e-Shram Card Registration: ಇ-ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸಲು ಬಯಸಿದರೆ, ಈ ದಾಖಲೆಗಳನ್ನು ಸಿದ್ಧವಾಗಿಡಿ

e-Shram Card Registration: ಇ-ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸಲು ಆಧಾರ್ ಸಂಖ್ಯೆ, ಆಧಾರ್ ಜೊತೆ ಲಿಂಕ್ ಮಾಡಿರುವ ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಸಂಖ್ಯೆ ಅಗತ್ಯ.

Written by - Yashaswini V | Last Updated : Oct 4, 2021, 10:31 AM IST
  • ಇಲ್ಲಿಯವರೆಗೆ ಅಸಂಘಟಿತ ವಲಯದ 2 ಕೋಟಿಗೂ ಹೆಚ್ಚು ಕಾರ್ಮಿಕರು ತಮ್ಮನ್ನು ಈ ಇ-ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ
  • ಕಾರ್ಮಿಕರು ಸಾಮಾನ್ಯ ಸೇವಾ ಕೇಂದ್ರಗಳು (CSC ಗಳು) ಅಥವಾ ರಾಜ್ಯ ಸರ್ಕಾರದ ಪ್ರಾದೇಶಿಕ ಕಛೇರಿಗಳಿಗೆ ಭೇಟಿ ನೀಡುವ ಮೂಲಕ ತಮ್ಮನ್ನು ನೋಂದಾಯಿಸಿಕೊಳ್ಳಬಹುದು
  • ಇದಕ್ಕಾಗಿ ಅವರು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ
e-Shram Card Registration: ಇ-ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸಲು ಬಯಸಿದರೆ, ಈ ದಾಖಲೆಗಳನ್ನು ಸಿದ್ಧವಾಗಿಡಿ title=
e-Shramik Card (Image courtesy: PTI)

ನವದೆಹಲಿ: e-Shram Card Registration- ಕೇಂದ್ರ ಸರ್ಕಾರ ಇತ್ತೀಚೆಗೆ ಇ-ಶ್ರಮ ಪೋರ್ಟಲ್ ಅನ್ನು ಆರಂಭಿಸಿದ್ದು, ಇದನ್ನು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಲಾಗುತ್ತದೆ. ಅದೇ ಸಮಯದಲ್ಲಿ, ಅದರ ನೋಂದಣಿಗೆ ಕೆಲಸಗಾರರು ಕೆಲವು ಅಗತ್ಯ ದಾಖಲೆಗಳನ್ನು ಹೊಂದಿರಬೇಕು. ಇವು ಆಧಾರ್ ಸಂಖ್ಯೆ, ಆಧಾರ್ ಗೆ ಲಿಂಕ್ ಮಾಡಿರುವ ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಸಂಖ್ಯೆ ಹೊಂದಿರುವುದು ಅಗತ್ಯವಾಗಿದೆ. ಇ-ಶ್ರಮ ಪೋರ್ಟಲ್ ಅಡಿಯಲ್ಲಿ ನೋಂದಾಯಿಸಲಾದ ಕೆಲಸಗಾರರನ್ನು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) ಅಡಿಯಲ್ಲಿ ನೋಂದಾಯಿಸಲಾಗುತ್ತದೆ. ಅದೇ ಸಮಯದಲ್ಲಿ, ಮೊದಲ ವರ್ಷದ ಪ್ರೀಮಿಯಂ ಅನ್ನು ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಿಂದ ನೀಡಲಾಗುವುದು. 

