Union Budget 2024: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಗಳವಾರ 2024-25ನೇ ಸಾಲಿನ ಬಜೆಟ್‌ ಮಂಡಿಸಿದರು. ಪ್ರಧಾನಿ ಮೋದಿ ನೇತೃತ್ವದ NDA ಸರ್ಕಾರದ 3ನೇ ಅವಧಿಯ ಮೊದಲ ಹಾಗೂ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಸತತ 7ನೇ ಬಜೆಟ್‌ ಇದಾಗಿದೆ. ಈ ಬಜೆಟ್‌ನಲ್ಲಿ ವಿತ್ತ ಸಚಿವರು ಹಲವಾರು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್ ಅವರ ಪ್ರಮುಖ ಘೋಷಣೆಗಳು ಇಲ್ಲಿವೆ ನೋಡಿ...


COMMERCIAL BREAK
SCROLL TO CONTINUE READING

ಈಶಾನ್ಯ ರಾಜ್ಯಗಳಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‌ನ 100ಕ್ಕೂ ಹೆಚ್ಚು ಶಾಖೆಗಳನ್ನು ಸ್ಥಾಪಿಸಲಾಗುವುದು. ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪೂರ್ವೋದಯ ಯೋಜನೆಯನ್ನು ರೂಪಿಸಲಾಗುವುದು. ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಸಹಕಾರ ನೀತಿಯನ್ನು ತರಲಾಗುವುದು ಹಾಗೂ ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ. ಮೀಸಲಿಡಲಾಗುವುದು ಎಂದು ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ. 


ಇದನ್ನೂ ಓದಿ: ಬಿಹಾರಕ್ಕಿಲ್ಲ ವಿಶೇಷ ರಾಜ್ಯ ಸ್ಥಾನಮಾನ..! ಸ್ಪೋಟಕವಾಗುತ್ತಾ ನಿತೀಶ್ ಅಸಮಾಧಾನ..?


Budget 2024: ಬಜೆಟ್ ಮಂಡಿಸಿದ ಕೂಡಲೇ ಇತಿಹಾಸ ಸೃಷ್ಟಿಸಲಿದ್ದಾರೆ ನಿರ್ಮಲಾ ಸೀತಾರಾಮನ್?


ಉದ್ಯೋಗ ಮಾರುಕಟ್ಟೆಗೆ ಪ್ರವೇಶಿಸುವ 30 ಲಕ್ಷ ಯುವಕರಿಗೆ ಸರ್ಕಾರ 1 ತಿಂಗಳ ಪಿಎಫ್ ಕೊಡುಗೆ ನೀಡುವ ಮೂಲಕ ಪ್ರೋತ್ಸಾಹಿಸಲಿದೆ. ಎಲ್ಲಾ ಔಪಚಾರಿಕ ವಲಯಗಳಲ್ಲಿ ಕೆಲಸ ಮಾಡಲು ಬರುವ ಹೊಸಬರಿಗೆ 1 ತಿಂಗಳ ವೇತನ ನೀಡಲಾಗುವುದು. ಇಪಿಎಫ್‌ಒದಲ್ಲಿ ನೋಂದಾಯಿಸಿದ ಮೊದಲ ಬಾರಿಯ ಉದ್ಯೋಗಿಗಳಿಗೆ 3 ಕಂತುಗಳಲ್ಲಿ ನೇರ ನಗದು ವರ್ಗಾವಣೆಯಡಿ 1 ತಿಂಗಳ ಸಂಬಳ ಅಂದರೆ 15,000ವರೆಗೆ ನೀಡಲಾಗುತ್ತದೆ ಎಂದು ಹೇಳಿದರು. 


ಹವಾಮಾನ ಸ್ನೇಹಿ ಬೀಜಗಳನ್ನು ಅಭಿವೃದ್ಧಿಪಡಿಸಲು ಸರ್ಕಾರವು ಖಾಸಗಿ ವಲಯ, ತಜ್ಞರು ಮತ್ತು ಇತರರಿಗೆ ಹಣವನ್ನು ಒದಗಿಸಲಿದೆ. ಸೀಗಡಿ ಸಾಕಾಣಿಕೆ ಮತ್ತು ಮಾರುಕಟ್ಟೆಗೆ ಕೇಂದ್ರ ಸರ್ಕಾರವು ಹಣಕಾಸು ಒದಗಿಸುತ್ತದೆ. ತರಕಾರಿ ಉತ್ಪಾದನೆ ಮತ್ತು ಪೂರೈಕೆ ಸರಪಳಿಗಾಗಿ ಹೆಚ್ಚಿನ FPOಗಳನ್ನು ರಚಿಸಲಾಗುವುದು, ಕೃಷಿ ಭೂಮಿ ಮತ್ತು ರೈತರ ದಾಖಲೆಗಳನ್ನು ಡಿಜಿಟಲ್ ಮಾಡಲು ಒತ್ತು ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.