Yeshasvini scheme Updates: ರಾಜ್ಯ ಸರ್ಕಾರ ಯಶಸ್ವಿನಿ ಯೋಜನೆಯಡಿ ಬರುವ 200ಕ್ಕೂ ಹೆಚ್ಚು ಚಿಕಿತ್ಸಾ ದರಗಳನ್ನು ಪರಿಷ್ಕರಣೆ ಮಾಡಿದೆ. ಇದರ ಜೊತೆಗೆ ಆಸ್ಪತ್ರೆಗಳು ಸಹ ಹೆಚ್ಚಾಗಿದ್ದು, ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಇದರಿಂದ ಭರ್ಜರಿ ಲಾಭವಾಗಲಿದೆ. 2003ರಲ್ಲಿ ಆರಂಭವಾಗಿದ್ದ ಈ ಯೋಜನೆಯು ಕಾರನಾಂತರಗಳಿಂದ 2018ರಲ್ಲಿ ಸ್ಥಗಿತವಾಗಿತ್ತು.
ರಾಜ್ಯ ಸರ್ಕಾರವು 2023ರ ಜನವರಿಯಲ್ಲಿ ಸಹಕಾರ ಸಂಘದಡಿ ಮರುಜಾರಿಗೊಳಿಸಿತ್ತು. 2023-24ನೇ ಸಾಲಿಗೆ ಈಗಾಗಲೇ ಸದಸ್ಯರ ನೋಂದಣಿಗೆ ಮಾರ್ಚ್ 31ರವರೆಗೆ ವಿಸ್ತರಣೆಯಾಗಿತ್ತು. ಇದರ ಬೆನ್ನಲ್ಲೇ 200ಕ್ಕೂ ಹೆಚ್ಚು ಚಿಕಿತ್ಸಾ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ.
ಇದನ್ನೂ ಓದಿ: Maruti Suzuki Offers: ಈ ಮಾರುತಿ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್, ಇಂದೇ ಬುಕ್ ಮಾಡಿ
ಯಶಸ್ವಿನಿ ಯೋಜನೆಯಡಿ ಬರುವ ದರ ಕಡಿಮೆಯಿದ್ದ ಹಿನ್ನಲೆ ಖಾಸಗಿ ಆಸ್ಪತ್ರೆಗಳು ಈ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿದ್ದವು. ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗುವುದು ಕಷ್ಟವಾಗಿತ್ತು. ಇದನ್ನರಿತ ರಾಜ್ಯ ಸರ್ಕಾರವು ಯೋಜನೆಯ ಚಿಕಿತ್ಸಾ ದರವನ್ನು ಶೇ.300ರಷ್ಟು ಹೆಚ್ಚಳ ಮಾಡಿದೆ. ಇದರಿಂದ 370ರಷ್ಟಿದ್ದ ಖಾಸಗಿ ಆಸ್ಪತ್ರೆಗಳ ಸಂಖ್ಯೆ 600ರ ಗಡಿ ದಾಟಿದೆ ಈ ಬಗ್ಗೆ ಸರ್ಕಾರ ಮಾಹಿತಿ ನೀಡಿದೆ.
ಯಶಸ್ವಿನಿ ಯೋಜನೆಯಡಿ 2,128 ಚಿಕಿತ್ಸೆಗಳು ಲಭ್ಯವಾಗಲಿದ್ದು, ಈ ಪೈಕಿ 206 ಚಿಕಿತ್ಸೆಗಳ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ. ಈ ಮೊದಲು ಯೋಜನೆಯಡಿ ಸುಮಾರು 1,650 ಚಿಕಿತ್ಸೆಗಳನ್ನು ಒದಗಿಸಲಾಗುತ್ತಿತ್ತು. ಯೋಜನೆಯಡಿ ಒಟ್ಟು 637 ನೆಟ್‌ವರ್ಕ್ ಆಸ್ಪತ್ರೆಗಳು ನೋಂದಣಿಯಾಗಿದ್ದು, ಈ ಪೈಕಿ 602 ಖಾಸಗಿ ಆಸ್ಪತ್ರೆಗಳು ನೋಂದಣಿ ಮಾಡಿಕೊಂಡಿವೆ.
ಇದನ್ನೂ ಓದಿ: Gold Rate Today: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ..! ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ..!
5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ
ಯಶಸ್ವಿನಿ ಕಾರ್ಡ್ ಹೊಂದಿರುವ ಫಲಾನುಭವಿಗಳು ಗರಿಷ್ಠ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದು. ಈ ಯೋಜನೆಯಡಿ ವ್ಯಕ್ತಿಯು ನೋಂದಣಿ ಮಾಡಿಕೊಂಡಿರುವ ನೆಟ್‌ವರ್ಕ್ ಆಸ್ಪತ್ರೆಗಳಿಗೆ ನೇರವಾಗಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. ಇದರಿಂದ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ಸುಲಭವಾಗಿ ದೊರೆಯಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.