Union Budget 2024: ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ. ಘೋಷಣೆ

Union Budget 2024: ಅಮೃತಸರ-ಕೋಲ್ಕತ್ತಾ ಕೈಗಾರಿಕಾ ಕಾರಿಡಾರ್‌ನಲ್ಲಿ ಬಿಹಾರದ ಗಯಾದಲ್ಲಿ ಕೈಗಾರಿಕಾ ಅಭಿವೃದ್ಧಿಯನ್ನು ನಾವು ಬೆಂಬಲಿಸುತ್ತೇವೆ. ಇದು ಪೂರ್ವ ಭಾಗದ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ. 26,000 ಕೋಟಿ ವೆಚ್ಚದಲ್ಲಿ ರಸ್ತೆ ಸಂಪರ್ಕ ಯೋಜನೆಗಳಾದ ಪಾಟ್ನಾ-ಪೂರ್ಣಿಯಾ ಎಕ್ಸ್‌ಪ್ರೆಸ್‌ವೇ, ಬಕ್ಸರ್-ಭಾಗಲ್ಪುರ್ ಹೆದ್ದಾರಿ, ಬೋಧಗಯಾ-ರಾಜ್‌ಗೀರ್-ವೈಶಾಲಿ-ದರ್ಭಾಂಗ ಮತ್ತು ಬಕ್ಸಾರ್‌ನಲ್ಲಿ ಗಂಗಾ ನದಿಯ ಮೇಲೆ ಹೆಚ್ಚುವರಿ ದ್ವಿಪಥ ಸೇತುವೆಯ ಅಭಿವೃದ್ಧಿಗೆ ನಾವು ಬೆಂಬಲ ನೀಡುತ್ತೇವೆ ಎಂದು ಇದೇ ವೇಳೆ ಅವರು ತಿಳಿಸಿದರು.

Written by - Puttaraj K Alur | Last Updated : Jul 23, 2024, 01:52 PM IST
  • ಈಶಾನ್ಯ ರಾಜ್ಯಗಳಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‌ನ 100ಕ್ಕೂ ಹೆಚ್ಚು ಶಾಖೆಗಳ ಸ್ಥಾಪನೆ
  • ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ & ಆಂಧ್ರ ಅಭಿವೃದ್ಧಿಗೆ ಪೂರ್ವೋದಯ ಯೋಜನೆ
  • ಕೃಷಿ ಭೂಮಿ ಮತ್ತು ರೈತರ ದಾಖಲೆಗಳನ್ನು ಡಿಜಿಟಲ್ ಮಾಡಲು ಒತ್ತು ನೀಡಲಾಗುತ್ತದೆ
Union Budget 2024: ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ. ಘೋಷಣೆ title=
Union Budget 2024

Union Budget 2024: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಗಳವಾರ 2024-25ನೇ ಸಾಲಿನ ಬಜೆಟ್‌ ಮಂಡಿಸಿದರು. ಪ್ರಧಾನಿ ಮೋದಿ ನೇತೃತ್ವದ NDA ಸರ್ಕಾರದ 3ನೇ ಅವಧಿಯ ಮೊದಲ ಹಾಗೂ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಸತತ 7ನೇ ಬಜೆಟ್‌ ಇದಾಗಿದೆ. ಈ ಬಜೆಟ್‌ನಲ್ಲಿ ವಿತ್ತ ಸಚಿವರು ಹಲವಾರು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್ ಅವರ ಪ್ರಮುಖ ಘೋಷಣೆಗಳು ಇಲ್ಲಿವೆ ನೋಡಿ...

ಈಶಾನ್ಯ ರಾಜ್ಯಗಳಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‌ನ 100ಕ್ಕೂ ಹೆಚ್ಚು ಶಾಖೆಗಳನ್ನು ಸ್ಥಾಪಿಸಲಾಗುವುದು. ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪೂರ್ವೋದಯ ಯೋಜನೆಯನ್ನು ರೂಪಿಸಲಾಗುವುದು. ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಸಹಕಾರ ನೀತಿಯನ್ನು ತರಲಾಗುವುದು ಹಾಗೂ ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ. ಮೀಸಲಿಡಲಾಗುವುದು ಎಂದು ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ. 

ಇದನ್ನೂ ಓದಿ: ಬಿಹಾರಕ್ಕಿಲ್ಲ ವಿಶೇಷ ರಾಜ್ಯ ಸ್ಥಾನಮಾನ..! ಸ್ಪೋಟಕವಾಗುತ್ತಾ ನಿತೀಶ್ ಅಸಮಾಧಾನ..?

ಸರ್ಕಾರವು ಪ್ರತಿ ವರ್ಷ 1 ಲಕ್ಷ ವಿದ್ಯಾರ್ಥಿಗಳಿಗೆ ನೇರವಾಗಿ ಇ-ವೋಚರ್‌ಗಳನ್ನು ನೀಡಲಿದ್ದು, ಇದರಲ್ಲಿ ಸಾಲದ ಮೊತ್ತದ ಮೇಲೆ ಶೇ.3ರಷ್ಟು ಬಡ್ಡಿ ಸಬ್ಸಿಡಿ ನೀಡಲಾಗುತ್ತದೆ. ಉದ್ಯೋಗಕ್ಕೆ ಸಂಬಂಧಿಸಿದ ಮೂರು ಯೋಜನೆಗಳನ್ನು ಕೇಂದ್ರ ಸರ್ಕಾರವು ಆರಂಭಿಸಲಿದೆ. ಆಂಧ್ರಪ್ರದೇಶಕ್ಕೆ 15,000 ಕೋಟಿ ರೂ.ಗಳ ವಿಶೇಷ ಆರ್ಥಿಕ ನೆರವು ನೀಡಲಾಗುವುದು ಎಂದು ಘೋಷಿಸಿದ ನಿರ್ಮಲಾ ಸೀತಾರಾಮನ್‌, ಪೂರ್ವ ಪ್ರದೇಶದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಿಸುವ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು. 

