜಿಟಲ್ ಸಾಕ್ಷರತೆ, ಆರೋಗ್ಯ ಮತ್ತು ಪೋಷಣೆಯ ಅವಕಾಶಗಳೊಂದಿಗೆ ಗ್ರಾಮೀಣ ಮಹಿಳೆಯರನ್ನು ಸಬಲೀಕರಣಗೊಳಿಸಲು ಈ ಯೋಜನೆ ಜಾರಿಗೆ ತರಲಾಗಿದೆ. MSK ಮಹಿಳಾ ಕೇಂದ್ರಿತ ಯೋಜನೆಗಳು ಮತ್ತು ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಸ್ಥಳೀಯ ಆಡಳಿತ, ರಾಜ್ಯ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತದೆ. ಈ ಯೋಜನೆಯು ಶಿಕ್ಷಣ, ಆರೋಗ್ಯ ರಕ್ಷಣೆ, ಕೆಲಸದ ಪ್ರಗತಿ, ರಾಜಕೀಯ ಮತ್ತು ಆರ್ಥಿಕ ನಿರ್ಧಾರ ತೆಗೆದುಕೊಳ್ಳುವ  ಪ್ರಾತಿನಿಧ್ಯದಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಸಮಾನ ಅವಕಾಶಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ.

5. ಮಹಿಳಾ ಸಹಾಯವಾಣಿ ಯೋಜನೆ :
ಈ ಕಾರ್ಯಕ್ರಮವು ಖಾಸಗಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ 24 ಗಂಟೆಗಳ ತುರ್ತು ಸಹಾಯವನ್ನು ಒದಗಿಸುವ ಗುರಿಯನ್ನು ಹೊಂದಿದೆ. ದೇಶದಾದ್ಯಂತ ಮಹಿಳೆಯರಿಗೆ ತಕ್ಷಣದ ಸಹಾಯವನ್ನು ಒದಗಿಸುವ ಏಕೈಕ ಟೋಲ್-ಫ್ರೀ ಸಂಖ್ಯೆ (181) ಮೂಲಕ ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಮಹಿಳಾ ಸಹಾಯವಾಣಿ ಸಂಖ್ಯೆಗಳನ್ನು ಲಭ್ಯಗೊಳಿಸಲಾಗಿದೆ.

ಇದನ್ನೂ ಓದಿ : ಆಧಾರ್ ಸಹಾಯದಿಂದ ತ್ವರಿತ ಪ್ಯಾನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಸುಲಭ ಮಾರ್ಗ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Trending News