Free Gas Cylinder in UP : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ದೊಡ್ಡ ಘೋಷಣೆ ಮಾಡಿದ್ದಾರೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಹೋಳಿ ಮತ್ತು ರಂಜಾನ್ ಸಂದರ್ಭದಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಮರುಪೂರಣ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ಲಕ್ನೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 1.86 ಕೋಟಿ ಕುಟುಂಬಗಳಿಗೆ 1,890 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಹಬ್ಬದ ಮೊದಲು ಈ ಕುಟುಂಬಗಳು ಇದರ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುತ್ತದೆ. ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ 2016 ರಲ್ಲಿ ಪ್ರಾರಂಭಿಸಿದ್ದರು. ಈ ಮೂಲಕ ದೇಶಾದ್ಯಂತ 10 ಕೋಟಿ ಕುಟುಂಬಗಳು ಉಚಿತ ಗ್ಯಾಸ್ ಸಂಪರ್ಕವನ್ನು ಪಡೆದಿವೆ ಎಂದು ಸಿಎಂ ಹೇಳಿದ್ದಾರೆ.
ದೀಪಾವಳಿ ಮತ್ತು ಹೋಳಿಗೆ ಉಚಿತ ಗ್ಯಾಸ್ ಸಿಲಿಂಡರ್ :
ನಮ್ಮ ಸರ್ಕಾರ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ದೀಪಾವಳಿ ಮತ್ತು ಹೋಳಿಯಂದು ಉಚಿತ ಗ್ಯಾಸ್ ಸಿಲಿಂಡರ್ ನೀಡಲಾಗುವುದು ಎಂದು ಭರವಸೆ ನೀಡಿತ್ತು. ಇದಕ್ಕಾಗಿ ಸರ್ಕಾರ ಪ್ರತಿ ಬಾರಿ 1,890 ಕೋಟಿ ರೂ.ಗಳನ್ನು ನೀಡುತ್ತದೆ ಮತ್ತು ಪ್ರತಿ ವರ್ಷ ಬಜೆಟ್‌ನಿಂದ 3,760 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತದೆ ಎಂದು ಹೇಳಿದರು. ಹಿಂದಿನ ಕಾಲದಲ್ಲಿ ಮಹಿಳೆಯರು ಅಡುಗೆ ಮಾಡುವಾಗ ಹೊಗೆಯಿಂದ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಗ್ಯಾಸ್ ಸಂಪರ್ಕ ಪಡೆಯುವುದು ಕೂಡಾ ಕಷ್ಟಕರವಾಗಿತ್ತು. ಆದರೆ ಇಂದು ಉಜ್ವಲ ಯೋಜನೆಯಿಂದಾಗಿ ಪ್ರತಿಯೊಬ್ಬ ಬಡ ಮಹಿಳೆಗೂ ಉಚಿತ ಗ್ಯಾಸ್ ಸಂಪರ್ಕ ಮತ್ತು ಇಂಧನ ಮರುಪೂರಣದ ಸೌಲಭ್ಯ ಸಿಕ್ಕಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : 2 ಬ್ಯಾಂಕ್ ಖಾತೆಗಳನ್ನು ಒಂದು EPF ಖಾತೆಗೆ ಲಿಂಕ್ ಮಾಡಬಹುದೇ? ಇಲ್ಲಿದೆ ಬಹಳ ಮುಖ್ಯ ಅಪ್ಡೇಟ್
15 ಕೋಟಿ ಜನರು ಉಚಿತ ಪಡಿತರ ಯೋಜನೆಯ ಲಾಭ :
ಈಗ 80,000 ಕೋಟಾ ಪಡಿತರ ಅಂಗಡಿಗಳಿವೆ ಮತ್ತು ಅಲ್ಲಿ ಇ-ಪೋಸ್ ಯಂತ್ರಗಳನ್ನು ಅಳವಡಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. ಇದು ಅಕ್ರಮಗಳ ಮೇಲೆ ತಕ್ಷಣದ ಕ್ರಮವನ್ನು ಖಚಿತಪಡಿಸುತ್ತದೆ. ನಾಲ್ಕು ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಆರಂಭಿಸಿದ ಉಚಿತ ಪಡಿತರ ಯೋಜನೆಯ ಲಾಭವನ್ನು 15 ಕೋಟಿ ಜನರು ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು. ಮುಖ್ಯಮಂತ್ರಿ ಕನ್ಯಾ ಸುಮಂಗಲ ಯೋಜನೆಯಡಿ 22 ಲಕ್ಷ ಹೆಣ್ಣು ಮಕ್ಕಳಿಗೆ 25,000 ರೂ.ಗಳ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು. ಇದಲ್ಲದೆ, ಸಾಮೂಹಿಕ ವಿವಾಹ ಯೋಜನೆಯಡಿ ನಾಲ್ಕು ಲಕ್ಷ ಬಡ ಹೆಣ್ಣು ಮಕ್ಕಳ ವಿವಾಹವಾಗಿದೆ. ಈಗ ಈ ಯೋಜನೆಯಡಿ ನೀಡಲಾಗುವ ಸಹಾಯವನ್ನು 35,000 ರೂ.ಗಳಿಂದ 1 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದಿದ್ದಾರೆ.
ಬೋರ್ಡ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸುವ ಹೆಣ್ಣುಮಕ್ಕಳಿಗೆ ಸ್ಕೂಟಿ ನೀಡಲಾಗುವುದು ಎಂದು ಯೋಗಿ ಹೇಳಿದರು. ಇದಲ್ಲದೆ, ಪ್ರತಿ ಜಿಲ್ಲೆಯಲ್ಲಿ ಕೆಲಸ ಮಾಡುವ ಮಹಿಳೆಯಾರಿಗಾಗಿ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗುವುದು, ಅವುಗಳಿಗೆ ಅಹಲ್ಯಾಬಾಯಿ ಹೋಳ್ಕರ್ ಅವರ ಹೆಸರನ್ನು ಇಡಲಾಗುವುದು ಎಂದು ಹೇಳಿದ್ದಾರೆ. ಗೋಧಿಯ ಕನಿಷ್ಠ ಬೆಂಬಲ ಬೆಲೆಯನ್ನು (MSP) ಈಗ ಕ್ವಿಂಟಲ್‌ಗೆ 150 ರೂ. ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. ರೈತರಿಗೆ ಅಗ್ಗದ ದರದಲ್ಲಿ ಆಹಾರವನ್ನು ಒದಗಿಸಲು ಮಾರುಕಟ್ಟೆಗಳಲ್ಲಿ ಅಗ್ಗದ ಕ್ಯಾಂಟೀನ್‌ಗಳನ್ನು ಸಹ ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಭಾರಿ ಆಘಾತ ನೀಡಿದ ಸರ್ಕಾರ...! ಕಳೆದ 7 ವರ್ಷದಲ್ಲೂ ಎಂದೂ ಹೀಗೆ ಆಗಿರಲಿಲ್ಲ..!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ









