CM Siddaramaiah: ನಮ್ಮ ಕರ್ನಾಟಕವು ಪ್ರವಾಸೋದ್ಯಮಕ್ಕೆ (Tourism) ಹೆಚ್ಚು ಅವಕಾಶ ಇರುವ ರಾಜ್ಯ. 320 ಕಿ. ಮೀ ಕರಾವಳಿ ಪ್ರದೇಶವಿದೆ. ಇದುವರೆಗೆ ನಮಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಉಡುಪಿ, ಮಂಗಳೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಪಡಿಸುವ ಕುರಿತು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚನೆ ನೀಡಿದರು. ಇದರಿಂದ  ಉದ್ಯೋಗ ಸೃಷ್ಟಿ ಸಾಧ್ಯವಿದೆ. ಹೊಸ ಪ್ರವಾಸೋದ್ಯಮ ನೀತಿ ರಚಿಸಲು ನಿರ್ಧರಿಸಲಾಗಿದ್ದು, ಈ ಕುರಿತು ವಿಸ್ತೃತವಾದ ಸಮಾಲೋಚನೆ ನಡೆಸಬೇಕು ಎಂದು ಹೇಳಿದರು


COMMERCIAL BREAK
SCROLL TO CONTINUE READING

ಪ್ರವಾಸೋದ್ಯಮವೇ ಪ್ರಮುಖ ಆದಾಯ: 
ಎರಡನೇ ದಿನದ DC-CEO ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ(Chief Minister Siddaramaiah), ಅನೇಕ ರಾಜ್ಯಗಳಿಗೆ  ಪ್ರವಾಸೋದ್ಯಮವೇ ಪ್ರಮುಖ ಆದಾಯ (Revenue) . ನೆರೆಯ ಕೇರಳದಷ್ಟು ಕೂಡಾ ಪ್ರವಾಸೋದ್ಯಮ ಅಭಿವೃದ್ಧಿ ನಮಗೆ ಸಾಧ್ಯವಾಗಿಲ್ಲ. ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕಾಶೆ ಸಿದ್ಧಪಡಿಸಬೇಕು. ಪ್ರವಾಸೋದ್ಯಮ ಮೂಲಸೌಲಭ್ಯಗಳು ಅತ್ಯಂತ ಕಡಿಮೆಯಿದೆ. ಮಧುಗಿರಿಯಲ್ಲಿರುವ ಏಕಶಿಲಾ ಬೆಟ್ಟ ಹಿಂದಿನ ಬಾರಿ ಸರ್ಕಾರ ಇದ್ದಾಗ ಅಭಿವೃದ್ಧಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರೂ, ಇದುವರೆಗೆ ಯಾವುದೇ ಅಭಿವೃದ್ಧಿಯಾಗಿಲ್ಲ. ಪ್ರವಾಸೋದ್ಯಮಕ್ಕೆ ಪೂರಕವಾದ ವಾತಾವರಣ ಸೃಷ್ಟಿಸಿದರೆ ಮಾತ್ರ ಬಂಡವಾಳ ಹೂಡಿಕೆದಾರರು ಮುಂದೆ ಬರುತ್ತಾರೆ ಎಂದರು. 


ಜಿಲ್ಲಾಧಿಕಾರಿಗಳು ಪ್ರವಾಸಿ ತಾಣಗಳ ಅಭಿವೃದ್ಧಿ (Development of Tourist Spots) ಸಾಧ್ಯತೆಗಳನ್ನು ಗುರುತಿಸಬೇಕು. ಖಾಸಗಿ ಸಹಭಾಗಿತ್ವದಲ್ಲಿ ಮಾತ್ರವಲ್ಲ ಸರ್ಕಾರದ ವತಿಯಿಂದಲೂ ಹೆಜ್ಜೆ ಇರಿಸಬೇಕು. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಎಲ್ಲಾ ಅಂಶಗಳನ್ನು ಸೇರಿಸಲಾಗುವುದು. ಇದಕ್ಕೆ ಪೂರಕವಾಗಿ ಅನುದಾನವನ್ನು ಒದಗಿಸಲಾಗುವುದು ಎಂದು ಸಿಎಂ ತಿಳಿಸಿದರು. 


ಕರಾವಳಿಯಲ್ಲಿ ಸಿಆರ್‌ಝೆಡ್‌ ಕಾಯ್ದೆಯಿಂದಾಗಿ ಅಭಿವೃದ್ಧಿಗೆ ಕೆಲವು ತೊಡಕುಗಳಿದ್ದು, ಇದನ್ನು ಬಗೆಹರಿಸಲು ಪ್ರಯತ್ನಿಸಬೇಕು ಎಂದರು.


ಇದನ್ನೂ ಓದಿ- ಸೋಲೋ ಟ್ರಿಪ್‌ನಲ್ಲಿ ಹೋಗುವ ಯೋಚನೆಯಲ್ಲಿದ್ದೀರಾ? ಈ 7 ಅದ್ಭುತ ಸ್ಥಳಗಳಿಗೆ ಭೇಟಿ ನೀಡಿ!!