ಅಮೃತಸರ-ಕೋಲ್ಕತ್ತಾ ಕೈಗಾರಿಕಾ ಕಾರಿಡಾರ್‌ನಲ್ಲಿ ಬಿಹಾರದ ಗಯಾದಲ್ಲಿ ಕೈಗಾರಿಕಾ ಅಭಿವೃದ್ಧಿಯನ್ನು ನಾವು ಬೆಂಬಲಿಸುತ್ತೇವೆ. ಇದು ಪೂರ್ವ ಭಾಗದ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ. 26,000 ಕೋಟಿ ವೆಚ್ಚದಲ್ಲಿ ರಸ್ತೆ ಸಂಪರ್ಕ ಯೋಜನೆಗಳಾದ ಪಾಟ್ನಾ-ಪೂರ್ಣಿಯಾ ಎಕ್ಸ್‌ಪ್ರೆಸ್‌ವೇ, ಬಕ್ಸರ್-ಭಾಗಲ್ಪುರ್ ಹೆದ್ದಾರಿ, ಬೋಧಗಯಾ-ರಾಜ್‌ಗೀರ್-ವೈಶಾಲಿ-ದರ್ಭಾಂಗ ಮತ್ತು ಬಕ್ಸಾರ್‌ನಲ್ಲಿ ಗಂಗಾ ನದಿಯ ಮೇಲೆ ಹೆಚ್ಚುವರಿ ದ್ವಿಪಥ ಸೇತುವೆಯ ಅಭಿವೃದ್ಧಿಗೆ ನಾವು ಬೆಂಬಲ ನೀಡುತ್ತೇವೆ ಎಂದು ಇದೇ ವೇಳೆ ಅವರು ತಿಳಿಸಿದರು.

ಇದನ್ನೂ ಓದಿ: Budget 2024: ಬಜೆಟ್ ಮಂಡಿಸಿದ ಕೂಡಲೇ ಇತಿಹಾಸ ಸೃಷ್ಟಿಸಲಿದ್ದಾರೆ ನಿರ್ಮಲಾ ಸೀತಾರಾಮನ್?

ಉದ್ಯೋಗ ಮಾರುಕಟ್ಟೆಗೆ ಪ್ರವೇಶಿಸುವ 30 ಲಕ್ಷ ಯುವಕರಿಗೆ ಸರ್ಕಾರ 1 ತಿಂಗಳ ಪಿಎಫ್ ಕೊಡುಗೆ ನೀಡುವ ಮೂಲಕ ಪ್ರೋತ್ಸಾಹಿಸಲಿದೆ. ಎಲ್ಲಾ ಔಪಚಾರಿಕ ವಲಯಗಳಲ್ಲಿ ಕೆಲಸ ಮಾಡಲು ಬರುವ ಹೊಸಬರಿಗೆ 1 ತಿಂಗಳ ವೇತನ ನೀಡಲಾಗುವುದು. ಇಪಿಎಫ್‌ಒದಲ್ಲಿ ನೋಂದಾಯಿಸಿದ ಮೊದಲ ಬಾರಿಯ ಉದ್ಯೋಗಿಗಳಿಗೆ 3 ಕಂತುಗಳಲ್ಲಿ ನೇರ ನಗದು ವರ್ಗಾವಣೆಯಡಿ 1 ತಿಂಗಳ ಸಂಬಳ ಅಂದರೆ 15,000ವರೆಗೆ ನೀಡಲಾಗುತ್ತದೆ ಎಂದು ಹೇಳಿದರು. 

ಹವಾಮಾನ ಸ್ನೇಹಿ ಬೀಜಗಳನ್ನು ಅಭಿವೃದ್ಧಿಪಡಿಸಲು ಸರ್ಕಾರವು ಖಾಸಗಿ ವಲಯ, ತಜ್ಞರು ಮತ್ತು ಇತರರಿಗೆ ಹಣವನ್ನು ಒದಗಿಸಲಿದೆ. ಸೀಗಡಿ ಸಾಕಾಣಿಕೆ ಮತ್ತು ಮಾರುಕಟ್ಟೆಗೆ ಕೇಂದ್ರ ಸರ್ಕಾರವು ಹಣಕಾಸು ಒದಗಿಸುತ್ತದೆ. ತರಕಾರಿ ಉತ್ಪಾದನೆ ಮತ್ತು ಪೂರೈಕೆ ಸರಪಳಿಗಾಗಿ ಹೆಚ್ಚಿನ FPOಗಳನ್ನು ರಚಿಸಲಾಗುವುದು, ಕೃಷಿ ಭೂಮಿ ಮತ್ತು ರೈತರ ದಾಖಲೆಗಳನ್ನು ಡಿಜಿಟಲ್ ಮಾಡಲು ಒತ್ತು ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News