government scheme for unmarried women: ಮಹಿಳೆಯರಿಗಾಗಿ ಸರ್ಕಾರದಿಂದ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ. ಇತ್ತೀಚೆಗಷ್ಟೇ ಮಹಿಳೆಯರಿಗಾಗಿ ನಾರಿ ಶಕ್ತಿ ವಂದನ್ ಕಾಯ್ದೆ (ಮಹಿಳಾ ಮೀಸಲಾತಿ ಮಸೂದೆ)ಯನ್ನು ಮೋದಿ ಸರ್ಕಾರ ಸಂಸತ್ತಿನಲ್ಲಿ ಅಂಗೀಕರಿಸಿದೆ. ಇದರಿಂದಾಗಿ ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಶೇ.33 ಮೀಸಲಾತಿ ಪಡೆಯಲು ಸಾಧ್ಯವಾಗುತ್ತದೆ. ಇನ್ನು ಇದರ ಜೊತೆಯಲ್ಲಿಯೇ ಮಹಿಳೆಯರಿಗಾಗಿ ಮಧ್ಯಪ್ರದೇಶ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಮಹಿಳೆಯರಿಗೆ ಆರ್ಥಿಕ ನೆರವು ನೀಡಲೆಂದೆ ಹೊಸ ಯೋಜನೆಯನ್ನು ಜಾರಿಗೆ ತರಲಾಗುತ್ತದೆ ಎಂದು ಸ್ವತಃ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದ್ದಾರೆ.
ಇದನ್ನೂ ಓದಿ: ಮುಂದಿನ 18 ವರ್ಷ ಈ ರಾಶಿಗೆ ರಾಜರಂತಹ ಜೀವನ: ಸಂಪತ್ತಿನ ಮಳೆ ಫಿಕ್ಸ್, ಅದೃಷ್ಟ ಬೆಳಗಿ ಬೆನ್ನಿಗೆ ನಿಲ್ಲುವನು ರಾಹು
ಮಹಿಳೆಯರಿಗಾಗಿ ಹಲವು ಉತ್ತಮ ಯೋಜನೆಗಳನ್ನು ಮಧ್ಯಪ್ರದೇಶದಲ್ಲಿ ಶಿವರಾಜ್ ಸರ್ಕಾರ ನಡೆಸುತ್ತಿದೆ. ಈಗ 21 ವರ್ಷ ಮೇಲ್ಪಟ್ಟ ಅವಿವಾಹಿತ ಮಹಿಳೆಯರಿಗಾಗಿ ಯೋಜನೆಯೊಂದನ್ನು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು 21 ವರ್ಷಕ್ಕಿಂತ ಮೇಲ್ಪಟ್ಟ ಅವಿವಾಹಿತ ಮಹಿಳೆಯರಿಗೆ ಲಾಡ್ಲಿ ಬೆಹ್ನಾ ಯೋಜನೆಯಡಿ ಪ್ರಯೋಜನಗಳನ್ನು ನೀಡಲು ಮುಂದಾಗಿದ್ದಾರೆ.
ಅವಿವಾಹಿತ ಮಹಿಳೆಯರಿಗೂ ಲಾಭ
ಈ ಯೋಜನೆಯಡಿ 21 ವರ್ಷ ಮೇಲ್ಪಟ್ಟ ಅವಿವಾಹಿತ ಮಹಿಳೆಯರಿಗೆ ಮಾಸಿಕ 1,250 ರೂ. ಸಿಗಲಿದೆ. ಈ ಸಹಾಯಧನವನ್ನು ಹಂತ ಹಂತವಾಗಿ ಮಾಸಿಕ 3000 ರೂ.ಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ. ಈ ಯೋಜನೆಯಿಂದ ಸುಮಾರು 1.32 ಕೋಟಿ ಮಹಿಳೆಯರು ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಚೌಹಾಣ್ ಹೇಳಿದರು.
ಇದನ್ನೂ ಓದಿ: ಮೊದಲ ಸ್ಪರ್ಧಿ ನಟನೂ ಅಲ್ಲ, ನಟಿಯೂ ಅಲ್ಲ! ಬಿಗ್ ಬಾಸ್ ಮನೆಗೆ ಆಟವಾಡಲು ಬರ್ತಿದೆ ಮುದ್ದು 'ಚಾರ್ಲಿ’
ಭಾರತೀಯ ಜನತಾ ಪಕ್ಷದ ಜನಾಶೀರ್ವಾದ ಯಾತ್ರೆಯಡಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುವಾಗ, ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಈ ವಿಷಯವನ್ನು ಪ್ರಕಟಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