ಪಡಿತರ ಚೀಟಿ ನಿಯಮ: ದೇಶಾದ್ಯಂತ ಸುಮಾರು 15 ಕೋಟಿ ಪಡಿತರ ಚೀಟಿದಾರರಿದ್ದಾರೆ. ಈ 15 ಕೋಟಿ ಜನರಲ್ಲಿ ನೀವೂ ಒಬ್ಬರಾಗಿದ್ದರೆ ಪಡಿತರ ಚೀಟಿದಾರರಿಗೆ ಸಂಬಂಧಿಸಿದ ಈ ಸುದ್ದಿಯನ್ನು ನೀವು ಓದಲೇಬೇಕು. 2020 ರಲ್ಲಿ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಸರ್ಕಾರವು ಬಡವರಿಗೆ ಉಚಿತ ಪಡಿತರ ಯೋಜನೆಯನ್ನು ಪ್ರಾರಂಭಿಸಿತು. ಕೇಂದ್ರದ ಈ ಯೋಜನೆ ಸೆಪ್ಟೆಂಬರ್‌ನಲ್ಲಿ ಪೂರ್ಣಗೊಳ್ಳಲಿದೆ.  


COMMERCIAL BREAK
SCROLL TO CONTINUE READING

ವಾಸ್ತವವಾಗಿ, ಸರ್ಕಾರವು ಪಡಿತರ ಚೀಟಿದಾರರಿಗೆ ಸಂಬಂಧಿಸಿದ ನಿಯಮಗಳನ್ನು ಕಾಲಕಾಲಕ್ಕೆ ಬದಲಾಯಿಸುತ್ತಲೇ ಇರುತ್ತದೆ. ಅನರ್ಹರೂ ಕೂಡ ಸರ್ಕಾರದ  ಉಚಿತ ಪಡಿತರ ಯೋಜನೆಯ ಲಾಭ ಪಡೆಯುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ. ಹಾಗಾಗಿ, ಪಡಿತರ ಚೀಟಿದಾರರು ಕೆವೈಸಿ ಪೂರ್ಣಗೊಳಿಸುವಂತೆ ಸರ್ಕಾರ ಮನವಿ ಮಾಡುತ್ತಿದೆ. ಕೆವೈಸಿ ಪೂರ್ಣಗೊಳಿಸದ ಮತ್ತು ಅರ್ಹರಲ್ಲದವರಿಗೆ ಈ ಯೋಜನೆಯ ಲಾಭಗಳು ಇನ್ನು ಮುಂದೆ ಲಭ್ಯವಾಗುವುದಿಲ್ಲ. 


ಇದನ್ನೂ ಓದಿ- UPI payments : UPI ಹಣ ಪಾವತಿ ಮಾಡುವ ಮುನ್ನ ನೆನಪಿರಲಿ 5 ವಿಷಯಗಳು!


ಒಂದೊಮ್ಮೆ ನೀವು ಸರ್ಕಾರದ ಉಚಿತ ಪಡಿತರ ಯೋಜನೆಯ ಲಾಭ ಪಡೆಯಲು ಅರ್ಹರಲ್ಲದವರಾಗಿದ್ದರೂ ಇದರ ಪ್ರಯೋಜನವನ್ನು ಪಡೆಯುತ್ತಿದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. 


ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ಸಹ ಪಡಿತರ ಚೀಟಿಗೆ ಸಂಬಂಧಿಸಿದ ನಿಯಮಗಳ ಬಗ್ಗೆ ತಿಳಿದಿರುವುದು ಅವಶ್ಯಕ. ನೀವು ತಪ್ಪಾಗಿ ಸರ್ಕಾರದ ಪಡಿತರ ಯೋಜನೆಯ ಲಾಭವನ್ನು ಪಡೆಯುತ್ತಿದ್ದರೆ, ದೂರಿನ ಮೇರೆಗೆ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಬಹುದು. ತನಿಖೆಯಲ್ಲಿ ದೂರು ನಿಜವೆಂದು ಕಂಡುಬಂದರೆ, ನಿಮ್ಮ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬಹುದು. 


ಇದನ್ನೂ ಓದಿ- Post Office ಈ ಯೋಜನೆಯಲ್ಲಿ 250 ಹೂಡಿಕೆ ಮಾಡಿ ಭರ್ಜರಿ ಲಾಭ ಪಡೆಯಿರಿ!


ಪಡಿತರ ಚೀಟಿಗೆ ಸಂಬಂಧಿಸಿದ ಈ ನಿಯಮಗಳು ನಿಮಗೂ ತಿಳಿದಿರಲಿ:
ಪಡಿತರ ಚೀಟಿದಾರನು ತನ್ನ ಸ್ವಂತ ಗಳಿಕೆಯಿಂದ 100 ಚದರ ಮೀಟರ್ ವಿಸ್ತೀರ್ಣದ ಪ್ಲಾಟ್/ಫ್ಲಾಟ್ ಅಥವಾ ಮನೆ ಹೊಂದಿದ್ದರೆ, ನಾಲ್ಕು ಚಕ್ರದ ವಾಹನ/ಟ್ರಾಕ್ಟರ್, ಶಸ್ತ್ರಾಸ್ತ್ರ ಪರವಾನಗಿ, ಗ್ರಾಮೀಣ ಪ್ರದೇಶದಲ್ಲಿ ಎರಡು ಲಕ್ಷ ಮತ್ತು ನಗರದಲ್ಲಿ ವಾರ್ಷಿಕ 3 ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿದ್ದರೆ ಅಂತಹ ಜನರು ಸರ್ಕಾರದ ಉಚಿತ ಪಡಿತರ ಯೋಜನೆಯ ಲಾಭ ಪಡೆಯಲು ಅರ್ಹರಾಗಿರುವುದಿಲ್ಲ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.