ವಿಸ್ಟ್ರಾನ್ ನಿಂದ ₹1,500 ಕೋಟಿ ಹೂಡಿಕೆ: ರಾಜ್ಯಕ್ಕೆ ಬರಲಿದೆ ಪ್ರಪ್ರಥಮ ಲ್ಯಾಪ್-ಟಾಪ್ ತಯಾರಿಕಾ ಘಟಕ

ತೈವಾನ್ ಮೂಲದ ಜಗದ್ವಿಖ್ಯಾತ ಕಂಪನಿ #ವಿಸ್ಟ್ರಾನ್, ರಾಜ್ಯದಲ್ಲಿ 1,500 ಕೋಟಿ ರೂ. ಹೂಡಿಕೆಯೊಂದಿಗೆ ತನ್ನ ಲ್ಯಾಪ್-ಟಾಪ್ ಉತ್ಪಾದನಾ ಘಟಕವನ್ನು ಆರಂಭಿಸಲಿದೆ.

Written by - Manjunath N | Last Updated : Feb 1, 2024, 03:34 PM IST
  • ವಿಸ್ಟ್ರಾನ್ ಕಂಪನಿಯು ಈಗಾಗಲೇ ಕೋಲಾರದಲ್ಲಿ ತನ್ನ ಘಟಕವನ್ನು ಹೊಂದಿದ್ದು, ನೂತನ ಯೋಜನೆಗಾಗಿ 32 ಎಕರೆ ಜಮೀನು ಕೇಳಿದೆ.
  • ಈ ಹೂಡಿಕೆಯ ಮೂಲಕ ರಾಜ್ಯದಲ್ಲಿ ಪ್ರಪ್ರಥಮ ಲ್ಯಾಪ್-ಟಾಪ್ ತಯಾರಿಕಾ ಘಟಕವೂ ಬರುತ್ತಿದ್ದು,
  • 2026ರ ಜನವರಿ ವೇಳೆಗೆ ಉತ್ಪಾದನಾ ಚಟುವಟಿಕೆ ಆರಂಭವಾಗಲಿದೆ. 3,000ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.
ವಿಸ್ಟ್ರಾನ್ ನಿಂದ ₹1,500 ಕೋಟಿ ಹೂಡಿಕೆ: ರಾಜ್ಯಕ್ಕೆ ಬರಲಿದೆ ಪ್ರಪ್ರಥಮ ಲ್ಯಾಪ್-ಟಾಪ್ ತಯಾರಿಕಾ ಘಟಕ title=

ಬೆಂಗಳೂರು: ತೈವಾನ್ ಮೂಲದ ಜಗದ್ವಿಖ್ಯಾತ ಕಂಪನಿ #ವಿಸ್ಟ್ರಾನ್, ರಾಜ್ಯದಲ್ಲಿ 1,500 ಕೋಟಿ ರೂ. ಹೂಡಿಕೆಯೊಂದಿಗೆ ತನ್ನ ಲ್ಯಾಪ್-ಟಾಪ್ ಉತ್ಪಾದನಾ ಘಟಕವನ್ನು ಆರಂಭಿಸಲಿದೆ.

ಈ ಸಂಬಂಧ ರಾಜ್ಯ ಸರಕಾರದೊಂದಿಗೆ ಬುಧವಾರ ಅಧಿಕೃತವಾಗಿ ಒಡಂಬಡಿಕೆಗೆ ಅಂಕಿತ ಹಾಕಿದೆ. ರಾಜ್ಯದ ಪರವಾಗಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಯವರಾದ ಶ್ರೀ ಸೆಲ್ವಕುಮಾರ್ ಮತ್ತು ವಿಸ್ಟ್ರಾನ್ ಕಂಪನಿಯ ಅಧ್ಯಕ್ಷರಾದ ಶ್ರೀ ಅಲೆಕ್ ಲಾಯ್ ಅವರು ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಿದರು.

ವಿಸ್ಟ್ರಾನ್ ಕಂಪನಿಯು ಈಗಾಗಲೇ ಕೋಲಾರದಲ್ಲಿ ತನ್ನ ಘಟಕವನ್ನು ಹೊಂದಿದ್ದು, ನೂತನ ಯೋಜನೆಗಾಗಿ 32 ಎಕರೆ ಜಮೀನು ಕೇಳಿದೆ.ಈ ಹೂಡಿಕೆಯ ಮೂಲಕ ರಾಜ್ಯದಲ್ಲಿ ಪ್ರಪ್ರಥಮ ಲ್ಯಾಪ್-ಟಾಪ್ ತಯಾರಿಕಾ ಘಟಕವೂ ಬರುತ್ತಿದ್ದು, 2026ರ ಜನವರಿ ವೇಳೆಗೆ ಉತ್ಪಾದನಾ ಚಟುವಟಿಕೆ ಆರಂಭವಾಗಲಿದೆ. 3,000ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.

ಈ ಕುರಿತಾಗಿ ಪ್ರತಿಕ್ರಿಯಿಸಿರುವ ಸಚಿವ ಎಂ.ಬಿ.ಪಾಟೀಲ್ ನಮ್ಮಸರಕಾರ ವು ಕೈಗಾರಿಕೆ ಮತ್ತು ಹೂಡಿಕೆಗಳ ಪರವಾಗಿದ್ದು, ಉದ್ಯಮಸ್ನೇಹಿ ನೀತಿಗಳನ್ನು ಹೊಂದಿದೆ. ಜೊತೆಗೆ ಕಾಲಕಾಲಕ್ಕೆ ಹಲವು ಉಪಯುಕ್ತ ಉಪಕ್ರಮಗಳನ್ನು ಕೈಗೊಳ್ಳುತ್ತಿದೆ. ಬೆಂಗಳೂರಿನ ಜತೆಗೆ ರಾಜ್ಯದ ಉಳಿದ ಭಾಗಗಳಲ್ಲೂ ಆಧುನಿಕ ಉದ್ಯಮಗಳು ನೆಲೆಯೂರುವಂತೆ ಮಾಡಲು ಆದ್ಯತೆ ನೀಡುತ್ತಿದೆ ಎಂದು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News