ಮಹಿಳೆಯರಿಗೆ ತಿಂಗಳಿಗೆ 2,500 ರೂ.ಗಳನ್ನು ನೀಡುವ ಯೋಜನೆಯ ಬಗ್ಗೆ ರಾಜಧಾನಿಯಲ್ಲಿ ಮಹತ್ವದ ಘೋಷಣೆಯಾಗಿದೆ. ಈ ಯೋಜನೆಯಡಿ ಮಹಿಳೆಯರ ನೋಂದಣಿ ಪ್ರಕ್ರಿಯೆಯು ಮಾರ್ಚ್ 8 ರಿಂದ ಪ್ರಾರಂಭವಾಗಲಿದೆ. ಮಹಿಳೆಯರಿಗೆ ತಿಂಗಳಿಗೆ 2,500 ರೂ.ಗಳನ್ನು ನೀಡುವ ನೋಂದಣಿ ಪ್ರಕ್ರಿಯೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಈ ಯೋಜನೆಯಡಿ ಆಯ್ಕೆಯಾದ ಮಹಿಳೆಯರ ಖಾತೆಗಳಿಗೆ 1 ತಿಂಗಳೊಳಗೆ ಹಣ ವರ್ಗಾವಣೆಯಾಗಲು ಆರಂಭವಾಗುತ್ತದೆ.
ಆರ್ಥಿಕವಾಗಿ ದುರ್ಬಲ ವರ್ಗದ ಮಹಿಳೆಯರಿಗೆ ತಿಂಗಳಿಗೆ ದೆಹಲಿ ಸರ್ಕಾರದಿಂದ 2,500 ರೂ.ಗಳನ್ನು ನೀಡುವ ಪ್ರಕ್ರಿಯೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಈ ಯೋಜನೆಯು ಲಕ್ಷಾಂತರ ಬಡ ಮಹಿಳೆಯರಿಗೆ ಪ್ರಯೋಜನವನ್ನು ನೀಡುವ ಮೂಲಕ ಅವರ ಆರ್ಥಿಕ ಸಬಲೀಕರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮನೋಜ್ ತಿವಾರಿ ಹೇಳಿದ್ದಾರೆ. ಈ ಯೋಜನೆಯಡಿ ಆಯ್ಕೆಯಾದ ಮಹಿಳೆಯರ ಖಾತೆಗಳಿಗೆ 1 ತಿಂಗಳೊಳಗೆ ಹಣ ವರ್ಗಾವಣೆಯಾಗಲು ಆರಂಭವಾಗುತ್ತದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : EPF Withdrawal Rules:ಇನ್ನು ATM, Phonepe, Paytm ಮೂಲಕವೂ ಹಿಂಪಡೆಯಬಹುದು ಪಿಎಫ್ ಮೊತ್ತ !
ಜನರಿಗೆ ನೀಡಿದ ಭರವಸೆಯನ್ನು ಈಡೇರಿಸಲಾಗುವುದು :
ಈ ಯೋಜನೆಯನ್ನು ಸರಿಯಾಗಿ ಜಾರಿಗೆ ತರಲು ಸಹಕಾರ ನೀಡುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿದರು. ದೆಹಲಿ ವಿಧಾನಸಭಾ ಚುನಾವಣೆಗೂ ಮುನ್ನ, ಬಿಜೆಪಿ ಈ ಯೋಜನೆಯನ್ನು ಘೋಷಿಸಿತ್ತು.ಬಡ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ.ಗಳನ್ನು ನೀಡುವುದಾಗಿ ಭರವಸೆ ನೀಡಿತ್ತು. ಸರ್ಕಾರ ರಚನೆಯಾದ ನಂತರ ಈ ಭರವಸೆಯನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಇತರ ಬಿಜೆಪಿ ನಾಯಕರು ಭರವಸೆ ನೀಡಿದ್ದರು.
ಆದರೆ, ಹೊಸದಾಗಿ ರಚನೆಯಾದ ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಂಡಿಲ್ಲ.ಇದೀಗ ಪ್ರತಿಪಕ್ಷಗಳು ಸರ್ಕಾರದ ವಿರುದ್ದ ಈ ಬಗ್ಗೆ ಪ್ರಶ್ನೆಗಳನ್ನು ಎತ್ತಲು ಆರಂಭಿಸಿವೆ.
ಇದನ್ನೂ ಓದಿ : ಸರ್ಕಾರಿ ನೌಕರರಿಗೆ ಶೇ.157 ರಷ್ಟು ವೇತನ ಹೆಚ್ಚಳ !NC-JCM ಮೂಲಕ ಮಾಹಿತಿ ಸೋರಿಕೆ !ಉದ್ಯೋಗಿಗಳಿಗೆ ಜಾಕ್‌ಪಾಟ್!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.









