ಸ್ಲೀಪರ್ ಮತ್ತು ಎಸಿ ಕೋಚ್‌ಗಳಲ್ಲಿ ವೇಟಿಂಗ್ ಟಿಕೆಟ್‌ಗಳೊಂದಿಗೆ ಪ್ರಯಾಣಿಸಲು ಅವಕಾಶವಿಲ್ಲ; ಮೇ 1ರಿಂದ ನಿಯಮಗಳಲ್ಲಿ ಬದಲಾವಣೆ!!

Indian railways: ಮೇ 1ರಿಂದ ಭಾರತೀಯ ರೈಲ್ವೆ ಇಲಾಖೆ ಕೆಲವು ನಿಯಮಗಳಲ್ಲಿ ಕಠಿಣ ಬದಲಾವಣೆಳನ್ನು ಮಾಡುತ್ತಿದೆ. ಇದರ ಪ್ರಕಾರ, ಸ್ಲೀಪರ್ ಮತ್ತು ಎಸಿ ಕೋಚ್‌ಗಳಲ್ಲಿ ವೇಟಿಂಗ್ ಟಿಕೆಟ್‌ಗಳೊಂದಿಗೆ ಪ್ರಯಾಣಿಸುವುದನ್ನು ನಿಷೇಧಿಸಲಾಗುತ್ತದೆ.

Written by - Puttaraj K Alur | Last Updated : Apr 28, 2025, 09:33 PM IST
  • ಸ್ಲೀಪರ್ & ಎಸಿ ಕೋಚ್‌ಗಳಲ್ಲಿ ವೇಟಿಂಗ್ ಟಿಕೆಟ್‌ಗಳೊಂದಿಗೆ ಪ್ರಯಾಣಿಸಲು ಅವಕಾಶವಿಲ್ಲ
  • ಮೇ 1ರಿಂದ ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿರುವ ಭಾರತೀಯ ರೈಲ್ವೆ ಇಲಾಖೆ
  • ದೃಢೀಕೃತ ಟಿಕೆಟ್‌ ಹೊಂದಿರುವ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ನಿಯಮಗಳು
ಸ್ಲೀಪರ್ ಮತ್ತು ಎಸಿ ಕೋಚ್‌ಗಳಲ್ಲಿ ವೇಟಿಂಗ್ ಟಿಕೆಟ್‌ಗಳೊಂದಿಗೆ ಪ್ರಯಾಣಿಸಲು ಅವಕಾಶವಿಲ್ಲ; ಮೇ 1ರಿಂದ ನಿಯಮಗಳಲ್ಲಿ ಬದಲಾವಣೆ!!

Indian railways: ರೈಲಿನಲ್ಲಿ ಪ್ರಯಾಣಿಸುವ ಕೋಟ್ಯಂತರ ಪ್ರಯಾಣಿಕರಿಗೆ ಒಂದು ದೊಡ್ಡ ಅಪ್‌ಡೇಟ್‌ ಬಂದಿದೆ. ದೃಢೀಕೃತ ಟಿಕೆಟ್‌ಗಳೊಂದಿಗೆ ರೈಲುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೆ ಇಲಾಖೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸುತ್ತಿದೆ. ಇದರಿಂದಾಗಿ ವೇಟಿಂಗ್‌ ಟಿಕೆಟ್ ಹೊಂದಿರುವ ಪ್ರಯಾಣಿಕರು ಸ್ಲೀಪರ್ ಮತ್ತು ಎಸಿ ಕೋಚ್‌ಗಳಲ್ಲಿ ಪ್ರಯಾಣಿಸಲು ಸಾಧ್ಯವಾಗುವುದಿಲ್ಲ. ಯಾವುದೇ ಒಬ್ಬ ಪ್ರಯಾಣಿಕನಲ್ಲಿ ವೇಟಿಂಗ್‌ ಟಿಕೆಟ್ ಇದ್ದರೆ, ಆತ ಸಾಮಾನ್ಯ ದರ್ಜೆಯಲ್ಲಿ ಮಾತ್ರ ಪ್ರಯಾಣಿಸಬೇಕು.

Add Zee News as a Preferred Source

ಭಾರತೀಯ ರೈಲ್ವೆ ಇಲಾಖೆ ಮೇ 1ರಿಂದ ಈ ನಿಯಮವನ್ನು ಜಾರಿಗೊಳಿಸುವ ಬಗ್ಗೆ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. IRCTCಯಿಂದ ಬುಕ್ ಮಾಡಿದ ಆನ್‌ಲೈನ್ ಟಿಕೆಟ್ ಕನ್ಫರ್ಮ್‌ ಆಗದಿದ್ದರೆ ಅದು ಸ್ವಯಂಚಾಲಿತವಾಗಿ ರದ್ದಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಅನೇಕ ಜನರು ಕೌಂಟರ್‌ನಿಂದ ವೇಟಿಂಗ್‌ ಟಿಕೆಟ್‌ಗಳನ್ನು ತೆಗೆದುಕೊಂಡು ಸ್ಲೀಪರ್ ಮತ್ತು ಎಸಿ ಕೋಚ್‌ಗಳಲ್ಲಿ ಪ್ರಯಾಣಿಸುತ್ತಾರೆ.

