Union Budget 2022: ರೇಲ್ವೆ ಇಲಾಖೆಗೆ ಭಾರಿ ಉಡುಗೊರೆ, 3 ವರ್ಷಗಳಲ್ಲಿ 400 ಹೊಸ ಒಂದೇ ಭಾರತ್ ರೈಲು ಓಡಿಸಲಾಗುವುದು
Budget 2022: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವರ್ಷ 2022-23ರ ಸಾಮಾನ್ಯ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಾರಿಯ ತಮ್ಮ ಬಜೆಟ್ ಭಾಷಣದಲ್ಲಿ ರೈಲ್ವೆ ಇಲಾಖೆಗೆ (Indian Railways) ಬಹುದೊಡ್ಡ ಉಡುಗೊರೆಯೊಂದನ್ನು ನೀಡಿದ್ದಾರೆ. ಈ ಕುರಿತು ಘೋಷಣೆ ಮಾಡಿರುವ ಅವರು ಮುಂದಿನ 3 ವರ್ಷಗಳಲ್ಲಿ 400 ಹೊಸ ವಂದೇ ಭಾರತ್ ರೈಲುಗಳನ್ನು (Vande Bharat Trains) ಓಡಿಸಲಾಗುವುದು ಎಂದು ಹೇಳಿದ್ದಾರೆ.
400 Vande Bharat Trains: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (FM Nirmala Sitharaman) ಸಾಮಾನ್ಯ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಮಂಡಿಸಿದ ಹಣಕಾಸು ಸಚಿವರು, ನಾವು ಸ್ವಾತಂತ್ರ್ಯದ 75ನೇ ವರ್ಷದಲ್ಲಿದ್ದೇವೆ. ಈ ಬಜೆಟ್ ಮುಂದಿನ 25 ವರ್ಷಗಳ ನೀಲನಕ್ಷೆಯನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ. ಈ ಸಂದರ್ಭದಲ್ಲಿ ಅವರು ರೈಲ್ವೇ ಇಲಾಖೆಗೆ ಸಂಬಂಧಿಸಿದಂತೆ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. ಮುಂದಿನ 3 ವರ್ಷಗಳಲ್ಲಿ 400 ಹೊಸ ತಲೆಮಾರಿನ 400 ವಂದೇ ಭಾರತ್ ರೈಲುಗಳನ್ನು ಓಡಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಮುಂದಿನ 3 ವರ್ಷಗಳಲ್ಲಿ 400 ಹೊಸ ತಲೆಮಾರಿನ ವಂದೇ ಭಾರತ್ ರೈಲುಗಳನ್ನು ಉತ್ತಮ ಸಾಮರ್ಥ್ಯದೊಂದಿಗೆ ಓಡಿಸಲಾಗುವುದು ಎಂದು ಹಣಕಾಸು ಸಚಿವರು ಹೇಳಿದ್ದಾರೆ. ಇದಲ್ಲದೆ ಮುಂದಿನ 3 ವರ್ಷಗಳಲ್ಲಿ, 100 PM ಗತಿ ಶಕ್ತಿ ಕಾರ್ಗೋ ಟರ್ಮಿನಲ್‌ಗಳನ್ನು (Gati Shakti Cargo Terminal) ಅಭಿವೃದ್ಧಿಪಡಿಸಲಾಗುವುದು ಮತ್ತು ಮೆಟ್ರೋ ವ್ಯವಸ್ಥೆಯನ್ನು ನಿರ್ಮಿಸಲು ಹೊಸ ವಿಧಾನಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
Budget 2022) ಭಾರತವು ಮುಂದಿನ 25 ವರ್ಷಗಳವರೆಗೆ ಅಡಿಪಾಯ ಪಡೆಯಲಿದೆ ಎಂದು ಹೇಳಿದ್ದಾರೆ. ಮುಂದಿನ ಹಣಕಾಸು ವರ್ಷದಲ್ಲಿ ಆರ್ಥಿಕ ಬೆಳವಣಿಗೆಯು 9.2% ಆಗುವ ನಿರೀಕ್ಷೆಯಿದೆ. ಪ್ರಸಕ್ತ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು 9.2% ಎಂದು ಅಂದಾಜಿಸಲಾಗಿದೆ ಎಂದು ಹಣಕಾಸು ಸಚಿವರು ಹೇಳಿದ್ದಾರೆ. ಇದು ವಿಶ್ವದ ಪ್ರಮುಖ ಆರ್ಥಿಕತೆಗಳಲ್ಲಿ ಅತ್ಯಧಿಕವಾಗಿದೆ. ಏರ್ ಇಂಡಿಯಾದ ಬಂಡವಾಳ ಹಿಂಪಡೆಯುವಿಕೆ ಪೂರ್ಣಗೊಂಡಿದ್ದು, ಎಲ್‌ಐಸಿಯ ಐಪಿಒ ಶೀಘ್ರದಲ್ಲೇ ಬರಲಿದೆ ಎಂದು ಹಣಕಾಸು ಸಚಿವ ಸೀತಾರಾಮನ್ ಹೇಳಿದ್ದಾರೆ.