2 ಕೋಟಿಗೂ ಹೆಚ್ಚು ಕಾರ್ಮಿಕರು ನೋಂದಾಯಿಸಿಕೊಂಡಿದ್ದಾರೆ:
ಇಲ್ಲಿಯವರೆಗೆ ಅಸಂಘಟಿತ ವಲಯದ 2 ಕೋಟಿಗೂ ಹೆಚ್ಚು ಕಾರ್ಮಿಕರು ತಮ್ಮನ್ನು ಈ ಇ-ಶ್ರಮ ಪೋರ್ಟಲ್‌ನಲ್ಲಿ (e-Shram Portal) ನೋಂದಾಯಿಸಿಕೊಂಡಿದ್ದಾರೆ. ಕಾರ್ಮಿಕರು ಸಾಮಾನ್ಯ ಸೇವಾ ಕೇಂದ್ರಗಳು (CSC ಗಳು) ಅಥವಾ ರಾಜ್ಯ ಸರ್ಕಾರದ ಪ್ರಾದೇಶಿಕ ಕಛೇರಿಗಳಿಗೆ ಭೇಟಿ ನೀಡುವ ಮೂಲಕ ತಮ್ಮನ್ನು  ನೋಂದಾಯಿಸಿಕೊಳ್ಳಬಹುದು ಮತ್ತು ಇದಕ್ಕಾಗಿ ಅವರು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಅದೇ ಸಮಯದಲ್ಲಿ, ಅವರು ತಮ್ಮ ಹೆಸರನ್ನು eshram.gov.in ನಲ್ಲಿ ನೋಂದಾಯಿಸಿಕೊಳ್ಳಬಹುದು. ಅಸಂಘಟಿತ ಕಾರ್ಮಿಕರು ತಮ್ಮ ಹೆಸರನ್ನು ಅದರಲ್ಲಿ ದಾಖಲಿಸಲು ಯಾವುದೇ ಆದಾಯ ಮಾನದಂಡಗಳಿಲ್ಲ. ಆದರೆ, ಅವರು ಆದಾಯ ತೆರಿಗೆ ಪಾವತಿಸುತ್ತಿರಬಾರದು ಎಂಬುದು ಒಂದೇ ಷರತ್ತು. 

ಇದನ್ನೂ ಓದಿ- e-SHRAM ಪೋರ್ಟಲ್‌ನಲ್ಲಿ ನೋಂದಾಯಿಸಿ, 2 ಲಕ್ಷ ರೂ.ವರೆಗೆ ಲಾಭ ಪಡೆಯಿರಿ

ಕಾರ್ಮಿಕ ಕಾರ್ಡ್‌ಗಾಗಿ ನೋಂದಣಿ ಪ್ರಕ್ರಿಯೆ:
>> ಇ-ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸಲು ಬಯಸಿದರೆ, e - shramik ಪೋರ್ಟಲ್‌ನ ಅಧಿಕೃತ ವೆಬ್‌ಸೈಟ್ eshram.gov.in ಗೆ ಲಾಗಿನ್ ಆಗಿ.
>> ಮುಖಪುಟದಲ್ಲಿ, 'ಇ-ಶ್ರಮ್ ನಲ್ಲಿ ನೋಂದಾಯಿಸಿ' (Register on e-SHRAM) ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈಗ ಆಧಾರ್ ಲಿಂಕ್ ಮಾಡಿದ ಮೊಬೈಲ್ ಸಂಖ್ಯೆ ಮತ್ತು ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ. ಅದರ ನಂತರ Send OTP ಮೇಲೆ ಕ್ಲಿಕ್ ಮಾಡಿ
>> ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನೀಡಿದ ಸೂಚನೆಯನ್ನು ಅನುಸರಿಸಿ.

ಒಂದು ವೇಳೆ ಆಧಾರ್ (Aadhaar) ಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಯನ್ನು ಕೆಲಸಗಾರ ಹೊಂದಿಲ್ಲದಿದ್ದರೆ, ಆತ ಬಯೋಮೆಟ್ರಿಕ್ ದೃಢೀಕರಣದ ಮೂಲಕ ಹತ್ತಿರದ ಸಿಎಸ್ ಸಿ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಬಹುದು.

ಇದನ್ನೂ ಓದಿ- SBI Festive Card Offer : SBI ಗ್ರಾಹಕರಿಗೆ ಭರ್ಜರಿ ಆಫರ್! ನಾಳೆಯಿಂದ ಶಾಪಿಂಗ್‌ನಲ್ಲಿ ಸಿಗಲಿದೆ ಬಂಪರ್ ಕ್ಯಾಶ್‌ಬ್ಯಾಕ್!
 
ಯಾವುದೇ ರೀತಿಯ ಸಹಾಯಕ್ಕಾಗಿ ನೀವು ಈ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಬಹುದು:

ಕಾರ್ಮಿಕರಿಗೆ ಈ ಪೋರ್ಟಲ್‌ನಲ್ಲಿ ಸುಲಭವಾಗಿ ನೋಂದಾಯಿಸಲು ಸರ್ಕಾರವು ಟೋಲ್ ಫ್ರೀ ಸಂಖ್ಯೆಯನ್ನು ನೀಡಿದೆ. ಈ ಸಂಖ್ಯೆ 14434. ಯಾವುದೇ ಕಾರ್ಮಿಕರಿಗೆ ನೋಂದಣಿ ಮಾಡಿಸುವಲ್ಲಿ ಯಾವುದೇ ರೀತಿಯ ತೊಂದರೆ ಎದುರಾದರೆ ಅವರು ಈ ಸಂಖ್ಯೆಗೆ ಕರೆ ಮಾಡಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News