ಇದನ್ನೂ ಓದಿ: ಆರ್ಥಿಕವಾಗಿ ಹಿಂದುಳಿದವರಿಗೆ ಕೇಂದ್ರ ಸರ್ಕಾರ ನೀಡಲಿದೆ 2 ಲಕ್ಷ ರೂಪಾಯಿ! ಪಡೆಯಬೇಕಾದರೆ ಹೀಗೆ ಅರ್ಜಿ ಸಲ್ಲಿಸಿ

ಪ್ರಯಾಣಿಕರ ಅನುಕೂಲಕ್ಕೆ ನಿಯಮಗಳು

ಮೇ 1ರಿಂದ ಕಠಿಣ ನಿಯಮಗಳನ್ನ ಜಾರಿಗೆ ತರಲು ಭಾರತೀಯ ರೈಲ್ವೆ ಇಲಾಖೆ ನಿರ್ಧರಿಸಿದೆ. ಇದರ ನಂತರ ಸ್ಲೀಪರ್ ಮತ್ತು ಎಸಿ ಕೋಚ್‌ಗಳಲ್ಲಿ ವೇಟಿಂಗ್ ಟಿಕೆಟ್‌ಗಳೊಂದಿಗೆ ಪ್ರಯಾಣಿಸುವುದನ್ನು ನಿಷೇಧಿಸಲಾಗುತ್ತದೆ. ಸ್ಲೀಪರ್ ಮತ್ತು ಎಸಿ ಕೋಚ್‌ಗಳಲ್ಲಿ ಪ್ರಯಾಣಿಕರಲ್ಲಿ ಏನಾದರೂ ವೇಟಿಂಗ್‌ ಟಿಕೆಟ್‌ ಇರುವುದು ಕಂಡುಬಂದರೆ, ಟಿಟಿಇ ಆತನಿಗೆ ದಂಡ ವಿಧಿಸಬಹುದು ಅಥವಾ ಸಾಮಾನ್ಯ ಕೋಚ್‌ಗೆ ಕಳುಹಿಸಬಹುದು. ದೃಢೀಕೃತ ಟಿಕೆಟ್‌ಗಳೊಂದಿಗೆ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಈ ನಿಯಮವನ್ನು ಮಾಡಲಾಗಿದೆ ಎಂದು ವಾಯುವ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಕ್ಯಾಪ್ಟನ್ ಶಶಿ ಕಿರಣ್ ತಿಳಿಸಿದ್ದಾರೆ. ಇದರಿಂದ ದೃಢೀಕೃತ ಟಿಕೆಟ್‌ಗಳನ್ನು ಹೊಂದಿರುವ ಪ್ರಯಾಣಿಕರು ಪ್ರಯಾಣದ ಸಮಯದಲ್ಲಿ ವೇಟಿಂಗ್‌ ಟಿಕೆಟ್‌ಗಳನ್ನು ಹೊಂದಿರುವ ಪ್ರಯಾಣಿಕರಿಂದ ತೊಂದರೆ ಎದುರಿಸುವುದಿಲ್ಲ. 

ಅನಾನುಕೂಲತೆಯಿಂದ ಪ್ರಯಾಣ ಕಷ್ಟಕರ!

ವಾಸ್ತವವಾಗಿ ವೇಟಿಂಗ್‌ ಟಿಕೆಟ್ ಹೊಂದಿರುವ ಪ್ರಯಾಣಿಕರು ಸ್ಲೀಪರ್ ಮತ್ತು ಎಸಿ ಕೋಚ್‌ಗಳಿಗೆ ಪ್ರವೇಶಿಸಿ ದೃಢೀಕೃತ ಟಿಕೆಟ್ ಹೊಂದಿರುವ ಪ್ರಯಾಣಿಕರ ಆಸನಗಳ ಮೇಲೆ ಬಲವಂತವಾಗಿ ಕುಳಿತುಕೊಳ್ಳಲು ಪ್ರಯತ್ನಿಸುತ್ತಾರೆ. ಇದು ಎಲ್ಲರಿಗೂ ಅನಾನುಕೂಲತೆಯನ್ನುಂಟು ಮಾಡುತ್ತದೆ. ಇದಲ್ಲದೆ ಸ್ಲೀಪರ್ ಮತ್ತು ಎಸಿ ಬೋಗಿಗಳಲ್ಲಿ ವೇಟಿಂಗ್‌ ಟಿಕೆಟ್ ಹೊಂದಿರುವ ಪ್ರಯಾಣಿಕರ ಸಂಖ್ಯೆ ಹೆಚ್ಚಾದಾಗ ಪ್ರಯಾಣಿಕರ ಸಂಚಾರಕ್ಕೆ ಅಡಚಣೆಯಾಗುತ್ತದೆ. ಇದು ಪ್ರಯಾಣಿಕರಿಗೆ ಅನಾನುಕೂಲತೆಯನ್ನು ಉಂಟುಮಾಡುವುದಲ್ಲದೆ, ಅವರ ಪ್ರಯಾಣವನ್ನು ತುಂಬಾ ಕಷ್ಟಕರವಾಗಿಸುತ್ತದೆ. ನೀವು ಸಹ ಆಗಾಗ ರೈಲುಗಳಲ್ಲಿ ವೇಟಿಂಗ್‌ ಟಿಕೆಟ್‌ಗಳೊಂದಿಗೆ ಪ್ರಯಾಣಿಸುತ್ತಿದ್ದರೆ ತುಂಬಾ ಎಚ್ಚರಿಕೆ ವಹಿಸಬೇಕಾಗುತ್ತದೆ.

ಇದನ್ನೂ ಓದಿ: ಪಿಎಫ್ ಚಂದಾದಾರರಿಗೆ ಭರ್ಜರಿ ಲಾಭ !ಪಿಂಚಣಿ ಹೆಚ್ಚಳದಿಂದ ಪಿಎಫ್ ವರ್ಗಾವಣೆಯವರೆಗೆ ಪ್ರಮುಖ ನಿಯಮಗಳಲ್ಲಿ ಬದಲಾವಣೆ ತಂದ ಇಪಿಎಫ್‌ಒ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News