ಬಜೆಟ್‌ನಿಂದ ರೈತರು, ಯುವಕರಿಗೆ ಅನುಕೂಲವಾಗಲಿದೆ ಎಂದು ಸೀತಾರಾಮನ್ ಹೇಳಿದ್ದಾರೆ. ಆತ್ಮ ನಿರ್ಭರ್ ಭಾರತ್ ಯೋಜನೆಯ ಮೂಲಕ 16 ಲಕ್ಷ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದಿದ್ದಾರೆ. 2022-23ರ ನಡುವೆ ರಾಷ್ಟ್ರೀಯ ಹೆದ್ದಾರಿಯ ಉದ್ದವನ್ನು 25,000 ಕಿ.ಮೀ.ಗೆ ಹೆಚ್ಚಿಸಲಾಗುವುದು ಎಂದು ಹಣಕಾಸು ಸಚಿವರು ಹೇಳಿದ್ದಾರೆ. ಗುಡ್ಡಗಾಡು ಪ್ರದೇಶಗಳ ಪರ್ವತಮಾಲಾ ರಸ್ತೆಯನ್ನು ಪಿಪಿಪಿ ಅಡಿ ತರಲಾಗುವುದು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ-Budget 2022: ದೇಶದ ಯುವಕರಿಗೆ ಭಾರಿ ನೆಮ್ಮದಿಯ ಸುದ್ದಿ ಪ್ರಕಟ, 60 ಲಕ್ಷ ಉದ್ಯೋಗ ಸೃಷ್ಟಿಯ ಭರವಸೆ
ರಾಜ್ಯ ಸರ್ಕಾರಗಳು ತಮ್ಮ ಪಠ್ಯಕ್ರಮದಲ್ಲಿ ಫಾರ್ಮಿಂಗ್ ಕೋರ್ಸ್ ಅನ್ನು ಸೇರಿಸಲು ಪ್ರೋತ್ಸಾಹಿಸಲಾಗುವುದು. ಗಂಗಾ ಕಾರಿಡಾರ್ ಸುತ್ತಮುತ್ತ ನೈಸರ್ಗಿಕ ಕೃಷಿಗೆ ಉತ್ತೇಜನ ನೀಡಲಾಗುವುದು. ಅದೇ ಸಮಯದಲ್ಲಿ, ಸಣ್ಣ ಕೈಗಾರಿಕೆಗಳಿಗೆ (MSME) ಕ್ರೆಡಿಟ್ ಗ್ಯಾರಂಟಿ ಯೋಜನೆಯಿಂದ ಸಹಾಯವನ್ನು ವಿಸ್ತರಿಸಲಾಗುವುದು ಎಂದು ಕೇಂದ್ರ ವಿತ್ತ ಸಚಿವರು ಘೋಷಿಸಿದ್ದಾರೆ.
ಇದನ್ನೂ ಓದಿ-Budget 2022 : ಎಲ್ಐಸಿಯ ಐಪಿಒ ಬಗ್ಗೆ ದೊಡ್ಡ ಘೋಷಣೆ ಮಾಡಿದ ನಿರ್ಮಲಾ ಸೀತಾರಾಮನ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.