ಪ್ರವಾಸೋದ್ಯಮ ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಲು ಸಿಎಂ ಸೂಚನೆ!
ರಾಜ್ಯದಲ್ಲಿ ಕೆಲವೇ ಪ್ರವಾಸೋದ್ಯಮ ತಾಣಗಳಿಗೆ ಫೋಕಸ್‌ ದೊರೆಯುತ್ತಿದೆ. 25 ಸಾವಿರ ಸ್ಮಾರಕಗಳಿವೆ. ಇವುಗಳ ಪೈಕಿ ಸುಮಾರು 23 ಸಾವಿರ ಸ್ಮಾರಕಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಸೌಲಭ್ಯ ಕಾಯ್ದೆ 2015 ಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿದರೆ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ಸಾಧ್ಯವಿದೆ.  ಪ್ರವಾಸೋದ್ಯಮತಾಣಗಳ ಸಮೀಕ್ಷೆ, ಸಂರಕ್ಷಣೆ ಇತ್ಯಾದಿಗಳ ಮಾಸ್ಟರ್‌ ಪ್ಲಾನ್‌ ಜಿಲ್ಲಾವಾರು ಸಿದ್ಧಪಡಿಸಬೇಕು. ಮೂರು ತಿಂಗಳ ಒಳಗಾಗಿ ಈ ಕಾರ್ಯವನ್ನು ಪೂರ್ಣಗೊಳಿಸಬೇಕು. ಪ್ರವಾಸಿಕ ತಾಣಗಳನ್ನು ಹಂತ ಹಂತವಾಗಿ ಪುನರುಜ್ಜೀವನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು. 


ಸ್ಥಳೀಯ ಜನರು, ಎನ್‌ಜಿಒಗಳ ಸಹಯೋಗ ಪಡೆದುಕೊಳ್ಳಬೇಕು. ಜಿಲ್ಲಾ ಪ್ರವಾಸೋದ್ಯಮ ಕುರಿತು ಪುಸ್ತಕಗಳನ್ನು ಬಿಡುಗಡೆಗೊಳಿಸಿ. ಸ್ಮಾರಕ ದತ್ತಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದ್ದು, ಆಸಕ್ತರು ಸ್ಮಾರಕಗಳನ್ನು ದತ್ತು ಪಡೆದು ಸಂರಕ್ಷಣೆ ಕಾರ್ಯ ಮಾಡಬಹುದಾಗಿದೆ ಎಂದು ಹೇಳಿದರು. 


ಇದನ್ನೂ ಓದಿ- ಪ್ರವಾಸೋದ್ಯಮದಲ್ಲಿ ಮುಂದಿವೆ ಈ ರಾಷ್ಟ್ರಗಳು...! ನಿಮ್ಮ ನೆಕ್ಸ್ಟ್ ಟ್ರಿಪ್ ಗಾಗಿ ಈ ಪಟ್ಟಿ ನೋಡಿ


ಕರಾವಳಿ ಪ್ರವಾಸೋದ್ಯಮಕ್ಕೆ ಆದ್ಯತೆ: 
ಕರಾವಳಿಯಲ್ಲಿ ಮೆಡಿಕಲ್‌ ಕಾಲೇಜುಗಳು, ಬಂದರುಗಳು, ದೇವಾಲಯಗಳು ಸೇರಿದಂತೆ ಹಲವು ಪ್ರಮುಖ ಸ್ಥಳಗಳು ಇವೆ. ಆದರೆ ಒಂದೇ ಒಂದು ಪಂಚತಾರಾ ಹೊಟೇಲ್‌ ಇಲ್ಲ. ಸಂಜೆಯಾಗುತ್ತಿದ್ದಂತೆಯೇ ಇಡೀ ಮಂಗಳೂರು ಮುಚ್ಚಿಕೊಳ್ಳುತ್ತದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶಕ್ಕೆ ಪ್ರತ್ಯೇಕ ಯೋಜನೆಯನ್ನು ರೂಪಿಸಬೇಕಿದೆ. ಕರಾವಳಿಯ ಪ್ರವಾಸೋದ್ಯಮದ ಸಾಧ್ಯತೆಗಳನ್ನು ಕಂಡುಕೊಳ್ಳುವ ಅಗತ್ಯವಿದೆ.  ಇದರಿಂದ ತೆರಿಗೆ ಸಂಗ್ರಹ ಹಾಗೂ ಸ್ಥಳೀಯರಿಗೆ ಉದ್ಯೋಗವಕಾಶ ಸೃಷ್ಠಿಸಲು ಸಾಧ್ಯವಿದೆ. ಕರಾವಳಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮುಂಬೈ, ಗಲ್ಫ್‌ ದೇಶಗಳಿಗೆ ಉದ್ಯೋಗ ಅರಸಿಕೊಂಡು ಹೋಗುವ ಪರಿಸ್ಥಿತಿ ಬದಲಾಗಬೇಕಿದೆ ಎಂದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.