ಸರ್ಕಾರದಿಂದ 15 ಸಾವಿರ ಶಾಲಾ ಶಿಕ್ಷಕ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ!
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ.
ಬೆಂಗಳೂರು : ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ.
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 2022 ರ ಮಾರ್ಚ್ /ಏಪ್ರಿಲ್ ತಿಂಗಳಲ್ಲಿ ಅರ್ಜಿ ಸ್ವೀಕಾರ ಮಾಡಿತ್ತು. ಹಾಗೂ ಮೇ 21, 22 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು. ಈ ನೇಮಕ ಪ್ರಕ್ರಿಯೆಯ ಗಣಕೀಕೃತ ಮೌಲ್ಯಮಾಪನ ಕಾರ್ಯ ಮುಗಿಸಿದ್ದು ತಾತ್ಕಾಲಿಕ ಆಯ್ಕೆಪಟ್ಟಿ ನೀಡಲಾಗಿದೆ.
ಇದನ್ನೂ ಓದಿ : Basavaraj Bommai : 'ಗಣೇಶೋತ್ಸವ ಮುಗಿದ ಮೇಲೆ ಜನೋತ್ಸವ ಮಾಡಲು ನಿರ್ಧಾರ'
ಪ್ರಸ್ತುತ 1:2 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. 1:1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸೆಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ ಪ್ರಕಟಿಸಲಾಗುತ್ತದೆ. 1:1 ಮುಖ್ಯ / ಅಂತಿಮ ಆಯ್ಕೆಪಟ್ಟಿಯನ್ನು ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಫಲಿತಾಂಶದ ಲಿಂಕ್ ಸಹ ಲಭ್ಯ
ಮೇ 21, 22, ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ವೈಯಕ್ತಿಕ ಅಂಕಗಳನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ಕೆಳಗಿನ ಲಿಂಕ್ ಅನ್ನು ರಿಸಲ್ಟ್ ಗಾಗಿ https://www.schooleducation.kar.nic.in/index.html ಕ್ಲಿಕ್ ಮಾಡಬೇಕು ಎಂದು ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.
ಇದನ್ನೂ ಓದಿ : BS Yediyurappa : 'ದಕ್ಷಿಣ ರಾಜ್ಯಗಳನ್ನು ನೋಡಿಕೊಳ್ಳಬೇಕೆಂದು ಪಿಎಂ ಮೋದಿ ಹೇಳಿದ್ದಾರೆ'
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.