Union Budget 2025: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2025 ರಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯ ಬಜೆಟ್ ಕೂಡ ಜನರಲ್ಲಿ ವಿಶೇಷ ಆಸಕ್ತಿಯನ್ನು ಹೆಚ್ಚಿಸಿದೆ.


COMMERCIAL BREAK
SCROLL TO CONTINUE READING

ಬಜೆಟ್‌ನಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಪ್ರತಿಯೊಬ್ಬ ಭಾರತೀಯನ ಜೀವನದ ಮೇಲೆ ಪರಿಣಾಮ ಬೀರುತ್ತವೆ. ಅಗತ್ಯ ವಸ್ತುಗಳ ಬೆಲೆಯಿಂದ ಆದಾಯ ತೆರಿಗೆ ವಿನಾಯಿತಿಯವರೆಗೆ, ಪ್ರತಿಯೊಂದು ಅಂಶವು ಜನರ ಜೀವನೋಪಾಯಕ್ಕೆ ಸಂಬಂಧಿಸಿದೆ. ಈ ಬಾರಿಯ ಬಜೆಟ್‌ನಲ್ಲಿ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಇಳಿಕೆಯಾಗಲಿದೆ ಎಂದು ವಿಶ್ಲೇಷಕರು ನಿರೀಕ್ಷಿಸಿದ್ದಾರೆ. ಮುಖ್ಯವಾಗಿ ತೆರಿಗೆ ಬದಲಾವಣೆಗಳು ಅಗತ್ಯ ವಸ್ತುಗಳ ಬೆಲೆಗಳ ಮೇಲೆ ಪರಿಣಾಮ ಬೀರುತ್ತವೆ. ಮಧ್ಯಮ ವರ್ಗದ ಜನರ ಬದುಕಿಗೆ ಕೊಂಚ ನೆಮ್ಮದಿ ನೀಡುವ ಸಾಧ್ಯತೆ ಇದೆ.


ಪ್ರಧಾನಿ ನರೇಂದ್ರ ಮೋದಿ ಅವರು "ಡಿಜಿಟಲ್ ಇಂಡಿಯಾ" ಉಪಕ್ರಮವನ್ನು ಪ್ರಚಾರ ಮಾಡುತ್ತಿದ್ದಾರೆ ಮತ್ತು ಡಿಜಿಟಲ್ ಉತ್ಪನ್ನಗಳ ಬಳಕೆಯನ್ನು ಹೆಚ್ಚಿಸಲು ಶ್ರಮಿಸುತ್ತಿದ್ದಾರೆ. ಈ ದಿಸೆಯಲ್ಲಿ ಈ ಬಜೆಟ್‌ನಲ್ಲಿ ಡಿಜಿಟಲ್ ಉತ್ಪನ್ನಗಳಾದ ಫೋನ್, ಲ್ಯಾಪ್‌ಟಾಪ್ ಮತ್ತು ಟಿವಿಗಳ ಬೆಲೆಗಳು ಕಡಿಮೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ. ಎಲೆಕ್ಟ್ರಾನಿಕ್ ಉತ್ಪನ್ನಗಳ ತಯಾರಿಕೆಗೆ ಅಗತ್ಯವಾದ ಘಟಕಗಳ ಮೇಲೆ ಆಮದು ಸುಂಕವನ್ನು ಕಡಿಮೆ ಮಾಡಿದರೆ, ಎಲೆಕ್ಟ್ರಾನಿಕ್ ವಸ್ತುಗಳ ಬೆಲೆಗಳು ಕಡಿಮೆಯಾಗಬಹುದು. ಇದರಿಂದ ಕಡಿಮೆ ಬೆಲೆಗೆ ಮೊಬೈಲ್ ಫೋನ್, ಸ್ಮಾರ್ಟ್ ಟಿವಿ, ಲ್ಯಾಪ್ ಟಾಪ್ ಗಳು ದೊರೆಯಲಿವೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. 


ಕೇಂದ್ರ ಸರ್ಕಾರ ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಒತ್ತು ನೀಡುತ್ತಿರುವುದರಿಂದ ಈ ಬಾರಿ ಎಲೆಕ್ಟ್ರಿಕ್ ವಾಹನಗಳ ಮೇಲೆ ತೆರಿಗೆ ರಿಯಾಯ್ತಿ ಅಥವಾ ಹೆಚ್ಚಿನ ಪ್ರೋತ್ಸಾಹ ನೀಡುವ ಸಾಧ್ಯತೆ ಇದೆ. ಇದರಿಂದ ಈ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಯಾಗಬಹುದು. ಇದಲ್ಲದೆ, ಬಜೆಟ್ ನಿರ್ಧಾರಗಳು ಆಟೋಮೊಬೈಲ್ ಕ್ಷೇತ್ರದ ಮೇಲೆ ಪರಿಣಾಮ ಬೀರಬಹುದು.


ಮೊಬೈಲ್ ರೀಚಾರ್ಜ್ ಪ್ಲಾನ್‌ಗಳ ಬೆಲೆ ಹೆಚ್ಚಳವು ಪ್ರಸ್ತುತ ಜನರಿಗೆ ದೊಡ್ಡ ಸಮಸ್ಯೆಯಾಗಿದೆ. ಟೆಲಿಕಾಂ ಕಂಪನಿಗಳು ತಂತ್ರಜ್ಞಾನ ಮತ್ತು ಮೂಲಸೌಕರ್ಯಗಳ ಮೇಲಿನ ಖರ್ಚು ಹೆಚ್ಚಾಗುತ್ತಿದೆ ಎಂದು ಹೇಳುತ್ತಿರುವಾಗ, ಈ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಯಾವ ರೀತಿಯ ಪರಿಹಾರ ಸಿಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ. 


ಬಜೆಟ್ ನಲ್ಲಿ ಕೈಗೊಂಡಿರುವ ಕ್ರಮಗಳಿಂದ ಮಧ್ಯಮ ವರ್ಗದವರಿಗೆ ಹೆಚ್ಚು ಅನುಕೂಲವಾಗಲಿದೆ ಎಂಬುದು ಎಲ್ಲರ ಆಶಯ. ವಿಶೇಷವಾಗಿ ಬೆಲೆ ಕಡಿತ ಮತ್ತು ತೆರಿಗೆ ವಿನಾಯಿತಿಗಳಂತಹ ವಿಷಯಗಳು ಜನರ ಜೀವನವನ್ನು ಸುಲಭಗೊಳಿಸುತ್ತವೆ. ಡಿಜಿಟಲ್ ಉತ್ಪನ್ನಗಳು ಮತ್ತು ಅಗತ್ಯ ವಸ್ತುಗಳ ಬೆಲೆ ಇಳಿಕೆಯಿಂದ ಜನರಿಗೆ ಹೆಚ್ಚು ಲಾಭವಾಗುವ ಸಾಧ್ಯತೆ ಇದೆ. ಈ ಬಾರಿಯ ಬಜೆಟ್ ಘೋಷಣೆಯಲ್ಲಿ ಯಾವ ಪ್ರಮುಖ ನಿರ್ಧಾರಗಳು ಹೊರಬೀಳಲಿವೆ ಮತ್ತು ಜನಜೀವನದ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದನ್ನು ಕಾದುನೋಡಲು ಫೆಬ್ರವರಿ 1ರವರೆಗೆ ಕಾಯಬೇಕಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.