AAI Recruitment: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 400 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಜೂ.15ರಂದು ಅರ್ಜಿ ಅಪ್ಲಿಕೇಶನ್ ವಿಂಡೋ ತೆರೆಯಲಿದ್ದು, ಜುಲೈ 14 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Written by - Puttaraj K Alur | Last Updated : Jun 8, 2022, 03:19 PM IST
  • ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 400 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
  • ಭೌತಶಾಸ್ತ್ರ & ಗಣಿತದಲ್ಲಿ ಬಿಎಸ್ಸಿ, ಬಿಇ ಅಥವಾ ಬಿಟೆಕ್​ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
  • ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಜುಲೈ 14, www.aai.aeroಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿರಿ
AAI Recruitment: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 400 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ title=
400 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (Airports Authority of India)ದಲ್ಲಿ ಖಾಲಿ ಇರುವ ಒಟ್ಟು 400 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜ್ಯೂನಿಯರ್​ ಎಕ್ಸಿಕ್ಯೂಟಿವ್​ ಹುದ್ದೆ(Air traffic control)ಗಳ ಭರ್ತಿಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಜೂನ್ 15ರಂದು ಅರ್ಜಿ ಅಪ್ಲಿಕೇಶನ್ ವಿಂಡೋ ತೆರೆಯಲಿದ್ದು, ಜುಲೈ 14 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್​ಲೈನ್ ಹೊರತುಪಡಿಸಿ ಇನ್ನುಳಿದ ಯಾವುದೇ ವಿಧಾನದ ಮೂಲಕ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಜಿಗಾಗಿ AAIನ ಅಧಿಕೃತ ವೆಬ್‍ಸೈಟ್ www.aai.aeroಗೆ ಭೇಟಿ ನೀಡಬೇಕು. ಹುದ್ದೆ ಕುರಿತ ಅಧಿಸೂಚನೆ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಕೆ ಮುಂತಾದ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: SSC Recruitment 2022 : SSC ಯಲ್ಲಿ 797 ಹುದ್ದೆಗಳಿಗೆ ಅರ್ಜಿ ಅಹ್ವಾನ : ಜೂನ್ 13 ಕೊನೆ ದಿನ!

ಹುದ್ದೆಗಳ ವಿವರ ಇಂತಿದೆ:

ಸಂಸ್ಥೆ:- ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI)

ಹುದ್ದೆ:- ಜೂನಿಯರ್ ಎಕ್ಸಿಕ್ಯೂಟಿವ್

ಹುದ್ದೆಗಳ ಸಂಖ್ಯೆ:-   400

ಉದ್ಯೋಗ ಸ್ಥಳ:- ಭಾರತದಾದ್ಯಂತ

ವೇತನ:- 40,000-1,40,000 ರೂ.(ಪ್ರತಿ ತಿಂಗಳಿಗೆ)  

ವಿದ್ಯಾರ್ಹತೆ: ಅರ್ಹ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಭೌತಶಾಸ್ತ್ರ ಮತ್ತು ಗಣಿತದಲ್ಲಿ ಬಿಎಸ್ಸಿ, ಬಿಇ ಅಥವಾ ಬಿಟೆಕ್​ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು  27 ವರ್ಷಗಳು ಮೀರಿರಬಾರದು.

ವಯೋಮಿತಿ ಸಡಿಲಿಕೆ: ಹಿಂದುಳಿದ ವರ್ಗಗಳ  ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾತಿ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು  ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದ್ದು, ಪ.ಜಾತಿ/ಪ.ಪಂಗಡ, ಮಹಿಳಾ ಅಭ್ಯರ್ಥಿಗಳಿಗೆ 81 ರೂ. ಮತ್ತು ಇನ್ನುಳಿದ ಎಲ್ಲಾ ಅಭ್ಯರ್ಥಿಗಳಿಗೆ 1000 ರೂ. ಅರ್ಜಿ ಶುಲ್ಕವಿರುತ್ತದೆ.

ಅರ್ಜಿ ಶುಲ್ಕ ಪಾವತಿ ವಿಧಾನ: ಆನ್‌ಲೈನ್ ಮೂಲಕವೇ ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ: ಆನ್‌ಲೈನ್ ಪರೀಕ್ಷೆ, ದಾಖಲೆಗಳ ಪರಿಶೀಲನೆ, ಧ್ವನಿ ಪರೀಕ್ಷೆ ಮತ್ತು ಅಭ್ಯರ್ಥಿಯ ಹಿನ್ನೆಲೆ ಪರಿಶೀಲನೆ ಇರುತ್ತದೆ.

ಪ್ರಮುಖ ದಿನಾಂಕಗಳು: ಜೂನ್​ 15ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಜುಲೈ 14 ಅರ್ಜಿ ಸಲ್ಲಿಸಲು ಕೊನೆ ದಿನಾಂಕವಾಗಿರುತ್ತದೆ.

ಒಟ್ಟು 400 ಹುದ್ದೆಗಳು: 163 UR, 40 EWS, 108 OBC, 59 SC, 30 ST ಮತ್ತು 4 PWD ಸೀಟುಗಳು ಸೇರಿದಂತೆ ಒಟ್ಟು 400 ಹುದ್ದೆಗಳು ಖಾಲಿ ಇವೆ. ಹೆಚ್ಚಿನ ಮಾಹಿತಿಗೆ www.aai.aero ಗೆ ಭೇಟಿ ನೀಡಿ ಪರಿಶೀಲಿಸಬೇಕು.

ಇದನ್ನೂ ಓದಿ: ಉದ್ಯೋಗಕಾಂಕ್ಷಿಗಳೆ ಗಮನಿಸಿ : IBPS ನಿಂದ 8106 ಹುದ್ದೆಗೆ ಅರ್ಜಿ ಆಹ್ವಾನ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News