ಇನ್ನೊಂದು ವಾರದಲ್ಲಿ 3,500 ಪೊಲೀಸ್ ಕಾನ್ಸ್ಟೇಬಲ್ ನೇಮಕ: ಗೃಹ ಸಚಿವ ಡಾ.ಜಿ.ಪರಮೇಶ್ವರ್
Police Constables Recruitment: ಸೋಷಿಯಲ್ ಮೀಡಿಯಾದಲ್ಲಿ ಯಾರೋ ಒಂದು ಪೋಸ್ಟ್ ಮಾಡಿದ್ರೆ ಆ ಪೋಸ್ಟ್ ಒಂದು ಸಮುದಾಯವನ್ನು ಕೆರಳಿಸುವ ರೀತಿಯಿದ್ದರೆ ಅಂತಹ ಪೋಸ್ಟ್‌ಗಳನ್ನು ನಿಯಂತ್ರಣ ಮಾಡುವುದಕ್ಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ತುಮಕೂರು: ರಾಜ್ಯದಲ್ಲಿ 15 ಸಾವಿರ ಪೊಲೀಸರ ಹುದ್ದೆಗಳು ಖಾಲಿ ಇವೆ. ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈಗಾಗಲೇ ಪೊಲೀಸರ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದ್ದೇವೆ’ ಎಂದು ತಿಳಿಸಿದರು.
ರಾಜ್ಯದಲ್ಲಿ ಸೈಬರ್ ಕ್ರೈಂ ಪ್ರಕರಣಗಳ ಹಿನ್ನೆಲೆ ಪ್ರಮುಖ ಗಮನ ನೀಡಿದ್ದೇವೆ. ಸೋಷಿಯಲ್ ಮೀಡಿಯಾದಲ್ಲಿ ಯಾರೋ ಒಂದು ಪೋಸ್ಟ್ ಮಾಡಿದ್ರೆ ಆ ಪೋಸ್ಟ್ ಒಂದು ಸಮುದಾಯವನ್ನು ಕೆರಳಿಸುವ ರೀತಿಯಿದ್ದರೆ ಅಂತಹ ಪೋಸ್ಟ್‌ಗಳನ್ನು ನಿಯಂತ್ರಣ ಮಾಡುವುದಕ್ಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ: ಇಂದಿರಾ ಕ್ಯಾಂಟೀನ್ ಗೆ ಹೊಸ ಸ್ಪರ್ಶ ನೀಡೋಕೆ ಮುಂದಾದ ಸಿದ್ದರಾಮಯ್ಯ ಸರ್ಕಾರ
ಸ್ಮಾರ್ಟ್ ಸಿಟಿ ಯೋಜನೆಯಡಿ ತುಮಕೂರಿಗೆ 1 ಸಾವಿರ ಕೋಟಿ ರೂ. ಮಂಜೂರು ಮಾಡಲಾಗಿದೆ. ಕೇಂದ್ರದಿಂದ ಶೇ.50 ಮತ್ತು ರಾಜ್ಯ ಸರ್ಕಾರದಿಂದ ಶೇ.50ರಷ್ಟು ಅನುದಾನ ನೀಡಲಾಗಿದೆ. ಈಗಾಗಲೇ ಕೇಂದ್ರ ಸರ್ಕಾರ ಶೇ.45ರಷ್ಟು ಹಣ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ 443 ಕೋಟಿ ರೂ. ಅನುದಾನ ಮಂಜೂರು ಮಾಡಿದೆ ಎಂದು ಇದೇ ವೇಳೆ ಅವರು ತಿಳಿಸಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಸ್ಮಾರ್ಟ್ ಬಸ್ ನಿಲ್ದಾಣದ ಕಾಮಗಾರಿ ಮುಂದಿನ ನವೆಂಬರ್ ತಿಂಗಳೊಳಗೆ ಪೂರ್ಣಗೊಳ್ಳಬೇಕೆಂದು ಕೆಎಸ್‌ಆರ್‌ಟಿಸಿ ಮತ್ತು ಸ್ಮಾರ್ಟ್ ಸಿಟಿ ಎಂಡಿಗೆ ಪರಮೇಶ್ವರ್ ಸೂಚಿಸಿದರು. ತುಮಕೂರಿನ ಪ್ರವಾಸಿ ಮಂದಿರದಲ್ಲಿ ಸ್ಮಾರ್ಟ್ ಸಿಟಿ, ಟೂಡಾ ಮತ್ತು ಪಿಡಬ್ಲ್ಯೂಡಿ ಇಲಾಖೆಗಳಿಂದ ಕೈಗೊಳ್ಳಲಾದ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಜನರಿಗೆ ಅನುಕೂಲವಾಗುವಂತೆ ವೈಫೈ ಸಂಪರ್ಕ ಸೇರಿದಂತೆ ವಿನೂತನ ತಂತ್ರಜ್ಞಾನ ಆಧಾರಿತ ಸೇವೆಗಳನ್ನು ಬಸ್ ನಿಲ್ದಾಣದಲ್ಲಿ ಅಳವಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಇದನ್ನೂ ಓದಿ: ಹೆಲ್ತ್ ಕಾರ್ಡ್’ಗೆ ಹೊಸ ರೂಪ ನೀಡಲು ಆರೋಗ್ಯ ಇಲಾಖೆ ಸಜ್ಜು
ಸರ್ಕಾರದ ಯಾವುದೇ ಯೋಜನೆಗಳ ಅನುಷ್ಠಾನವನ್ನು ಮುಂದಿನ 50 ವರ್ಷಗಳ ಜನಸಂಖ್ಯೆ ದೃಷ್ಟಿಯಲ್ಲಿಟ್ಟುಕೊಂಡು ರೂಪಿಸಬೇಕು. ಸರ್ಕಾರದ ಯೋಜನೆಗಳು ಜನರಿಗೆ ಸಂಪೂರ್ಣವಾಗಿ ಉಪಯೋಗವಾಗಬೇಕು. ಸ್ಮಾರ್ಟ್ ಸಿಟಿಯಿಂದ ನಗರದಲ್ಲಿ ನಿರ್ಮಾಣವಾಗಿರುವ ’ಸೆಂಟ್ರಲೈಸ್ಡ್ ಸೆಂಟರ್’ನ್ನು ಕಾಮಗಾರಿ ಪೂರ್ಣಗೊಂಡ ನಂತರ ಪೊಲೀಸ್ ಇಲಾಖೆಗೆ ಹಸ್ತಾಂತರಿಸುವಂತೆ ಸೂಚಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.