ಕೇಂದ್ರದ ಬಳಿಕ ರಾಜ್ಯ ಸರ್ಕಾರಿ ನೌಕರರಿಗೂ ಸಿಹಿ ! ಲೋಕಸಭೆ ಚುನಾವಣೆಗೂ ಮುನ್ನ ವೇತನ ಹೆಚ್ಚಳದ ಅಧಿಕೃತ ಘೋಷಣೆ
DA Hike For State govt employees : ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ನೌಕರರು ಮತ್ತು ಪಿಂಚಣಿದಾರರಿಗೆ ಶೇ 4ರಷ್ಟು ಡಿಎ ಹೆಚ್ಚಳ ಮಾಡಲು ಸರ್ಕಾರ ಅನುಮೋದನೆ ನೀಡಿದೆ. ತುಟ್ಟಿ ಭತ್ಯೆ ಹೆಚ್ಚಳವು ಜನವರಿ 1, 2024 ರಿಂದ ಜಾರಿಗೆ ಬರಲಿದೆ.
Dearness Allowance Hike : ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ತನ್ನ ಉದ್ಯೋಗಿಗಳ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿ ಘೋಷಣೆ ಮಾಡಿತ್ತು. ಕೇಂದ್ರ ಸರ್ಕಾರದ ಈ ಘೋಷಣೆ ಬಳಿಕ ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ ಭಾರೀ ಹೆಚ್ಚಳ ಕಂಡು ಬಂದಿದೆ. ಇದೀಗ ಕೇಂದ್ರ ಸರ್ಕಾರದ ನಂತರ ರಾಜ್ಯ ಸರ್ಕಾರ ಕೂಡಾ ತನ್ನ ನೌಕರರ ತುಟ್ಟಿಭತ್ಯೆ ಯಲ್ಲಿನ ಹೆಚ್ಚಳವನ್ನು ಘೋಷಿಸಿದೆ. ಹೌದು, ಉತ್ತರ ಪ್ರದೇಶದ ಯೋಗಿ ಸರ್ಕಾರ ರಾಜ್ಯದ ಲಕ್ಷಾಂತರ ನೌಕರರು ಮತ್ತು ಪಿಂಚಣಿದಾರರಿಗೆ ಸಿಹಿಸುದ್ದಿ ನೀಡಿದೆ. ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ನೌಕರರು ಮತ್ತು ಪಿಂಚಣಿದಾರರಿಗೆ ಶೇ 4ರಷ್ಟು ಡಿಎ ಹೆಚ್ಚಳ ಮಾಡಲು ಸರ್ಕಾರ ಅನುಮೋದನೆ ನೀಡಿದೆ. ತುಟ್ಟಿ ಭತ್ಯೆ ಹೆಚ್ಚಳವು ಜನವರಿ 1, 2024 ರಿಂದ ಜಾರಿಗೆ ಬರಲಿದೆ.
ಜನವರಿ 1 ರಿಂದಲೇ ಹೆಚ್ಚಳ ಅನ್ವಯ :
ಡಿಎ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಜನವರಿ 1 ರಿಂದಲೇ ಈ ಹೆಚ್ಚಳ ಜಾರಿಗೆ ಬರಲಿದೆ. ಈ ಹೆಚ್ಚಳದ ನಂತರ, ನೌಕರರು ಮತ್ತು ಪಿಂಚಣಿದಾರರಿಗೆ ನೀಡಲಾಗುವ ತುಟ್ಟಿಭತ್ಯೆಯನ್ನು ಶೇಕಡಾ 50ಕ್ಕೆ ಹೆಚ್ಚಿಸಲಾಗಿದೆ. ಪ್ರಸ್ತುತ ನೌಕರರು ಮೂಲ ವೇತನದ 46 ಪ್ರತಿಶತದಷ್ಟು ತುಟ್ಟಿಭತ್ಯೆಯನ್ನು ಪಡೆಯುತ್ತಿದ್ದಾರೆ.ಸರ್ಕಾರದ ಈ ನಿರ್ಧಾರದಿಂದ ರಾಜ್ಯದ ಖಜಾನೆ ಮೇಲೆ ಸುಮಾರು 314 ಕೋಟಿ ರೂ.ಗಳ ಹೆಚ್ಚುವರಿ ಹೊರೆ ಬೀಳಲಿದೆ.
ಇದನ್ನೂ ಓದಿ : Phonepe-Paytmಗೆ ಮುಳುವಗಾಲಿದೆ ಜಿಯೋ ! UPI ಪೇಮೆಂಟ್ ಸೆಕ್ಟರ್ ಗೂ ಕಾಲಿಟ್ಟ ಮುಖೇಶ್ ಅಂಬಾನಿ
ಪ್ರಸ್ತುತ 46 ಪ್ರತಿಶತ ಡಿಎ ಮತ್ತು ಡಿಆರ್ :
ಮುಂದಿನ ದಿನಗಳಲ್ಲಿ ಹೆಚ್ಚಿನ ರಾಜ್ಯ ಸರ್ಕಾರಗಳು ಡಿಎ ಹೆಚ್ಚಳವನ್ನು ಘೋಷಿಸಬಹುದು. ಪ್ರಸ್ತುತ, ಯುಪಿ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು 46 ಶೇಕಡಾ ದರದಲ್ಲಿ DA/DR ಅನ್ನು ಪಡೆಯುತ್ತಿದ್ದಾರೆ. ಏಪ್ರಿಲ್‌ನಲ್ಲಿ ಕೈ ಸೇರುವ ವೇತನದಲ್ಲಿ ಡಿ ಎ ಹೆಚ್ಚಳದ ಮೊತ ಪಾವತಿಯಾಗಲಿದೆ. ಬಾಕಿ ಡಿಎ ಕೂಡಾ ಅದೆ ವೇತನದೊಂದಿಗೆ ಕೈ ಸೇರುವ ನಿರೀಕ್ಷೆ ಇದೆ. ಇತ್ತೀಚೆಗಷ್ಟೇ ನಡೆದ ಮೋದಿ ಸಂಪುಟ ಸಭೆಯಲ್ಲಿ ಕೇಂದ್ರ ನೌಕರರು ಮತ್ತು ಪಿಂಚಣಿದಾರರ ಡಿಎ ಹೆಚ್ಚಿಸಲು ನಿರ್ಧರಿಸಲಾಗಿತ್ತು.
ಇದನ್ನೂ ಓದಿ : Credit Card Balance ವರ್ಗಾವಣೆ ಯಾವಾಗ ಲಾಭದಾಯಕವೇ? ಇದರ ಅನುಕೂಲ-ಅನಾನುಕೂಲಗಳೇನು?
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.